ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ

ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿರಾಜ (86) ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನಲ್ಲಿ ಕೊನೆಯುಸಿರೆಳೆದರು. 1977ರಲ್ಲಿ ನಿರ್ದೇಶಕರಾದ ಇವರು, ತಮಿಳು ಮತ್ತು ತೆಲುಗಿನಲ್ಲಿ ಹಲವು ಸೂಪರ್‌ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹಾಯಕರಾಗಿ ಕೆಲಸ ಮಾಡಿದ್ದರು.

ಪುಟ್ಟಣ ಕಣಗಾಲ್ ಶಿಷ್ಯ, ಖ್ಯಾತ ನಿರ್ದೇಶಕ ಭಾರತಿ ರಾಜ ನಿಧನ
ಭಾರತಿ ರಾಜ

Updated on: Jun 10, 2026 | 8:59 AM

ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿ ರಾಜ (86) ನಿಧನರಾಗಿದ್ದಾರೆ. ವೃದ್ಧಾಪ್ಯ ಮತ್ತು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ (ಜೂನ್ 10) ಮುಂಜಾನೆ ಅವರು ಕೊನೆಯುಸಿರೆಳೆದರು. ಅವರ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

1977ರ ತಮಿಳು ಚಿತ್ರ ’16 ವಯತಿನಿಲೆ’ ಮೂಲಕ ಭಾರತಿ ರಾಜ ನಿರ್ದೇಶಕರಾದರು. ಅದಾದ ನಂತರ, ಅವರು ‘ಕಿಲಕ್ಕೆ ಪೋಗಮ್ ರೈಲ್’, ‘ಸಿಗಪ್ಪು ರೋಜಕ್ಕಲ್’, ‘ಅಲೈಗಲ್ ಒಯಿವತಿಲ್ಲೈ’, ‘ಕಾದಲ್ ಓವಿಯಂ’, ‘ಮುದಲ್ ಮರಿಯಥೈ’ ಮತ್ತು ಇತರ ಸೂಪರ್ ಹಿಟ್ ಚಿತ್ರಗಳನ್ನು ತಮಿಳು ಪ್ರೇಕ್ಷಕರಿಗೆ ನೀಡಿದರು.

ವಿಶೇಷ ಎಂದರೆ ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಬಳಿ ಭಾರತಿ ರಾಜ ಕೆಲಸ ಕಲಿತಿದ್ದರು. ಪುಟ್ಟಣ್ಣ ಕಣಗಾಲ್ ಬಳಿ ಸಹಾಯಕ ನಿರ್ದೇಶಕರಾಗಿ ಅವರು ಕೆಲಸ ಮಾಡಿದ್ದರು. ಆದಾಗ್ಯೂ ಭಾರತಿ ರಾಜ ಅವರು ಕನ್ನಡದಲ್ಲಿ ಯಾವುದೇ ಸಿನಿಮಾ ಮಾಡಿಲ್ಲ.

ದಂತಕಥೆಯ ನಿರ್ದೇಶಕರು ತೆಲುಗಿನಲ್ಲಿ ಅನೇಕ ಕ್ಲಾಸಿಕ್ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ‘ಸೀತಕೋಕ ಚಿಲುಕ’, ‘ಆರಾಧನಾ’, ‘ಜಮದಗ್ನಿ’, ‘ಈತರಂ ಇಲ್ಲು’, ‘ಎರ್ರಾ ಗುಲಾಬಿಲು’, ‘ಟಿಕ್ ಟಿಕ್ ಟಿಕ್’, ‘ಕೊತ್ತ ಜೀವನಲು’, ‘ಯುವತರಂ ಪಿರಿದಿಂಡಿ’ ಹೀಗೆ ಹಲವು ಉತ್ತಮ ಚಿತ್ರಗಳನ್ನು ತೆಲುಗು ಪ್ರೇಕ್ಷಕರಿಗೆ ಭಾರತಿರಾಜ ನೀಡಿದ್ದಾರೆ.

ಭಾರತಿ ರಾಜಾ ಕೊನೆಯದಾಗಿ ‘ಮೀಂದುಮ್ ಒರು ಮರಿಯಾದೈ’ ಚಿತ್ರವನ್ನು ನಿರ್ದೇಶಿಸಿದರು. 2020 ರಲ್ಲಿ ಬಿಡುಗಡೆಯಾದ ಈ ಚಿತ್ರವು ಸಾಧಾರಣ ಪ್ರದರ್ಶನ ನೀಡಿತು. ಇದರ ನಂತರ, ಅವರು ಸಿನಿಮಾ ಮಾಡಿಲ್ಲ. ಅವರು ನಟನಾಗಿಯೂ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆ ಹಾಡು ಕೇಳಿ ಅತ್ತಿದ್ದ ಪುಟ್ಟಣ್ಣ ಕಣಗಾಲ್; ಹಾಡಿದ್ದಕ್ಕೆ ಸಂಭಾವನೆಯೇ ಬೇಡವೆಂದ ಎಸ್​ಪಿಬಿ 

ಭಾರತಿರಾಜ ಅವರ ಏಕೈಕ ಪುತ್ರ ಮನೋಜ್ ಭಾರತಿರಾಜ ಕಳೆದ ವರ್ಷ ನಿಧನರಾದರು. ನಟ ಮತ್ತು ನಿರ್ದೇಶಕರಾಗಿ ಬೆಳೆಯುತ್ತಿದ್ದ ಮನೋಜ್ ಅವರ ಹಠಾತ್ ಸಾವು ಭಾರತಿರಾಜ ಅವರನ್ನು ತೀವ್ರವಾಗಿ ಬಾಧಿಸಿತು. ಈ ದುರಂತದಿಂದ ಚೇತರಿಸಿಕೊಳ್ಳಲು ಅವರಿಗೆ ಬಹಳ ಸಮಯ ಹಿಡಿಯಿತು. ಆ ದುರಂತವನ್ನು ಮರೆಯಲು ಭಾರತಿರಾಜ ತಮ್ಮ ಕುಟುಂಬ ಸದಸ್ಯರೊಂದಿಗೆ ವಿದೇಶದಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ನಂತರ ಚೆನ್ನೈಗೆ ಮರಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us