ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ
ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 05, 2022 | 10:31 PM

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ (Karnataka film academy) ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೆಸರಾಂತ ಸಿನಿಮಾಟೋಗ್ರಾಫರ್ ಆಗಿರುವ ಅಶೋಕ್ ಕಶ್ಯಪ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಸುನೀಲ್ ಪುರಾಣಿಕ್​ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅಶೋಕ್ ಕಶ್ಯಪ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಶೋಕ್ ಕಶ್ಯಪ್ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದು, ಅವರು ‘ಲಿಫ್ಟ್ ಕೊಡ್ಲಾ’, ‘ಧ್ವಜ’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದ ‘ತಲೆದಂಡ’ ಸಿನಿಮಾಗೆ ಅಶೋಕ್ ಕಶ್ಯಪ್ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Sat, 5 November 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ