ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಷ ಕೊಡಿ ಎಂದ ದರ್ಶನ್ ಬಿಗ್ ರಿಲೀಫ್ ನೀಡಿದ ಕೋರ್ಟ್
ನಟ ದರ್ಶನ್ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್ಗೆ ಬಿಗ್ ರಿಲೀಫ್ ದೊರೆತಂತಾಗಿದೆ.

ಬೆಂಗಳೂರು, ಸೆಪ್ಟೆಂಬರ್ 9: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ (Darshan) ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ದರ್ಶನ್ ಮನವಿಗೆ ಸ್ಪಂದಿಸಿದ ಕೋರ್ಟ್
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.
ವಿಷ ಕೊಡಿ ಎಂದಿದ್ದ ದರ್ಶನ್
ತೀರ್ಪಿಗೂ ಮುನ್ನ ವಿಚಾರಣೆ ವೇಳೆ ಜಡ್ಜ್ ಬಳಿ ಮನವಿ ಮಾಡಿದ್ದ ದರ್ಶನ್, ‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ, ನನಗೆ ಮಾತ್ರ ವಿಷ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.
ಇದನ್ನೂ ಓದಿ: ‘ನಂಗೆ ವಿಷ ಕೊಡಿ’; ಜೈಲಿನ ನರಕಯಾತನೆ ತಾಳಲಾರದೆ ಜಡ್ಜ್ ಎದುರು ದರ್ಶನ್ ಅಳಲು
ವಿಷ ಕೊಡಿ ಎಂದಿದ್ದೇಕೆ ದರ್ಶನ್?
ಸುಪ್ರೀಂ ಕೋರ್ಟ್ ಖಡಕ್ ಸೂಚನೆಯ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿರಲಿಲ್ಲ. ರಾಜಾತಿಥ್ಯ ಸಿಗುತ್ತಿರಲಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿತ್ತು. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿರುವ ದರ್ಶನ್ ವಿಷ ಕೊಡಿ ಎಂದು ಮನವಿ ಮಾಡಿದ್ದರು. ಇದೀಗ ಕೋರ್ಟ್ ಸಹ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:04 pm, Tue, 9 September 25



