Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ.

Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು
ಶರಣ್ ರಾಜ್
Follow us
ರಾಜೇಶ್ ದುಗ್ಗುಮನೆ
|

Updated on:Jun 09, 2023 | 2:15 PM

ತಮಿಳು ಚಿತ್ರರಂಗದ ನಟ ಹಾಗೂ ಸಹಾಯಕ ನಿರ್ದೇಶಕ ಶರಣ್ ರಾಜ್ (Saran Raj) ಅವರು ಚೆನ್ನೈನ ಕೆಕೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಣ್ಣ ವಯಸ್ಸಿಗೆ ಅವರು ನಿಧನ ಹೊಂದಿದ್ದು ಅವರ ಗೆಳೆಯರು ಹಾಗೂ ಅಭಿಮಾನಿಗಳಿಗೆ ದುಃಖ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಅವರ ಸಾವಿಗೆ ಸಂತಾಪ ಸೂಚಿಸಲಾಗುತ್ತಿದೆ. ಪಳನಿಪ್ಪನ್ ಹೆಸರಿನ ಪೋಷಕ ನಟ ಕುಡಿದು ಕಾರು ಚಲಾಯಿಸಿ ಶರಣ್ ರಾಜ್​ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ತಿಳಿದು ಬಂದಿದೆ. ಶರಣ್ ರಾಜ್ ಆಸ್ಪತ್ರೆಗೆ ದಾಖಲಾದರೂ ಯಾವುದೇ ಪ್ರಯೋಜನ ಆಗಿಲ್ಲ.

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಶರಣ್ ರಾಜ್ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.

ಈ ಘಟನೆ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪಳನಿಪ್ಪನ್ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಶರಣ್ ರಾಜ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಪಳನಿಪ್ಪನ್ ಪೊಲೀಸರ ಎದುರು ಹಾಜರಾಗಿದ್ದಾರೆ ಎನ್ನಲಾಗಿದೆ. ಶರಣ್ ರಾಜ್ ಕುಟುಂಬ ಹಾಗೂ ಗೆಳೆಯರಿಗೆ ಈ ಘಟನೆ ಶಾಕ್ ತಂದಿದೆ. ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. (Source)

ಇದನ್ನೂ ಓದಿ: Adipurush: ಸಿಕ್ತು ‘ಆದಿಪುರುಷ್​’ ಚಿತ್ರದ ಸೆನ್ಸಾರ್​ ಸರ್ಟಿಫಿಕೇಟ್​; ಅಬ್ಬಬ್ಬಾ ಈ ಸಿನಿಮಾದ ಅವಧಿ ಇಷ್ಟೊಂದಾ?

ದಕ್ಷಿಣ ಭಾರತದಲ್ಲಿ ವೆಟ್ರಿಮಾರನ್​ಗೆ ಸಾಕಷ್ಟು ಹೆಸರು ಇದೆ. ಅವರಿಗೆ ಸಹಾಯಕರಾಗಿ ಶರಣ್ ರಾಜ್​ ಅವರು ಇದ್ದರು. ವೆಟ್ರಿಮಾರನ್ ಅವರು ‘ವಡಾ ಚೆನ್ನೈ’ ‘ಅಸುರನ್’ ಸೇರಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.  ‘ಅಸುರನ್​’ ಸಿನಿಮಾದಲ್ಲಿ ಶರಣ್ ರಾಜ್ ಅವರು ಸಹಾಯಕ ನಿರ್ದೇಶಕರಾಗಿದ್ದರು. ಜೊತೆಗೆ ಒಂದು ಪಾತ್ರದಲ್ಲಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Fri, 9 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ