AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಹುಟ್ಟಿದೆ ವದಂತಿ

ಮುಂಬೈನ ಕೆಫೆಯೊಂದರಲ್ಲಿ ನಟಿ ಮೃಣಾಲ್ ಠಾಕೂರ್ ಹಾಗೂ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ ಇವರಿಬ್ಬರ ಡೇಟಿಂಗ್ ವದಂತಿಗಳು ಇಂಟರ್ನೆಟ್‌ನಲ್ಲಿ ಜೋರಾಗಿವೆ. ಆದರೆ, ಕೆಲವರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸುಖಾಸುಮ್ಮನೆ ವದಂತಿ ಸೃಷ್ಟಿ ಮಾಡೋದು ಎಷ್ಟು ಸರಿ ಎಂಬ ಪ್ರಶ್ನೆ ಎತ್ತಿದ್ದಾರೆ.

ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಹುಟ್ಟಿದೆ ವದಂತಿ
ಮೃಣಾಲ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 7:00 AM

Share

ಮುಖ್ಯಾಂಶಗಳು

  • ಮುಂಬೈ ಕೆಫೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸ್ಟಾರ್ ಜೋಡಿ
  • ವಯಸ್ಸಿನ ಅಂತರದ ಬಗ್ಗೆ ನೆಟ್ಟಿಗರಲ್ಲಿ ಚರ್ಚೆ
  • ಜಾಹೀರಾತು ಶೂಟಿಂಗ್ ಅಥವಾ ಹೊಸ ಪ್ರೇಮ ಕಥೆ?

ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈಕೊಟ್ಟಂತೆ ಇದೆ. ಅವರ ಡೇಟಿಂಗ್ ವಿಷಯದಲ್ಲಿ ಸಾಕಷ್ಟು ವದಂತಿಗಳು ಹಬ್ಬುತ್ತಲೇ ಇವೆ. ಈ ಮೊದಲು ಅವರು ಧನುಷ್ ಜೊತೆ ಸುತ್ತುತ್ತಿದ್ದಾರೆ ಎನ್ನಲಾಗಿತ್ತು. ಅವರು ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಯಿತು. ಆ ಬಳಿಕ ಇಬ್ಬರ ಪ್ರೀತಿ ಬ್ರೇಕಪ್​​ನಲ್ಲಿ ಕೊನೆ ಆಯಿತು. ಈಗ ಅವರು ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿದೆ.

ಇತ್ತೀಚೆಗೆ ವೈರಲ್ ಆದ ವಿಡಿಯೋ ಒಂದರಿಂದ ಈ ಚರ್ಚೆ ಶುರುವಾಗಿದೆ. ಇವರಿಬ್ಬರೂ ಮುಂಬೈನ ಕೆಫೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಭಿಮಾನಿಗಳು ಇವರ ನಡುವೆ ಪ್ರೀತಿ ಇರಬಹುದು ಎಂದು ಊಹಿಸುತ್ತಿದ್ದಾರೆ.

ಮೃಣಾಲ್ ಠಾಕೂರ್ ಅವರಿಗೆ ಈಗ 33 ವರ್ಷ ವಯಸ್ಸು. ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಅವರಿಗೆ 24 ವರ್ಷ ವಯಸ್ಸು. ಇವರಿಬ್ಬರೂ ಬಾಂದ್ರಾ ವೆಸ್ಟ್‌ನ ಬುಜೀ ಕೆಫೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿಡಿಯೋದಲ್ಲಿ ಯಶಸ್ವಿ ಮೊದಲು ಕೆಫೆಯಿಂದ ಹೊರಗೆ ಬಂದಿದ್ದಾರೆ. ಮೃಣಾಲ್ ಕೆಫೆಯ ಒಳಗಡೆಯೇ ಉಳಿದುಕೊಂಡಿದ್ದಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಇವರಿಬ್ಬರ ನಡುವೆ ಪ್ರೀತಿ ಪ್ರೇಮ ಇರಬಹುದು ಎನ್ನುತ್ತಿದ್ದಾರೆ. ಆದರೆ ಇನ್ನು ಕೆಲವರು ಇದು ಕೇವಲ ಒಂದು ಜಾಹೀರಾತು ಶೂಟಿಂಗ್ ಇರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಈ ರೀತಿ ಸುಖಾ ಸುಮ್ಮನೆ ಸುದ್ದಿ ಸೃಷ್ಟಿ ಮಾಡುವವರ ವಿರುದ್ಧ ಕಿಡಿಕಾರಿದ್ದಾರೆ. ಇವರಿಬ್ಬರ ನಡುವಿನ 11 ವರ್ಷಗಳ ವಯಸ್ಸಿನ ವ್ಯತ್ಯಾಸದ ಬಗ್ಗೆಯೂ ಚರ್ಚೆಯಾಗುತ್ತಿದೆ. ಆದರೆ ಈ ವದಂತಿಗಳ ಬಗ್ಗೆ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಭಾರತದ ಸ್ಟಾರ್ ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?

ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಭಾರತ ತಂಡದ ಉದಯೋನ್ಮುಖ ತಾರೆಯಾಗಿದ್ದಾರೆ. ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುತ್ತಾರೆ. ಇತ್ತೀಚೆಗೆ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಿದ್ದರು. ಇನ್ನು ನಟಿ ಮೃಣಾಲ್ ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ