Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

Corona Death: ಮೂಲತಃ ಮಧುರೈನವರಾದ ನಿತೀಶ್​ ವೀರಾ ಅವರಿಗೆ 7 ಮತ್ತು 8 ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಹೊಸ ಕಾರು ಖರೀದಿಸಿದ್ದರು. ತಮ್ಮ ಎಲ್ಲ ಸ್ನೇಹಿತರನ್ನೂ ಭೇಟಿಯಾಗಿ ಕಾರು ತೋರಿಸಿ ಬಂದಿದ್ದರು ಎನ್ನಲಾಗಿದೆ.

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ
ರಜನಿಕಾಂತ್​ ಜೊತೆ ನಿತೀಶ್​ ವೀರಾ
Follow us
ಮದನ್​ ಕುಮಾರ್​
|

Updated on: May 17, 2021 | 12:24 PM

ಕೊರೊನಾ ವೈರಸ್​ನಿಂದಾಗಿ ಸೆಲೆಬ್ರಿಟಿಗಳ ಸಾವಿನ ಸರಣಿ ಮುಂದುವರಿದಿದೆ. ಅನೇಕ ಸಿನಿಮಾ ನಟ-ನಟಿಯರ ಮತ್ತು ತಂತ್ರಜ್ಞರ ನಿಧನಕ್ಕೆ ಕಾರಣವಾಗಿದ್ದ ಈ ಮಹಾಮಾರಿ ಈಗ ಕಾಲಿವುಡ್​ನ ಖ್ಯಾತ ನಟ ನಿತೀಶ್​ ವೀರಾ ಅವರನ್ನು ಬಲಿ ಪಡೆದುಕೊಂಡಿದೆ. ಕೆಲವೇ ದಿನಗಳ ಹಿಂದೆ​ ಅವರಿಗೆ ಪಾಸಿಟಿವ್​ ವರದಿ ಬಂದಿತ್ತು. ಬಳಿಕ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ನಿತೀಶ್​ ಅಗಲಿಕೆಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ರಜನಿಕಾಂತ್​ ನಟನೆಯ ಕಾಲ, ಧನುಷ್​​ ಅಭಿನಯದ ಅಸುರನ್​ ಸಿನಿಮಾಗಳಲ್ಲಿ ನಿತೀಶ್​ ಅವರು ಗಮನಾರ್ಹ ಪಾತ್ರಗಳನ್ನು ನಿಭಾಯಿಸಿದ್ದರು. ಪುಧುಪೆಟ್ಟೈ, ವೆನ್ನಿಲ ಕಬಡಿ ಕುಳು, ರಾಕ್ಷಸಿ, ನೇಟ್ರು ಇಂಡ್ರು, ಪಡೈವೀರನ್​ ಮಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಮನ ಗೆದ್ದಿದ್ದರು. ಅವರು ಕೊರೊನಾದಿಂದಾಗಿ ಮೃತರಾಗಿರುವುದು ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

ಮೂಲತಃ ಮಧುರೈನವರಾದ ನಿತೀಶ್​ ವೀರಾ ಅವರಿಗೆ 7 ಮತ್ತು 8 ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಹೊಸ ಕಾರು ಖರೀದಿಸಿದ್ದರು. ತಮ್ಮ ಎಲ್ಲ ಸ್ನೇಹಿತರನ್ನೂ ಭೇಟಿಯಾಗಿ ಕಾರು ತೋರಿಸಿ ಬಂದಿದ್ದರು ಎನ್ನಲಾಗಿದೆ. ಹೀಗೆ ಖುಷಿಯಾಗಿ ಕಾಲ ಕಾಳೆಯುತ್ತಿದ್ದ ನಿತೀಶ್​ ಅವರ ಜೀವಕ್ಕೆ ಕೊರೊನಾ ಕುತ್ತು ತಂದಿದೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅನೇಕ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಇತ್ತೀಚೆಗಂತೂ ತಮಿಳು ಚಿತ್ರರಂಗಕ್ಕೆ ಮೇಲಿಂದ ಮೇಲೆ ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಮೇ 15ರಂದು ಹೃದಯಾಘಾತದಿಂದ ನಟ ಅಯ್ಯಪ್ಪನ್​ ಗೋಪಿ ಮತ್ತು ಸಹ ನಿರ್ದೇಶಕ ಪವನ್​ರಾಜ್​ ನಿಧನರಾದರು. ಅದಕ್ಕೂ ಮುನ್ನ ಕೊವಿಡ್​ನಿಂದಾಗಿ ಹಾಸ್ಯ ನಟ ಪಾಂಡು ಇಹಲೋಕ ತ್ಯಜಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​ ಹಾಗೂ ಖ್ಯಾತ ನಟ ವಿವೇಕ್​ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈಗ ಕೊವಿಡ್​ನಿಂದ ನಿತೀಶ್​ ವೀರಾ ಕೊನೆಯುಸಿರೆಳೆದಿರುವುದು ನೋವಿನ ಸಂಗತಿ.

ಕನ್ನಡದಲ್ಲೂ ಅನೇಕ ಸೆಲೆಬ್ರಿಟಿಗಳು ಕೊವಿಡ್​ನಿಂದಾಗಿ ಸಾವಿನ ಮನೆ ಸೇರಿದ್ದಾರೆ. ಖ್ಯಾತ ನಿರ್ಮಾಪಕ ಕೋಟಿ ರಾಮು, ಪುಟ್ಟಣ್ಣ ಕಣಗಾಲ್​ ಅವರ ಪುತ್ರ ರಾಮು, ಯುವ ನಟ-ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​, ಹಿರಿಯ ನಟ ಶಂಖನಾದ ಅರವಿಂದ್​ ಮುಂತಾದವರು ಇಹಲೋಕ ತ್ಯಜಿಸಿರುವುದರಿಂದ ಸ್ಯಾಂಡಲ್​ವುಡ್​ನಲ್ಲೂ ಸೂತಕದ ವಾತಾವರಣ ಮನೆ ಮಾಡಿದೆ.

ಇದನ್ನೂ ಓದಿ:

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಆಕ್ಸಿಜನ್ ಸಹಿತ ಆ್ಯಂಬುಲೆನ್ಸ್​ ನೀಡಿ ಕೊವಿಡ್​ ಸೋಂಕಿತರಿಗೆ ನೆರವಾದ ಜೆಕೆ ನಟನೆಯ ಐರಾವನ್​ ಚಿತ್ರತಂಡ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ