ಟಾಲಿವುಡ್​​ನಲ್ಲಿ ಮತ್ತೊಂದು ಆಫರ್​​ ಗಿಟ್ಟಿಸಿಕೊಂಡ ನಟಿ ಆಶಿಕಾ ರಂಗನಾಥ್

ಟಾಲಿವುಡ್‌ನಲ್ಲಿ ಸ್ಯಾಂಡಲ್‌ವುಡ್ ಬೆಡಗಿ ಆಶಿಕಾ ರಂಗನಾಥ್ ಜಾದೂ ಮುಂದುವರಿದಿದೆ. ನಟ ಶ್ರೀವಿಷ್ಣು ಅವರ ಹೊಸ ಸಿನಿಮಾಗೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಸನ್ನಿ ಸಂಜಯ್ ನಿರ್ದೇಶಿಸುತ್ತಿದ್ದು, ಈಗಾಗಲೇ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಟಾಲಿವುಡ್​​ನಲ್ಲಿ ಮತ್ತೊಂದು ಆಫರ್​​ ಗಿಟ್ಟಿಸಿಕೊಂಡ ನಟಿ ಆಶಿಕಾ ರಂಗನಾಥ್
ಆಶಿಕಾ

Updated on: Sep 07, 2026 | 11:38 AM

ಮುಖ್ಯಾಂಶಗಳು

  • ಟಾಲಿವುಡ್‌ನಲ್ಲಿ ಆಶಿಕಾ ರಂಗನಾಥ್ ಹವಾ
  • ಶ್ರೀವಿಷ್ಣುಗೆ ಜೋಡಿಯಾದ ಕನ್ನಡತಿ
  • ಸಿತಾರಾ ಬ್ಯಾನರ್‌ನಲ್ಲಿ ಹೊಸ ಸಿನಿಮಾ 

ಸ್ಯಾಂಡಲ್‌ವುಡ್ ಬ್ಯೂಟಿ ಆಶಿಕಾ ರಂಗನಾಥ್ (Ashika Ranganth) ಈಗ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ತೆಲುಗಿನ ಪ್ರತಿಭಾವಂತ ನಟ ಶ್ರೀವಿಷ್ಣು ಅವರ ಹೊಸ ಸಿನಿಮಾಗೆ ಆಶಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ. ಇಬ್ಬರ ಕಾಂಬಿನೇಷನ್ ತೆರೆಮೇಲೆ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆಯಿದ್ದು, ಈ ಜೋಡಿಯ ಹೊಸ ಸಿನಿಮಾ ಸುದ್ದಿ ಈಗ ಟಾಲಿವುಡ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ನಟ ಶ್ರೀವಿಷ್ಣು ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. 2027ರ ಸಂಕ್ರಾಂತಿಗೆ ‘ಕಾಮ್ರೇಡ್ ಕಲ್ಯಾಣ್’ ಸಿನಿಮಾ ಬಿಡುಗಡೆಯಾಗಲಿದೆ. ಇದರ ಬೆನ್ನಲ್ಲೇ ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ಸಂಸ್ಥೆಯ ಜೊತೆ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಹೊಸ ಚಿತ್ರವು ಶ್ರೀವಿಷ್ಣು ಅವರ ವೃತ್ತಿಜೀವನದಲ್ಲಿ ವಿಶೇಷವಾಗಿರಲಿದೆ.

ಈ ಚಿತ್ರಕ್ಕೆ ‘ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ಪ್ರೊಡಕ್ಷನ್ ನಂ. 39’ ಎಂದು ಹಸರಿಡಲಾಗಿದೆ. ‘ಅನಗನಗ’ ಖ್ಯಾತಿಯ ಸನ್ನಿ ಸಂಜಯ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಆರಂಭವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಗ್ಲಿಂಪ್ಸ್ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾ ಯೂಥ್​​ಫುಲ್ ಆಗಿದೆ.

ಈ ಸಿನಿಮಾದಲ್ಲಿ ಶ್ರೀವಿಷ್ಣು ಅವರಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಳ್ಳಲಿದ್ದಾರೆ. ‘ಸರ್ದಾರ್ 2’ ಚಿತ್ರದ ಮೂಲಕ ಸದ್ದು ಮಾಡಿದ್ದ ಆಶಿಕಾ ಈಗ ನಾಯಕಿಯಾಗಿ ಫೈನಲ್ ಆಗಿದ್ದಾರೆ. ಚಿತ್ರತಂಡ ಶೀಘ್ರದಲ್ಲೇ ಈ ವಿಷಯವನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ.

ಈ ಪ್ರಮುಖ ಚಿತ್ರವನ್ನು ನಾಗವಂಶಿ ಅವರು ಪ್ರಸ್ತುತಪಡಿಸುತ್ತಿದ್ದಾರೆ. ಹಾಾರಿಕಾ ಸೂರ್ಯದೇವರ ಅವರು ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಇತರ ಕಲಾವಿದರು ಮತ್ತು ತಾಂತ್ರಿಕ ವರ್ಗದ ಸಂಪೂರ್ಣ ವಿವರಗಳು ಶೀಘ್ರದಲ್ಲೇ ಹೊರಬರಲಿವೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಕಾಲಿರಿಸಿ 10 ವರ್ಷ, ಅಭಿಮಾನಿಗಳೊಟ್ಟಿಗೆ ಸಂಭ್ರಮಿಸಿದ ಆಶಿಕಾ ರಂಗನಾಥ್: ಚಿತ್ರಗಳ ನೋಡಿ

ಆಶಿಕಾ ರಂಗನಾಥ್ ಅವರು ಕನ್ನಡದಲ್ಲಿ ಹಲವು ಸಿನಿಮಾ ಮಾಡಿದ್ದಾರೆ. ಆದರೆ, ಸ್ಟಾರ್ ಹೀರೋಗಳ ಜೊತೆ ನಟಿಸೋ ಅವಕಾಶ ಅವರಿಗೆ ಸಿಕ್ಕಿಲ್ಲ ಎಂಬ ಕೊರಗು ಫ್ಯಾನ್ಸ್​ಗೆ ಇತ್ತು. ಈಗ ಟಾಲಿವುಡ್ ಹಾಗೂ ಕಾಲಿವುಡ್​​ನಲ್ಲಿ ಅವರಿಗೆ ದೊಡ್ಡ ದೊಡ್ಡ ಅವಕಾಶಗಳು ಸಿಗುತ್ತಿವೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:37 am, Mon, 7 September 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us