ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್

ಆರ್ಯನ್ ಖಾನ್ ಅವರನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಲಾಯಿತು. ಆದರೆ, ಅವರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಪಾಸ್​ಪೋರ್ಟ್ ಇಲ್ಲದ ಕಾರಣ ವಿದೇಶಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.

ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
ಆರ್ಯನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 14, 2022 | 3:48 PM

ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್​ (Aryan Khan) ಅವರನ್ನು ಸುತ್ತುಕೊಂಡಿದ್ದ ಕಷ್ಟಗಳೆಲ್ಲ ಒಂದೊಂದಾಗಿಯೇ ಪರಿಹಾರ ಆಗುತ್ತಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಅವರು ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆಗಿದ್ದರು. ಕೆಲ ಕಾಲ ಅವರು ಜೈಲಿನಲ್ಲಿದ್ದರು. ಈ ಸಂದರ್ಭದಲ್ಲಿ ಅವರ ಪಾಸ್​ಪೋರ್ಟ್​ಅನ್ನು ಸೀಜ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ರಿಲೀಫ್ ಸಿಕ್ಕರೂ ಪಾಸ್​ಪೋರ್ಟ್ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಎನ್​​ಡಿಪಿಎಎಸ್​ ಕೋರ್ಟ್ ಮೊರೆ ಹೋಗಿದ್ದರು. ಈಗ ಅವರಿಗೆ ಪಾಸ್​ಪೋರ್ಟ್ ನೀಡಲು ಕೋರ್ಟ್ ಆದೇಶ ಹೊರಡಿಸಿದೆ.

ಆರ್ಯನ್ ಖಾನ್ ಅವರನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಲಾಯಿತು. ಆದರೆ, ಅವರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಪಾಸ್​ಪೋರ್ಟ್ ಇಲ್ಲದ ಕಾರಣ ವಿದೇಶಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರು ಎನ್​​ಡಿಪಿಎಎಸ್​ ಕೋರ್ಟ್ ಮೊರೆ ಹೋಗಿದ್ದರು.

‘ವಿಚಾರಣೆ ವೇಳೆ ಅರ್ಜಿದಾರರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರ ಸಿಕ್ಕಿಲ್ಲ. ಹೀಗಾಗಿ, ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ, ಅರ್ಜಿದಾರರ ಜಾಮೀನು ಷರತ್ತುಗಳನ್ನು ರದ್ದು ಮಾಡಬೇಕು ಮತ್ತು ಅವರ ಪಾಸ್​ಪೋರ್ಟ್ ಹಿಂದಿರುಗಿ ಕೊಡಬೇಕು’ ಎಂದು ನ್ಯಾಯಾಧೀಶ ವಿವಿ ಪಾಟಿಲ್ ಹೇಳಿದ್ದಾರೆ.

ಇದನ್ನೂ ಓದಿ
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ
Image
ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

2021ರ ಅಕ್ಟೋಬರ್ 2ರಂದು ರಾತ್ರಿ ಆರ್ಯನ್​ ಖಾನ್ ಅವರನ್ನು ಕ್ರ್ಯೂಸ್​​ಶಿಪ್​ನಲ್ಲಿ ಅರೆಸ್ಟ್ ಮಾಡಲಾಯಿತು. ನಂತರ ಅವರನ್ನು ವಶಕ್ಕೆ ಪಡೆಯಲಾಯಿತು. 28 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಯಿತು. ಆ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು.  ಈ ವರ್ಷ ಮೇ ತಿಂಗಳಲ್ಲಿ ಆರ್ಯನ್​ ಖಾನ್​ಗೆ ಕ್ಲೀನ್ ಚಿಟ್ ಸಿಕ್ಕಿತು.

ಇದನ್ನೂ ಓದಿ: ಡ್ರಗ್ಸ್​ ಪ್ರಕರಣದಿಂದ ಮುಕ್ತಿ ಸಿಕ್ಕ ಬೆನ್ನಲ್ಲೇ ಅಮೇರಿಕಾಗೆ ತೆರಳಲಿದ್ದಾರಾ ಆರ್ಯನ್ ಖಾನ್?

ಸಾಮಾನ್ಯವಾಗಿ ಸ್ಟಾರ್​​ಗಳ ಮಕ್ಕಳು ಹೀರೋ/ಹೀರೋಯಿನ್ ಆಗಲು ಇಷ್ಟಪಡುತ್ತಾರೆ. ಆದರೆ ಆರ್ಯನ್ ಖಾನ್ ಡೈರೆಕ್ಟರ್ ಆಗುವ ಕನಸು ಕಂಡಿದ್ದಾರೆ. ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್​​ಟೇನ್​ಮೆಂಟ್ ಮೂಲಕ ಮೂಡಿ ಬರುತ್ತಿರುವ ವೆಬ್​ ಸೀರಿಸ್​ಗೆ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸೀರಿಸ್​ನಲ್ಲಿ ಯಾರು ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಅಪ್​ಡೇಟ್ ಬರಬೇಕಿದೆ. ಈ ಚಿತ್ರದ ಶೂಟಿಂಗ್​ಗೆ ಅವರು ವಿದೇಶಕ್ಕೆ ತೆರಳಲಿದ್ದಾರೆ ಎನ್ನುವ ಮಾತು ಕೂಡ ಇದೆ. ಈಗ ಅವರಿಗೆ ಪಾಸ್​ಪೋರ್ಟ್ ಸಿಕ್ಕಿರುವುದರಿಂದ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ