AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sienna Weir: ಹಾರ್ಸ್ ರೈಡಿಂಗ್ ವೇಳೆ ಅವಘಡ; ಜನಪ್ರಿಯ ಮಾಡೆಲ್ ನಿಧನ

ಮಾಧ್ಯಮಗಳ ವರದಿ ಪ್ರಕಾರ, ಸಿಯನ್ನಾ ವಿಯರ್ ಅವರು ಏಪ್ರಿಲ್ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಗ್ರೌಂಡ್​ನಲ್ಲಿ ಹಾರ್ಸ್​ರೈಡ್ ಮಾಡುತ್ತಿದ್ದರು. ಈ ವೇಳೆ ಕುದುರೆ ಕುಸಿದು ಬಿದ್ದಿದೆ.

Sienna Weir: ಹಾರ್ಸ್ ರೈಡಿಂಗ್ ವೇಳೆ ಅವಘಡ; ಜನಪ್ರಿಯ ಮಾಡೆಲ್ ನಿಧನ
ಸಿಯನ್ನಾ ವಿಯರ್
ರಾಜೇಶ್ ದುಗ್ಗುಮನೆ
|

Updated on: May 06, 2023 | 1:06 PM

Share

ಆಸ್ಟ್ರೇಲಿಯಾ ಮಾಡೆಲ್, 2022ರ ಮಿಸ್ ಯೂನಿವರ್ಸ್ (Miss Universe) ಫೈನಲಿಸ್ಟ್ ಸಿಯನ್ನಾ ವಿಯರ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 23 ವರ್ಷ ವಯಸ್ಸಾಗಿತ್ತು. ಕುದುರೆ ಸವಾರಿ ಮಾಡುವಾಗ ಉಂಟಾದ ಅವಘಡದಲ್ಲಿ ಅವರಿಗೆ ತೀವ್ರ ಗಾಯಗಳಾಗಿತ್ತು. ಸಿಯನ್ನಾ ವಿಯರ್ (Sienna Weir)​​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಬದುಕಿ ಬಾಳಬೇಕಿದ್ದ ಮಾಡೆಲ್ ಈ ರೀತಿ ಸಣ್ಣ ವಯಸ್ಸಿನಲ್ಲೇ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ.

ಮಾಧ್ಯಮಗಳ ವರದಿ ಪ್ರಕಾರ, ಸಿಯನ್ನಾ ವಿಯರ್ ಅವರು ಏಪ್ರಿಲ್ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಗ್ರೌಂಡ್​ನಲ್ಲಿ ಹಾರ್ಸ್​ರೈಡ್ ಮಾಡುತ್ತಿದ್ದರು. ಈ ವೇಳೆ ಕುದುರೆ ಕುಸಿದು ಬಿದ್ದಿದೆ. ಈ ವೇಳೆ ಸಿಯನ್ನಾ ವಿಯರ್ ತಲೆ ಭಾಗಕ್ಕೆ ಗಾಯ ಉಂಟಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಒಂದು ತಿಂಗಳಿಂದ ಅವರನ್ನು ವಿಶೇಷ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಕುಟುಂಬದವರು ಒಪ್ಪಿಗೆ ಕೊಟ್ಟ ಬಳಿಕ ವೈದ್ಯರು ಮೇ 4ರಂದು ಲೈಫ್ ಸಪೋರ್ಟ್ ತೆಗೆದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿಯನ್ನಾ ವಿಯರ್ ಅವರ ಫೋಟೋನ ಹಂಚಿಕೊಳ್ಳಲಾಗಿದೆ. ‘ನಮ್ಮ ಹೃದಯದಲ್ಲಿ ನೀವು ಸದಾ ಇರುತ್ತೀರಿ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

2022ರಲ್ಲಿ ನಡೆದ ಆಸ್ಟ್ರೇಲಿಯನ್ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸಿಯನ್ನಾ ವಿಯರ್ ಫೈನಲ್ ತಲುಪಿದ್ದರು. ಒಟ್ಟೂ 27 ಫೈನಲಿಸ್ಟ್ ಮಧ್ಯೆ ಅವರಿಗೆ ಗೆಲ್ಲಲು ಸಾಧ್ಯವಾಗಿರಲಿಲ್ಲ. ಸಿಡ್ನಿ ಯೂನಿವರ್ಸಿಟಿಯಿಂದ ಅವರು ಇಂಗ್ಲಿಷ್ ಹಾಗೂ ಮನಶಾಸ್ತ್ರದಲ್ಲಿ ಡಬಲ್ ಡಿಗ್ರಿ ಪಡೆದಿದ್ದಾರೆ. ಅವರು ಇಂಗ್ಲೆಂಡ್​ಗೆ ತೆರಳಿ ತಮ್ಮ ಕರಿಯರ್ ಮುಂದುವರಿಸುವ ಆಲೋಚನೆಯಲ್ಲಿದ್ದರು. ಆಗಲೇ ಅವರು ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಅಧಿಕಾರಿ​ ಎಂದು ಹೇಳಿಕೊಂಡು, ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು ಮಾಡೆಲ್ ಮೇಲೆ ಅತ್ಯಾಚಾರ

ಸಿಯನ್ನಾ ವಿಯರ್ ಅವರಿಗೆ ಹಾರ್ಸ್ ರೈಡಿಂಗ್ ಬಗ್ಗೆ ವಿಶೇಷ ಪ್ರೀತಿ ಇತ್ತು. ಸಮಯ ಸಿಕ್ಕಾಗಲೆಲ್ಲ ಅವರು ಕುದುರೆ ಸವಾರಿ ಮಾಡುತ್ತಿದ್ದರು. ಈ ಬಗ್ಗೆ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ‘ನಾನು ನಗರದಲ್ಲಿ ವಾಸಿಸುತ್ತಿದ್ದೇ. ಆದರೆ ನನಗೆ ಕುದರೆ ಓಡಿಸುವ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಈ ಪ್ಯಾಷನ್ ಎಲ್ಲಿಂದ ಬಂತು ಗೊತ್ತಿಲ್ಲ. ನಾನು 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ. ಅದು ಇಲ್ಲದೆ ನನ್ನ ಜೀವನವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿ ವಾರಾಂತ್ಯದಲ್ಲಿ ಹಾರ್ಸ್ ರೈಡಿಂಗ್ ತರಬೇತಿ ನೀಡುತ್ತೇನೆ ಮತ್ತು ಕುದುರೆ ಸವಾರಿ ಮಾಡುತ್ತೇನೆ’ ಎಂದು ಅವರು ಹೇಳಿದ್ದರು. ಈಗ ಕುದುರೆ ಸವಾರಿಯೇ ಅವರ ಜೀವನಕ್ಕೆ ಕುತ್ತು ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ