ಹಿರಿಯ ಕಲಾವಿದೆ ಲೀಲಾವತಿ ಮತ್ತು ನಟ ವಿನೋದ್ ರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್; ವ್ಯಕ್ತಿ ಬಂಧನ

| Updated By: guruganesh bhat

Updated on: Aug 06, 2021 | 10:13 PM

ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದ ಕಾರಣ ಹಿರಿಯ ಕಲಾವಿದೆ ಲೀಲಾವತಿ ಮತ್ತು ನಟ ವಿನೋದ್ ರಾಜ್ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು ಎನ್ನಲಾಗಿದೆ.

ಹಿರಿಯ ಕಲಾವಿದೆ ಲೀಲಾವತಿ ಮತ್ತು ನಟ ವಿನೋದ್ ರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್; ವ್ಯಕ್ತಿ ಬಂಧನ
ಲೀಲಾವತಿ ಮತ್ತು ವಿನೋದ್ ರಾಜ್
Follow us on

ಬೆಂಗಳೂರು: ಹಿರಿಯ ಕಲಾವಿದೆ ಲೀಲಾವತಿ ಮತ್ತು ನಟ ವಿನೋದ್ ರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಸದ್ಯ ಬಂಧಿತ ವ್ಯಕ್ತಿ ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸರ ವಶದಲ್ಲಿದ್ದಾನೆ ಎಂದು ತಿಳಿದುಬಂದಿದೆ. ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದ ಕಾರಣ ಹಿರಿಯ ಕಲಾವಿದೆ ಲೀಲಾವತಿ ಮತ್ತು ನಟ ವಿನೋದ್ ರಾಜ್ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು ಎನ್ನಲಾಗಿದೆ.

ಈ ಕುರಿತು ಉತ್ತರ ವಿಭಾಗ ಸಿಇಎನ್ ಠಾಣೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ಕಳೆದ ಎಂಟು ತಿಂಗಳ‌ ಹಿಂದೆ ವಿನೋದ್ ರಾಜ್ ಹಾಗು ಲೀಲಾವತಿ ಅವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಿನ್ನಲೆ ದೂರು‌ ನೀಡಿದ್ದರು. ಪೊಲೀಸರಿಗೆ ಅಗತ್ಯ ಮಾಹಿತಿ ನೀಡುವ ಸಲುವಾಗಿ ಠಾಣೆಗೆ ಆಗಮಿಸಿ ನಟ ವಿನೋದ್ ರಾಜ್ ಮಾಹಿತಿ ನೀಡಿದರು.

ಇದನ್ನೂ ಓದಿ: 

ಚಿತ್ರರಂಗದ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ನೆರವಾದ ನಟ ವಿನೋದ್ ರಾಜ್, ಹಿರಿಯ ನಟಿ ಲೀಲಾವತಿ

Fact Check ಕೊವಿಡ್ ರೂಪಾಂತರಿ ಯಾವಾಗ ಕಾಣಿಸಿಕೊಳ್ಳುತ್ತದೆ ಎಂದು ದಿನಾಂಕ ತೋರಿಸುವ ವೈರಲ್ ಪೋಸ್ಟ್ ಫೇಕ್

(Bengaluru Police detained a man who make Derogatory post against veteran artist Leelavathi and actor Vinod Raj)

Published On - 8:43 pm, Tue, 3 August 21