AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಸ್ಥಿತಿ ಗಂಭೀರ

Asha Bhosle:ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಸ್ಥಿತಿ ಗಂಭೀರ
Asha Bhosle1
ಮಂಜುನಾಥ ಸಿ.
|

Updated on:Apr 11, 2026 | 11:17 PM

Share

ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

ಆಶಾ ಭೋಸ್ಲೆ ಅವರು ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು, ಅಕ್ಕನಂತೆಯೇ ಅದ್ಭುತ ಗಾಯಕಿ ಆಗಿದ್ದಾರೆ. ಎಂಟು ದಶಕಗಳಿಂದಲೂ ಗಾಯಕ ಕ್ಷೇತ್ರದಲ್ಲಿರುವ ಆಶಾ ಭೋಸ್ಲೆ ಈ ವರೆಗೆ ಸಾವಿರಾರು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಹಲವಾರು ಲೈವ್ ಶೋಗಳನ್ನು ನೀಡಿದ್ದಾರೆ. ಹಲವು ಸಿಂಗಿಂಗ್ ರಿಯಾಲಿಟಿ ಶೋಗಳಿಗೆ ಜಡ್ಜ್ ಸಹ ಆಗಿದ್ದಾರೆ. ಆಶಾ ಭೋಸ್ಲೆ ಅವರು ತಮ್ಮ 90ನೇ ವಯಸ್ಸಿನಲ್ಲೂ ಸಹ ಲೈವ್ ಸಿಂಗಿಂಗ್ ಶೋಗಳನ್ನು ನೀಡುತ್ತಿದ್ದರು. ಮೂರು-ನಾಲ್ಕು ಗಂಟೆ ಸ್ಟೇಜ್​ ಮೇಲೆ ನಿಂತು ಹಾಡುತ್ತಿದ್ದರು. ಆದರೆ ಕಳೆದ ಕೆಲ ತಿಂಗಳುಗಳಿಂದ ಅವರಿಗೆ ವಯೋಸಹಜ ಅನಾರೋಗ್ಯ ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ.

ಆಶಾ ಭೋಸ್ಲೆ ಅವರು ಹಿಂದಿ, ಕನ್ನಡ, ಮರಾಠಿ, ತಮಿಳು, ತೆಲುಗು, ಮಲಯಾಳಂ, ಅಸ್ಸಾಮೀಸ್, ಭೋಜ್​​ಪುರಿ, ನೇಪಾಳಿ, ಬೆಂಗಾಲಿ ಇನ್ನೂ ಹಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಗಾಯನಕ್ಕೆ ಎರಡು ರಾಷ್ಟ್ರಪ್ರಶಸ್ತಿ ಸೇರಿದಂತೆ, ಏಷ್ಯಾ ನೈಟಿಂಗೇಲ್, ಲತಾ ಮಂಗೇಶ್ಕರ್ ಪ್ರಶಸ್ತಿ, ಹಲವಾರು ಫಿಲಂ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆಶಾ ಅವರ ಹಾಡುಗಳು ಮೂರು ಬಾರಿ ಪ್ರತಿಷ್ಠಿತ ಗ್ರಾಮಿಗೆ ನಾಮಿನೇಟ್ ಸಹ ಆಗಿದ್ದವು.

ಆಶಾ ಭೋಸ್ಲೆ ಅವರು ಕನ್ನಡದಲ್ಲಿ ಮೂರು ಹಾಡುಗಳನ್ನು ಹಾಡಿದ್ದಾರೆ. 1967ರಲ್ಲಿ ಬಿಡುಗಡೆ ಆಗಿದ್ದ ‘ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾನಲ್ಲಿ ‘ಏನೋ ಏನೋ’, 1973 ರಲ್ಲಿ ಬಿಡುಗಡೆ ಆದ ‘ದೂರದ ಬೆಟ್ಟ’ ಸಿನಿಮಾದ ‘ಸವಾಲು ಹಾಕಿ ಸೋಲಿಸಿ ಎಲ್ಲರ’, 2010 ರಲ್ಲಿ ‘ಮತ್ತೆ ಮುಂಗಾರು’ ಸಿನಿಮಾದ ‘ಹೇಳದೆ ಕಾರಣ’ ಹಾಡುಗಳನ್ನು ಆಶಾ ಭೋಸ್ಲೆ ಅವರು ಕನ್ನಡದಲ್ಲಿ ಹಾಡಿದ್ದಾರೆ. ಕರ್ನಾಟಕದಲ್ಲಿ ಸಾಕಷ್ಟು ಬಾರಿ ಲೈವ್ ಶೋಗಳನ್ನು ಸಹ ಅವರು ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Sat, 11 April 26

Follow Us