AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

ಭಾರ್ಗವಿ ಎಲ್​ಎಲ್ಬಿ ಧಾರಾವಾಹಿಯಲ್ಲಿ ಮಹತ್ವದ ತಿರುವು ಬಂದಿದೆ. ತಂದೆಯ ಆಕಸ್ಮಿಕ ಸಾವಿನಿಂದ ಕಂಗಾಲಾದ ಭಾರ್ಗವಿ, ತಾಯಿಯ ಮಾತಿಗೆ ಗೌರವಿಸಿ ವಕೀಲ ವೃತ್ತಿಗೆ ವಿದಾಯ ಹೇಳಿದ್ದಾಳೆ. ಇದು ಧಾರಾವಾಹಿಯ ಕಥೆಯ ದಿಕ್ಕನ್ನೇ ಬದಲಿಸಲಿದೆ. ಅವಳ ಮುಂದಿನ ಬದುಕು ಹೇಗಿರುತ್ತದೆ? ತಂದೆಯ ಸಾವು ಕೇವಲ ಅಪಘಾತವೋ ಅಥವಾ ವೈರಿಗಳ ಕುತಂತ್ರವೋ? ಇಂತಹ ಹಲವು ಕುತೂಹಲಗಳನ್ನು ಹೊತ್ತು ಹೊಸ ಅಧ್ಯಾಯ ಆರಂಭವಾಗಿದೆ.

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ
ಭಾರ್ಗವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 12, 2026 | 8:30 AM

Share

ಕಲರ್ಸ್‌ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇರುತ್ತವೆ. ಈಗ ಈ ಧಾರಾವಾಹಿ ರೋಚಕ ಘಟ್ಟ ತಲುಪಿದೆ. ಈ ಧಾರಾವಾಹಿ ಪ್ರಮುಖ ಹಾಗೂ ರೋಚಕ ಘಟ್ಟ ತಲುಪಿದೆ. ಈಗ ಧಾರಾವಾಹಿಯ ಕಥೆಯೇ ಬದಲಾಗುವ ಹಂತ ತಲುಪಿದೆ. ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿ ಈಗ ಬದಲಾಗುತ್ತಿದ್ದಾರೆ. ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ಭಾರ್ಗವಿ ತಂದೆ ರವೀಂದ್ರ ಭಟ್ಕಳ್‌ ವಕೀಲ ವೃತ್ತಿಯಿಂದ ದೂರ ಆಗಿದ್ದರು. ಈಗ ಮತ್ತೆ ಅದೇ ಕೋರ್ಟ್‌ಗೆ ಅವರನ್ನು ಕರೆತರುವ ದಿಟ್ಟ ಗುರಿ ಹೊಂದಿದ್ದಳು ಭಾರ್ಗವಿ. ಆ ಕನಸು ಈಡೇರಿತ್ತು. ಆದರೆ, ಆದರೆ, ಇದೀಗ ಆ ದೊಡ್ಡ ಗೆಲುವನ್ನು ಸಂಭ್ರಮಿಸೋಕೆ ಅವಳ ಜೊತೆಗೆ ಅಪ್ಪನೇ ಇಲ್ಲ.

ಇದುವರೆಗೆ ಕಥೆಯಲ್ಲಿ ಭಾಗರ್ವಿ ಧೈರ್ಯದ ಸಂಕೇತ ಆಗಿದ್ದಳು. ವೀಕ್ಷಕರಲ್ಲೂ ಅವಳನ್ನು ನೋಡಿ ಒಂದು ಧೈರ್ಯ ಬಂದಿತ್ತು. ಆದರೆ, ಭೀಕರ ರಸ್ತೆ ಅಪಘಾತದಲ್ಲಿ ತಂದೆ ರವೀಂದ್ರ ಭಟ್ಕಳ್ ಅವರ ಅಕಾಲಿಕ ಸಾವು ಅವಳನ್ನು ಕಂಗಾಲಾಗಿಸಿದೆ. ಈ ಸಾವು ಕೇವಲ ಅಪಘಾತವೋ ಅಥವಾ ಭಾರ್ಗವಿಯ ವೈರಿಗಳ ಕುತಂತ್ರವೋ ಎನ್ನುವ ಪ್ರಶ್ನೆ ಮೂಡಿದೆ.

ತಂದೆಯ ಸಾವಿನಿಂದ ಕಂಗಾಲಾಗಿರುವ ತಾಯಿ, ಅಪ್ಪನ ಸಾವಿಗೆ ಕಾರಣವಾದ ಈ ಲಾಯರ್‌ ಕೆಲಸ ಬಿಡುವಂತೆ ಭಾರ್ಗವಿಗೆ ಸೂಚಿಸಿದ್ದಾಳೆ. ತಾಯಿ ನೋವಿಗೆ ಸ್ಪಂದಿಸಿ ಅಪ್ಪನ ಚಿತೆಯ ಮುಂದೆಯೇ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ. ಅಮ್ಮನೇ ಹೇಳುವವರೆಗೂ ವಕೀಲ ವೃತ್ತಿ ಮಾಡಲ್ಲ ಎಂದಿದ್ದಾಳೆ. ಈ ಮೂಲಕ ಭಾರ್ಗವಿ ತನ್ನ ವೃತ್ತಿಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾಳೆ.

ಇದನ್ನೂ ಓದಿ: ಕಲರ್ಸ್​ ಕನ್ನಡದ ಹೊಸ ಧಾರಾವಾಹಿಗೆ ನಾಯಕಿ ಆದ ಸಂಜನಾ ಬುರ್ಲಿ

ಲಾಯರ್ ವೃತ್ತಿ ಬಿಟ್ಟ ಭಾರ್ಗವಿ ಹೇಗೆ ಜೀವನ ಮಾಡುತ್ತಾಳೆ? ಈ ಟ್ವಿಸ್ಟ್​​ನಿಂದ ಧಾರಾವಾಹಿ ಹೇಗೆ ಸಾಗುತ್ತದೆ ಎಂಬಿತ್ಯಾದಿ ಪ್ರಶ್ನೆ ಮೂಡಿದೆ. ಕಥೆ ಇಲ್ಲಿಗೆ ಮುಗಿಯಿತೇ ಅಥವಾ ಇದು ಹೊಸ ಅಧ್ಯಾಯದ ಆರಂಭವೇ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ. ಸೋಮವಾರದಿಂದ ಶುಕ್ರವಾರದ ವರೆಗೆ ಬದಲಾದ ಸಮಯದಲ್ಲಿ ರಾತ್ರಿ 9:30ಕ್ಕೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಭಾರ್ಗವಿ ಎಲ್​ಎಲ್ಬಿ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:29 am, Thu, 12 February 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!