AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಪ್ರಭಾಸ್​-ಕೃತಿ ಸನೋನ್​ ನಡುವಿನ ಲವ್​ ಬಗ್ಗೆ ಬಾಯ್ಬಿಟ್ಟ ನಟ ವರುಣ್​ ಧವನ್​

Varun Dhawan | Kriti Sanon: ಪ್ರಭಾಸ್​ ಮದುವೆ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ಈಗ ಕೃತಿ ಸನೋನ್​ ಜತೆ ಅವರ ಹೆಸರು ತಳುಕು ಹಾಕಿಕೊಂಡಿದೆ. ಈ ಬಗ್ಗೆ ಪ್ರಭಾಸ್​ ಕಡೆಯಿಂದ ಪ್ರತಿಕ್ರಿಯೆ ಬರಬೇಕಿದೆ.

Kriti Sanon: ಪ್ರಭಾಸ್​-ಕೃತಿ ಸನೋನ್​ ನಡುವಿನ ಲವ್​ ಬಗ್ಗೆ ಬಾಯ್ಬಿಟ್ಟ ನಟ ವರುಣ್​ ಧವನ್​
ವರುಣ್ ಧವನ್, ಪ್ರಭಾಸ್, ಕೃತಿ ಸನೋನ್
TV9 Web
| Updated By: ಮದನ್​ ಕುಮಾರ್​|

Updated on: Nov 28, 2022 | 10:38 AM

Share

ಸೆಲೆಬ್ರಿಟಿಗಳ ದುನಿಯಾದಲ್ಲಿ ಡೇಟಿಂಗ್​ ತುಂಬ ಕಾಮನ್​. ಆದರೆ ಯಾರು ಯಾರ ಜೊತೆ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಸತ್ಯ ಅಷ್ಟು ಸುಲಭಕ್ಕೆ ಹೊರಬರುವುದಿಲ್ಲ. ಈಗ ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್​ (Prabhas) ಅವರ ಲವ್​ ಲೈಫ್​ ಬಗ್ಗೆ ಬಾಲಿವುಡ್​ ನಟ ವರುಣ್​ ಧವನ್​ ಬಾಯಿ ಬಿಟ್ಟಿದ್ದಾರೆ. ಈ ವಿಚಾರವನ್ನು ಒಂದು ಒಗಟಿನ ರೀತಿಯಲ್ಲಿ ಅವರು ಹೇಳಿದ್ದಾರೆ. ಅವರ ಪ್ರಕಾರ, ಕೃತಿ ಸನೋನ್​ ಮತ್ತು ಪ್ರಭಾಸ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ಈ ಮಾತು ಕೇಳಿ ಕೃತಿ ಸನೋನ್​ (Kriti Sanon) ಅವರ ಮುಖ ಅರಳಿದೆ. ರಿಯಾಲಿಟಿ ಶೋವೊಂದರ ವೇದಿಕೆಯಲ್ಲಿ ವರುಣ್​ ಧವನ್​ (Varun Dhawan) ಅವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಅದರ ವಿಡಿಯೋ ವೈರಲ್​ ಆಗಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇತ್ತೀಚೆಗೆ ರಿಯಾಲಿಟಿ ಶೋವೊಂದರಲ್ಲಿ ವರುಣ್​ ಧವನ್​ ಅವರು ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಕೃತಿ ಸನೋನ್​ ಕೂಡ ಇದ್ದರು. ಕರಣ್​ ಜೋಹರ್​ ಕೇಳಿದ ಒಂದು ಪ್ರಶ್ನೆಗೆ ಉತ್ತರಿಸುವಾಗ ನಾಯಕಿಯರ ಪಟ್ಟಿ ಮಾಡಿದ ವರುಣ್​ ಧವನ್​ ಅವರು ಕೃತಿ ಸನೋನ್​ ಹೆಸರನ್ನು ಕೈ ಬಿಟ್ಟಿದ್ದಾರೆ. ಯಾಕೆ ಎಂದು ಪ್ರಶ್ನಿಸಿದಾಗ ವರುಣ್​ ಧವನ್​ ಅಸಲಿ ವಿಷಯ ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಈ ಪಟ್ಟಿಯಲ್ಲಿ ಕೃತಿ ಸನೋನ್​ ಹೆಸರು ಇಲ್ಲ. ಯಾಕೆಂದರೆ ಅವರ ಹೆಸರು ಬೇರೆ ವ್ಯಕ್ತಿಯ ಹೃದಯದಲ್ಲಿದೆ. ಅವರು ಈಗ ಮುಂಬೈನಲ್ಲಿ ಇಲ್ಲ. ಈಗ ದೀಪಿಕಾ ಪಡುಕೋಣೆ ಜೊತೆ ಶೂಟಿಂಗ್​ ಮಾಡುತ್ತಿದ್ದಾರೆ’ ಎಂದು ವರುಣ್​ ಧವನ್​ ಹೇಳಿದ್ದಾರೆ. ‘ಪ್ರಾಜೆಕ್ಟ್​ ಕೆ’ ಸಿನಿಮಾಗಾಗಿ ಪ್ರಭಾಸ್​ ಅವರು ದೀಪಿಕಾ ಜೊತೆ ಶೂಟಿಂಗ್​ ಮಾಡುತ್ತಿದ್ದಾರೆ. ಹಾಗಾಗಿ ವರುಣ್​ ಧವನ್​ ಹೇಳಿದ್ದು ಪ್ರಭಾಸ್​ ಬಗ್ಗೆಯೇ ಎಂದು ಎಲ್ಲರೂ ಊಹಿಸುತ್ತಿದ್ದಾರೆ.

‘ಆದಿಪುರುಷ್​ ಸಿನಿಮಾದಲ್ಲಿ ಪ್ರಭಾಸ್​ ಮತ್ತು ಕೃತಿ ಸನೋನ್​ ಅವರು ಜೊತೆಯಾಗಿ ನಟಿಸುತ್ತಿದ್ದಾರೆ. ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದರೆ, ಸೀತೆಯಾಗಿ ಕೃತಿ ಸನೋನ್​ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಇಬ್ಬರ ನಡುವೆ ಆಪ್ತತೆ ಬೆಳೆದಿದೆ ಎನ್ನಲಾಗಿದೆ. ಅದರ ಪರಿಣಾಮವಾಗಿ ಇಬ್ಬರೂ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಗುಸುಗುಸು ಹಬ್ಬಿದೆ.

ಪ್ರಭಾಸ್​ ಅವರ ಮದುವೆ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ಖ್ಯಾತ ನಟಿ ಅನುಷ್ಕಾ ಶೆಟ್ಟಿ ಜೊತೆ ಅವರು ಸಪ್ತಪದಿ ತುಳಿಯಬಹುದು ಎಂದು ಅನೇಕ ಬಾರಿ ಸುದ್ದಿ ಆಗಿತ್ತು. ಆದರೆ ಅದು ನಿಜವಾಗಲಿಲ್ಲ. ಈಗ ಕೃತಿ ಸನೋನ್​ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿದೆ. ಈ ಬಗ್ಗೆ ಪ್ರಭಾಸ್​ ಕಡೆಯಿಂದ ಇನ್ನಷ್ಟೇ ಪ್ರತಿಕ್ರಿಯೆ ಬರಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ