AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟಿಯ ತಂಗಿ ಜತೆ ಆರ್ಯನ್ ಖಾನ್ ಸುತ್ತಾಟ; ಪಾರ್ಟಿ ಫೋಟೋ ವೈರಲ್

ಕತ್ರಿನಾ ಕೈಫ್ ಸಹೋದರಿ ಇಸಾಬೆಲ್ಲೆ ಜತೆ ಆರ್ಯನ್ ಖಾನ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸ್ಟಾರ್ ನಟಿಯ ತಂಗಿ ಜತೆ ಆರ್ಯನ್ ಖಾನ್ ಸುತ್ತಾಟ; ಪಾರ್ಟಿ ಫೋಟೋ ವೈರಲ್
ಶ್ರುತಿ-ಆರ್ಯನ್​-ಇಸಾಬೆಲ್ಲೆ
TV9 Web
| Edited By: |

Updated on:Aug 30, 2022 | 6:54 PM

Share

ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ ಅವರ ಬದುಕಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಆರ್ಯನ್ ಖಾನ್ ಅವರು ಅರೆಸ್ಟ್ ಆಗಿದ್ದರು. ಡ್ರಗ್​ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಘಟನೆ ನಡೆದು ವರ್ಷ ಕಳೆಯುತ್ತಾ ಬಂದಿದೆ. ಈ ಘಟನೆಯಿಂದ ಅವರ ಬಾಳಲ್ಲಿ ಹಲವು ಬದಲಾವಣೆ ಆಗಿತ್ತು. ಈಗ ಎಲ್ಲವೂ ಮೊದಲಿನಂತೆ ಆಗಿದೆ. ಹಲವರ ಜತೆ ಆರ್ಯನ್ ಖಾನ್ ಪಾರ್ಟಿ ಮಾಡುತ್ತಿದ್ದಾರೆ. ಈಗ ಆರ್ಯನ್ ಖಾನ್ (Aryan Khan) ಅವರು ಬಾಲಿವುಡ್​ನ ಸ್ಟಾರ್ ನಟಿ ಕತ್ರಿನಾ ಕೈಫ್ ತಂಗಿ ಜತೆ ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಕತ್ರಿನಾ ಕೈಫ್ ಸಹೋದರಿ ಇಸಾಬೆಲ್ಲೆ ಜತೆ ಆರ್ಯನ್ ಖಾನ್ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಶ್ರುತಿ ಚೌಹಾಣ್ ಬರ್ತ್​ಡೇ ಪಾರ್ಟಿಗೆ ಇವರೆಲ್ಲ ಸೇರಿದ್ದರು.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಶಾರುಖ್ ಖಾನ್ ಹಾಗೂ ಕತ್ರಿನಾ ಕೈಫ್ ಒಟ್ಟಾಗಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಈಗ ಕತ್ರಿನಾ ಸಹೋದರಿ ಹಾಗೂ ಆರ್ಯನ್ ಒಟ್ಟಾಗಿ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರ್ಯನ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆರ್ಯನ್ ಖಾನ್ ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದಾಗ ಅನನ್ಯಾ ಪಾಂಡೆ ಅವರಿಗೂ ಸಂಕಷ್ಟ ಎದುರಾಗಿತ್ತು. ಅನನ್ಯಾ ಅವರನ್ನು ವಿಚಾರಣೆ ನಡೆಸಲಾಗಿತ್ತು. ‘ಕಾಫಿ ವಿತ್ ಕರಣ್​ ಸೀಸನ್ 7’ಗೆ ಬಂದಿದ್ದ ಅನನ್ಯಾ ಅವರು ಆರ್ಯನ್ ಖಾನ್ ಜತೆಗಿನ ಫ್ರೆಂಡ್​ಶಿಪ್ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್

ಆರ್ಯನ್ ಖಾನ್ ಹೀರೋ ಆಗಿ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅವರು ವೆಬ್​ ಸೀರಿಸ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್​ ಎಂಟರ್​ಟೇನ್​ಮೆಂಟ್ ಬಂಡವಾಳ ಹೂಡುತ್ತಿದೆ ಎಂದು ವರದಿ ಆಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

Published On - 6:50 pm, Tue, 30 August 22

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ