ವಂಚನೆ ಪ್ರಕರಣ: ನಿರ್ಮಾಪಕ ಬಂಡ್ಲ ಗಣೇಶ್​ಗೆ ಜೈಲು ಶಿಕ್ಷೆ

Bandla Ganesh: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ, ನಿರ್ಮಾಪಕ, ರಾಜಕಾರಣಿಯೂ ಆಗಿರುವ ಬಂಡ್ಲ ಗಣೇಶ್​ಗೆ ವಂಚನೆ ಪ್ರಕರಣವೊಂದರಲ್ಲಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 95 ಲಕ್ಷ ರೂಪಾಯಿ ಜುಲ್ಮಾನೆ ವಿಧಿಸಲಾಗಿದೆ.

ವಂಚನೆ ಪ್ರಕರಣ: ನಿರ್ಮಾಪಕ ಬಂಡ್ಲ ಗಣೇಶ್​ಗೆ ಜೈಲು ಶಿಕ್ಷೆ
Follow us
ಮಂಜುನಾಥ ಸಿ.
|

Updated on: Feb 14, 2024 | 3:47 PM

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಸಿನಿಮಾ ನಿರ್ಮಾಪಕ, ಹಾಸ್ಯ ನಟ ಬಂಡ್ಲ ಗಣೇಶ್​ಗೆ ವಂಚನೆ ಪ್ರಕರಣವೊಂದರಲ್ಲಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 95 ಲಕ್ಷ ರೂಪಾಯಿ ಜುಲ್ಮಾನೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಜೈಲು ಶಿಕ್ಷೆ, ಜುಲ್ಮಾನೆ ಜೊತೆಗೆ ಕೋರ್ಟ್​ ಖರ್ಚುಗಳನ್ನು ಭರಿಸಲು 10 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಲು ಆದೇಶಿಸಲಾಗಿದ್ದು, ಜುಲ್ಮಾನೆ ಹಾಗೂ 10 ಸಾವಿರ ದಂಡವನ್ನು ಮುಂದಿನ 30 ದಿನಗಳ ಒಳಗಾಗಿ ಕಟ್ಟಬೇಕೆಂದು ತೀರ್ಪಿನಲ್ಲಿ ಸೂಚಿಸಲಾಗಿದೆ.

ಬಂಡ್ಲ ಗಣೇಶ್, ಒಂಗೂಲಿನ ಜೆಟ್ಟಿ ವೆಂಕಟೇಶ್ವರ ಎಂಬುವರೊಟ್ಟಿಗೆ ಹಣಕಾಸು ವ್ಯವಹಾರ ಇಟ್ಟುಕೊಂಡಿದ್ದರು. ಬಂಡ್ಲ ಗಣೇಶ್, ವೆಂಕಟೇಶ್ವರ ಅವರಿಗೆ ನೀಡಬೇಕಿದ್ದ ಹಣದಲ್ಲಿ 95 ಲಕ್ಷ ಹಣದ ಚೆಕ್ ಅನ್ನು ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಹಾಗಾಗಿ ವೆಂಕಟೇಶ್ವರ ಅವರು ಒಂಗೂಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಹಲವು ವಿಚಾರಣೆಗಳ ಬಳಿಕ ಇತ್ತೀಚೆಗಷ್ಟೆ ಬಂಡ್ಲ ಗಣೇಶ್, ಒಂಗೂಲ್ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಕೊನೆಗೆ ನ್ಯಾಯಾಲವು ಬಂಡ್ಲ ಗಣೇಶ್​ಗೆ ಒಂದು ವರ್ಷ ಜೈಲು ಶಿಕ್ಷೆಯ ಜೊತೆಗೆ 95 ಲಕ್ಷ ಹಣ ಪಾವತಿಸುವಂತೆ ಹೇಳಿದೆ. 30 ದಿನಗಳ ಒಳಗಾಗಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಅವಕಾಶವೂ ಬಂಡ್ಲ ಗಣೇಶ್​ಗೆ ಇದೆ.

ಇದನ್ನೂ ಓದಿ:ನನ್ನ ಸಿನಿಮಾ ಟೈಟಲ್ ಕದ್ದಿದ್ದಾರೆ: ಜೂ ಎನ್​ಟಿಆರ್ ಹೊಸ ಸಿನಿಮಾ ವಿರುದ್ಧ ಬಂಡ್ಲ ಗಣೇಶ್ ಆಕ್ರೋಶ

ಬಂಡ್ಲ ಗಣೇಶ್ ಚತುರ ವ್ಯವಹಾರಸ್ತನೆಂದೇ ಚಿತ್ರರಂಗದಲ್ಲಿ ಗುರುತು ಪಡೆದಿದ್ದಾರೆ. ರಿಯಲ್ ಎಸ್ಟೇಟ್, ಫೈನ್ಯಾನ್ಸಿಂಗ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಬಂಡ್ಲ ಗಣೇಶ್ ತಮ್ಮನ್ನು ತೊಡಿಗಿಸಿಕೊಂಡಿದ್ದಾರೆ. ರಾಜಕಾರಣದಲ್ಲಿಯೂ ಬಂಡ್ಲ ಗಣೇಶ್ ಸಕ್ರಿಯರಾಗಿದ್ದು ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದಾರೆ. ಇದೆಲ್ಲದರ ಜೊತೆಗೆ ಪವನ್ ಕಲ್ಯಾಣ್​ರ ಆಪ್ತ ವಲಯದಲ್ಲಿ ಸಹ ಬಂಡ್ಲ ಗುರುತಿಸಿಕೊಂಡಿದ್ದರು. ಆದರೆ ಅವರು ಪವನ್ ಕಲ್ಯಾಣ್​ರ ಮತ್ತೊಬ್ಬ ಆಪ್ತ ತ್ರಿವಿಕ್ರಮ್ ಶ್ರೀನಿವಾಸ್ ಬಗ್ಗೆ ಖಾಸಗಿ ಆಗಿ ಆಡಿದ ಆಡಿಯೋ ವೈರಲ್ ಆದ ಬಳಿಕ ಪವನ್ ಕಲ್ಯಾಣ್, ಬಂಡ್ಲ ಗಣೇಶ್ ಜೊತೆ ಅಂತರ ಕಾಯ್ದುಕೊಂಡರು ಎನ್ನಲಾಗುತ್ತದೆ.

1996ರಲ್ಲಿ ಹಾಸ್ಯ ನಟನಾಗಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಬಂಡ್ಲ ಗಣೇಶ್ ಈ ವರೆಗೆ ಅನೇಕ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ನಟಿಸಿದ್ದಾರೆ. 2009 ರಲ್ಲಿ ರವಿತೇಜ ನಟನೆಯ ‘ಆಂಜನೇಯುಲು’ ಸಿನಿಮಾ ಮೂಲಕ ನಿರ್ಮಾಪಕರಾದ ಬಂಡ್ಲ ಗಣೇಶ್, ಪವನ್ ಕಲ್ಯಾಣ್ ನಟನೆಯ ‘ತೀನ್ ಮಾರ್’ ಹಾಗೂ ಸೂಪರ್-ಡೂಪರ್ ಹಿಟ್ ಸಿನಿಮಾ ‘ಗಬ್ಬರ್ ಸಿಂಗ್’ ನಿರ್ಮಾಣ ಮಾಡಿದರು. ಅದಾದ ಬಳಿಕ ಅಲ್ಲು ಅರ್ಜುನ್ ಜೊತೆಗೆ ‘ಇದ್ದರಮ್ಮಾಯಿಲತೋ’, ಜೂ ಎನ್​ಟಿಆರ್ ಜೊತೆಗೆ ‘ಬಾದ್​ಶಾ’ ಮತ್ತು ‘ಟೆಂಪರ್’ ಸಿನಿಮಾಗಳನ್ನು ನಿರ್ಮಿಸಿದರು. ರಾಮ್ ಚರಣ್ ಜೊತೆಗೆ ‘ಗೋವಿಂದುಡು ಅಂದಡಿವಾಡೆಲೇ’ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಜೂ ಎನ್​ಟಿಆರ್ ನಟಿಸಿರುವ ‘ಟೆಂಪರ್’ ಬಂಡ್ಲ ಗಣೇಶ್ ನಿರ್ಮಿಸಿರುವ ಕೊನೆಯ ಸಿನಿಮಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ