‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ

ಬಾಲಿವುಡ್ ಯೂಟ್ಯೂಬರ್ ಆಶಿಶ್ ಚಂಚಲಾನಿ, ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. 'ಐ ಲವ್ ಯಶ್' ಎಂದಿರುವ ಅವರು, ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಮಾರ್ಚ್ 19ರಂದು ರಣವೀರ್ ಸಿಂಗ್ ಅವರ 'ಧುರಂಧರ್ 2' ಜೊತೆ 'ಟಾಕ್ಸಿಕ್' ದೊಡ್ಡ ಕ್ಲ್ಯಾಶ್ ಎದುರಿಸುತ್ತಿದ್ದು, ಆಶಿಶ್ ಎರಡೂ ಚಿತ್ರಗಳು ಗೆಲ್ಲಬೇಕು ಎಂದು ಹಾರೈಸಿದ್ದಾರೆ.

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ
ಆಶಿಶ್ ಚಂಚ್ಲಾನಿ

Updated on: Feb 05, 2026 | 9:08 AM

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಮಲಯಾಳಂನ ಗೀತು ಮೋಹನ್​​ದಾಸ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಬಾಲಿವುಡ್ ಯೂಟ್ಯೂಬರ್ ಹಾಗೂ ನಟ ಆಶಿಶ್ ಚಂಚ್ಲಾನಿ ನಿರೀಕ್ಷೆ ಹೊರಹಾಕಿದ್ದಾರೆ. ‘ಐ ಲವ್ ಯಶ್’ ಎಂದು ಅವರು ಪ್ರೀತಿಯಿಂದ ಹೇಳಿಕೊಂಡಿದ್ದಾರೆ.

ಯಶ್ ಅವರು ಭಾರತ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಅವರಿಗೆ ಅಭಿಮಾನಿಗಳು ಸೃಷ್ಟಿ ಆಗಿದೆ. ಈ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಸಿನಿಮಾದ ಟೀಸರ್ ಹಲ್​​ಚಲ್ ಸೃಷ್ಟಿಸಿದೆ. ಈ ಟೀಸರ್ ನೋಡಿದ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಹೀಗಿರುವಾಗಲೇ ಆಶಿಶ್ ಚಂಚ್ಲಾನಿ ಈ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.

ಮಾರ್ಚ್ 19ರಂದು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗುತ್ತಿದೆ. ‘ಟಾಕ್ಸಿಕ್’ ಕೂಡ ಅದೇ ದಿನ ತೆರೆಗೆ ಬರುತ್ತಿದೆ. ಎರಡೂ ಸಿನಿಮಾಗಳ ಮಧ್ಯೆ ದೊಡ್ಡ ಕ್ಲ್ಯಾಶ್ ಏರ್ಪಡೋದು ಪಕ್ಕಾ ಆಗಿದೆ. ಈ ಎರಡು ಸಿನಿಮಾಗಳಲ್ಲಿ ಯಾರು ಗೆಲ್ಲಬೇಕು ಎಂದು ಹೇಳಿಕೊಂಡಿದ್ದಾರೆ.


ಆಶಿಶ್ ಅವರಿಗೆ ಎರಡೂ ಸಿನಿಮಾ ಗೆಲ್ಲಬೇಕು ಎಂಬ ಬಯಕೆ ಇದೆ. ‘ಟಾಕ್ಸಿಕ್ ಹಾಗೂ ಧರುಂಧರ್ 2 ಬರ್ತಾ ಇದೆ. ಯಾವ ಸಿನಿಮಾ ಚೆನ್ನಾಗಿ ಮಾಡುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಐ ಲವ್ ಯಶ್. ರಣವೀರ್ ಕೂಡ ಇಷ್ಟ. ಎರಡೂ ಸಿನಿಮಾಗಳು ಗೆಲ್ಲಬೇಕು’ ಎಂದು ಆಶಿಶ್ ಚಂಚ್ಲಾನಿ ಹೇಳಿದ್ದಾರೆ.

ಇದನ್ನೂ ಓದಿ: ‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ

‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ‘ಧುರಂಧರ್ 2’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಲು ಇದುವೇ ಕಾರಣ. ‘ಟಾಕ್ಸಿಕ್’ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us