AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ಗಾಗಿ ದಾರಿ ಬಿಟ್ಟುಕೊಟ್ಟ ಬಾಲಕೃಷ್ಣ

Pawan Kalyan-Nandamuri Balakrishna: ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದರೂ ಸಹ ಈ ಹಿಂದೆ ತಾವು ಒಪ್ಪಿಕೊಂಡ ಸಿನಿಮಾಗಳನ್ನು ಲಘು-ಬಗೆಯಲ್ಲಿ ಮುಗಿಸಿಕೊಡುತ್ತಿದ್ದಾರೆ. ಸಿನಿಮಾದ ಬಿಡುಗಡೆಯನ್ನೂ ಸಹ ಬೇಗನೆ ಮಾಡುತ್ತಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್ ಸಿನಿಮಾಕ್ಕಾಗಿ ತಮ್ಮ ಸಿನಿಮಾವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ.

ಪವನ್ ಕಲ್ಯಾಣ್​ಗಾಗಿ ದಾರಿ ಬಿಟ್ಟುಕೊಟ್ಟ ಬಾಲಕೃಷ್ಣ
Akhada Pawan
ಮಂಜುನಾಥ ಸಿ.
|

Updated on: Aug 29, 2025 | 12:27 PM

Share

ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜಕೀಯದ ಜೊತೆಗೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಸಲಿಗೆ ಕಳೆದ ವಿಧಾನಸಭೆ ಚುನಾವಣೆ ಶುರುವಾಗುವ ಮುಂಚೆ ಒಪ್ಪಿಕೊಂಡಿದ್ದ ಸಿನಿಮಾಗಳನ್ನು ಈಗ ಪೂರ್ತಿ ಮಾಡುತ್ತಿದ್ದಾರೆ. ಈಗಾಗಲೇ ‘ಹರಿ ಹರ ವೀರ ಮಲ್ಲು’ ಸಿನಿಮಾ ಮುಗಿಸಿರುವ ಪವನ್ ಕಲ್ಯಾಣ್ ಇದೀಗ ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳನ್ನು ಮುಗಿಸಿಕೊಡುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್​​ಗಾಗಿ ಆಂಧ್ರದ ಮತ್ತೊಬ್ಬ ಪವರ್​ಫುಲ್ ರಾಜಕಾರಣಿ ನಟ, ಬಾಲಕೃಷ್ಣ ಅವರು ದಾರಿ ಬಿಟ್ಟುಕೊಟ್ಟಿದ್ದಾರೆ.

ನಂದಮೂರಿ ಬಾಲಕೃಷ್ಣ ಸಹ ಆಂಧ್ರ ಪ್ರದೇಶದ ಜನಪ್ರಿಯ ರಾಜಕಾರಣಿ, ಹಿಂದೂಪುರದ ಹಾಲಿ ಶಾಸಕ ಸಹ ಆಗಿರುವ ಬಾಲಕೃಷ್ಣ, ಸಿನಿಮಾ ಹಾಗೂ ರಾಜಕೀಯವನ್ನು ಜೊತೆ-ಜೊತೆಯಾಗಿ ನಿಭಾಯಿಸುತ್ತಿದ್ದಾರೆ. ಆದರೆ ಸಿನಿಮಾ ರಂಗದಲ್ಲಿ ದೊರೆತ ಯಶಸ್ಸು ಅವರಿಗೆ ರಾಜಕೀಯದಲ್ಲಿ ಇನ್ನೂ ದೊರೆತಿಲ್ಲ ಎನ್ನಬೇಕು, ಮೂರು ಬಾರಿ ಗೆದ್ದರು ಈ ವರೆಗೆ ಸಚಿವರಾಗಿಲ್ಲ. ಈ ಬಾರಿ ಅವಕಾಶ ಇತ್ತಾದರೂ ಪವನ್ ಕಲ್ಯಾಣ್​ ಇಂದಾಗಿ ಬಾಲಯ್ಯಗೆ ಸಚಿವ ಸ್ಥಾನ ಸಿಗಲಿಲ್ಲ ಎನ್ನಲಾಗುತ್ತಿದೆ.

ಅತ್ತ ರಾಜಕೀಯದಲ್ಲಿ ಪವನ್​ಗಾಗಿ ಸಚಿವ ಸ್ಥಾನ ವಂಚಿತರಾದ ಬಾಲಯ್ಯ, ಇತ್ತ ಚಿತ್ರರಂಗದಲ್ಲಿಯೂ ಸಹ ಈಗ ಪವನ್ ಕಲ್ಯಾಣ್ಗಾಗಿ ತಮ್ಮ ಸಿನಿಮಾ ಬಿಡುಗಡೆ ಮುಂದಕ್ಕೆ ಹಾಕಿಕೊಂಡಿದ್ದಾರಂತೆ. ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಸೆಪ್ಟೆಂಬರ್​​ 25ಕ್ಕೆ ಬಿಡುಗಡೆ ಆಗಲಿದೆ. ಅದೇ ದಿನ ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾದ ಬಿಡುಗಡೆಗೂ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಈಗ ಪವನ್ ಸಿನಿಮಾ ಬರುತ್ತಿರುವ ಕಾರಣ, ಬಾಲಯ್ಯನ ಸಿನಿಮಾ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?

‘ಅಖಂಡ’ ಸಿನಿಮಾದ ಭರ್ಜರಿ ಗೆಲುವಿನ ಬೆನ್ನಲ್ಲೆ ಇದೀಗ ‘ಅಖಂಡ 2’ ಸಿನಿಮಾ ಮಾತನಾಡಿದ್ದು, ಬೋಯಪಾಟಿ ಸೀನು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಟೀಸರ್ ಒಂದು ಈಗಾಗಲೇ ಬಿಡುಗಡೆ ಆಗಿ ಸಖತ್ ವೈರಲ್ ಆಗಿದೆ. ಬಾಲಯ್ಯ ಅಘೋರಿಯ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಕೆಲವು ಭಾಗಗಳ ಚಿತ್ರೀಕರಣವನ್ನು ಮಹಾಕುಂಭ ಮೇಳದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಇನ್ನು ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾದ ಚಿತ್ರೀಕರಣವನ್ನು 2023 ರಲ್ಲೇ ಪ್ರಾರಂಭಿಸಲಾಗಿತ್ತು. ಆದರೆ ಪವನ್ ಕಲ್ಯಾಣ್ ಸಕ್ರಿಯ ರಾಜಕೀಯದಲ್ಲಿ ಬ್ಯುಸಿ ಆದ ಕಾರಣ ಸಿನಿಮಾದ ಚಿತ್ರೀಕರಣ ತಡವಾಯ್ತು. ಇದೀಗ ತಮ್ಮ ಬ್ಯುಸಿ ರಾಜಕೀಯ ಕೆಲಸಗಳ ನಡುವೆ ಪವನ್ ಕಲ್ಯಾಣ್ ‘ಓಜಿ’ ಸಿನಿಮಾದ ಚಿತ್ರೀಕರಣ ಪೂರ್ತಿ ಮಾಡಿದ್ದಾರೆ. ಸಿನಿಮಾ ಅನ್ನು ಸೆಪ್ಟೆಂಬರ್ 25ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

‘ಓಜಿ’ ಸಿನಿಮಾವು ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದ್ದು, ಸಿನಿಮಾನಲ್ಲಿ ಪವನ್ ಕಲ್ಯಾಣ್ ಪುತ್ರ ಸಹ ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್​​ನಲ್ಲಿ ಬಿಡುಗಡೆ ಆಗುತ್ತಿರುವ ಕಾರಣ ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ