AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಗ್ಯ 2’ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಡು ರಿಲೀಸ್; ಡ್ಯಾನ್ಸ್ ನೋಡಿ ಕಂಗಾಲಾದ ಪ್ರೇಕ್ಷಕ

'ಅಯೋಗ್ಯ 2' ಚಿತ್ರದ 'ಮುದ್ದು ಮುದ್ದು ಪುಟ್ಟಲಕ್ಷ್ಮಿ' ಹಾಡು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಡಿನ ಟ್ಯೂನ್ ಉತ್ತಮವಾಗಿದ್ದರೂ, ಹಳೇ ಶೈಲಿಯ ಡ್ಯಾನ್ಸ್ ಸ್ಟೆಪ್ಸ್‌ಗಳಿಂದ ಪ್ರೇಕ್ಷಕರು ನಿರಾಸೆಗೊಂಡಿದ್ದಾರೆ. ಆಧುನಿಕ ಟ್ರೆಂಡ್‌ಗೆ ತಕ್ಕಂತೆ ನೃತ್ಯ ಇರಲಿಲ್ಲ ಎಂದು ಹಲವರು ಕಮೆಂಟ್ ಮಾಡುತ್ತಿದ್ದು, ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಸಿನಿಮಾ ತೆರೆಕಂಡಾಗ ಹಾಡು ಹೇಗೆ ಪ್ರೇಕ್ಷಕರನ್ನು ತಲುಪಲಿದೆ ಎಂದು ಕಾದು ನೋಡಬೇಕಿದೆ.

‘ಅಯೋಗ್ಯ 2’ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಡು ರಿಲೀಸ್; ಡ್ಯಾನ್ಸ್ ನೋಡಿ ಕಂಗಾಲಾದ ಪ್ರೇಕ್ಷಕ
ಸತೀಶ್-ರಚಿತಾ ರಾಮ್
ರಾಜೇಶ್ ದುಗ್ಗುಮನೆ
|

Updated on: Jun 27, 2026 | 7:08 AM

Share

ಮುಖ್ಯಾಂಶಗಳು

  • ‘ಅಯೋಗ್ಯ 2’ ಚಿತ್ರದ 'ಮುದ್ದು ಮುದ್ದು ಪುಟ್ಟಲಕ್ಷ್ಮಿ' ಹಾಡು ಬಿಡುಗಡೆ
  • ಡ್ಯಾನ್ಸ್ ಕೊರಿಯೋಗ್ರಫಿ ಬಗ್ಗೆ ಅಭಿಮಾನಿಗಳಿಗೆ ಮೂಡಿದೆ ಬೇಸರ
  • ಅಯೋಗ್ಯ ಮೊದಲ ಭಾಗದ ಹಾಗೂ ಎರಡನೇ ಭಾಗಕ್ಕೆ ಹೋಲಿಕೆ

ಸ್ಯಾಂಡಲ್‌ವುಡ್‌ನಲ್ಲಿ ‘ಅಯೋಗ್ಯ’ ಸಿನಿಮಾ (Ayogya 2) ಭರ್ಜರಿ ಯಶಸ್ಸು ಕಂಡಿತ್ತು. ಇದರ ಸೀಕ್ವೆಲ್ ‘ಅಯೋಗ್ಯ 2’ ಆಗಸ್ಟ್ 7ರಂದು ತೆರೆಗೆ ಬರಲು ಸಜ್ಜಾಗಿದೆ. ಮೊದಲ ಭಾಗದ ಯಶಸ್ಸಿನ ಬೆನ್ನಲ್ಲೇ ಎರಡನೇ ಭಾಗದ ಮೇಲೂ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ವಿಡಿಯೋ ಸಾಂಗ್ ನೋಡಿದ ಪ್ರೇಕ್ಷಕರು ಮಾತ್ರ ಸದ್ಯಕ್ಕೆ ತಲೆ ಕೆಡಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟಿಸಿದ್ದಾರೆ. ಮಹೇಶ್ ಇದನ್ನು ನಿರ್ದೇಶನ ಮಾಡಿದ್ದಾರೆ.

‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಡು ಬಿಡುಗಡೆಯಾದ ತಕ್ಷಣವೇ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆದರೆ, ಅದರಲ್ಲಿರುವ ನೃತ್ಯ ಸಂಯೋಜನೆ ಮಾತ್ರ ಸಿನಿಪ್ರಿಯರಿಗೆ ಅಷ್ಟಾಗಿ ಇಷ್ಟವಾದಂತೆ ಕಾಣುತ್ತಿಲ್ಲ. ಹಾಡಿನಲ್ಲಿರುವ ಡ್ಯಾನ್ಸ್ ಸ್ಟೆಪ್ಸ್‌ಗಳನ್ನು ನೋಡಿದ ಕೆಲವರು ಅಕ್ಷರಶಃ ಶಾಕ್ ಆಗಿದ್ದಾರೆ.

‘ಇದೇನಿದು, 90ರ ದಶಕದ ಸ್ಟೆಪ್ಸ್‌ಗಳನ್ನೇ ಈಗಲೂ ಹಾಕಿಸುತ್ತಿದ್ದಾರಲ್ಲಾ?’ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇಂದಿನ ಟ್ರೆಂಡ್‌ಗೆ ತಕ್ಕಂತೆ ಹೊಸತನದ ಸ್ಟೆಪ್ಸ್ ನಿರೀಕ್ಷಿಸಿದ್ದ ಪ್ರೇಕ್ಷಕರಿಗೆ ಈ ಹಳೇ ಶೈಲಿಯ ನೃತ್ಯ ನಿರಾಸೆ ಮೂಡಿಸಿದೆ.

ಇದನ್ನೂ ಓದಿ: ‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ

ಹಾಡಿನ ಟ್ಯೂನ್ ಚೆನ್ನಾಗಿದ್ದರೂ, ಡ್ಯಾನ್ಸ್ ಮೂವ್ಸ್‌ಗಳಿಂದಾಗಿ ಈ ಹಾಡು ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರೇಕ್ಷಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ಹಾಡು ಕೇಳಲು ತುಂಬಾ ಮಧುರವಾಗಿದೆ, ಆದರೆ ವಿಶುವಲ್ ಆಗಿ ಇನ್ನೂ ಚೆನ್ನಾಗಿ ಮಾಡಬಹುದಿತ್ತು’ ಎಂಬುದು ಕೆಲವರ ವಾದ. ‘ಅಯೋಗ್ಯ’ ಮೊದಲ ಭಾಗದ ‘ಏನಮ್ಮಿ ಏನಮ್ಮಿ’ ಹಾಡಿನ ಕ್ರೇಜ್ ನೆನಪಿಸಿಕೊಂಡ ಅಭಿಮಾನಿಗಳು, ಈ ಹಾಡಿನ ಡ್ಯಾನ್ಸ್ ನೋಡಿ ಕೊಂಚ ಬೇಸರ ವ್ಯಕ್ತಪಡಿಸಿದ್ದಾರೆ. ಸಿನಿಮಾ ರಿಲೀಸ್ ಆದ ಮೇಲೆ ಈ ಸಾಂಗ್ ಬೆಳ್ಳಿಪರದೆ ಮೇಲೆ ಹೇಗೆ ಕಮಾಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ