AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bheemla Nayak Song: ಖದರ್ ಲುಕ್​ನಲ್ಲಿ ಪವನ್ ಕಲ್ಯಾಣ್; ‘ಭೀಮ್ಲಾ ನಾಯಕ್’ ಟೈಟಲ್ ಟ್ರಾಕ್ ಬಿಡುಗಡೆ

Pawan Kalyan Birthday: ಟಾಲಿವುಡ್ ಪವರ್​ಸ್ಟಾರ್ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ಅವರ ನೂತನ ‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಹಾಡಿನ ಜಾನಪದ ಸೊಗಡಿಗೆ ಹಾಗೂ ಪವನ್ ಕಲ್ಯಾಣ್​ರ ಖದರ್ ಸ್ಟೈಲ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Bheemla Nayak Song: ಖದರ್ ಲುಕ್​ನಲ್ಲಿ ಪವನ್ ಕಲ್ಯಾಣ್; ‘ಭೀಮ್ಲಾ ನಾಯಕ್’ ಟೈಟಲ್ ಟ್ರಾಕ್ ಬಿಡುಗಡೆ
‘ಭೀಮ್ಲಾ ನಾಯಕ್’ ಚಿತ್ರದಲ್ಲಿ ಪವನ್ ಕಲ್ಯಾಣ್
TV9 Web
| Edited By: |

Updated on: Sep 02, 2021 | 12:59 PM

Share

ಟಾಲಿವುಡ್​ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ನಟಿಸಿರುವ ‘ಭೀಮಲಾ ನಾಯಕ್’ ಚಿತ್ರದ ನೂತನ ಹಾಡನ್ನು ಪವನ್ ಕಲ್ಯಾಣ್ 50ನೇ ಜನ್ಮದಿನದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ. ಜಾನಪದ ಸೊಗಡಿನ ಸ್ಪರ್ಶವಿರುವ ಈ ಹಾಡು ಅಭಿಮಾನಿಗಳ ಎದೆಯಲ್ಲಿ ಕಂಪನ ಹುಟ್ಟಿಸಿದ್ದು, ಪವನ್ ಕಲ್ಯಾಣ್ ಖದರ್​ಗೆ ಮನ ಸೋತಿದ್ದಾರೆ. ಇದು ಚಿತ್ರದ ಟೈಟಲ್ ಟ್ರ್ಯಾಕ್ ಆಗಿದ್ದು, ಖ್ಯಾತ ಸಂಗೀತ ನಿರ್ದೇಶಕ ತಮನ್.ಎಸ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸ್ವತಃ ತಮನ್ ಇದಕ್ಕೆ ಹಾಡಿದ್ದು, ಅವರೊಂದಿಗೆ ಶ್ರೀ ಕೃಷ್ಣ, ಪೃಥ್ವಿ ಚಂದ್ರ ಹಾಗೂ ರಾಮ್ ಮಿರಿಯಾಲಾ ದನಿಗೂಡಿಸಿದ್ದಾರೆ. ಗೀತೆಗೆ ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯವನ್ನು ರಚಿಸಿದ್ದಾರೆ. 

ಮಲಯಾಳಂ ಸೂಪರ್ ಹಿಟ್ ಚಿತ್ರವಾದ ‘ಅಯ್ಯಪ್ಪನಂ ಕೋಶಿಯುಂ’ ಚಿತ್ರದ ರಿಮೇಕ್ ಆಗಿರುವ ‘ಭೀಮ್ಲಾ ನಾಯಕ್’ ಚಿತ್ರವನ್ನು ಸಾಗರ್.ಕೆ.ಚಂದ್ರ ನಿರ್ದೇಶಿಸುತ್ತಿದ್ದಾರೆ. ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ನಲ್ಲಿ ಈ ಚಿತ್ರವನ್ನು ಸೂರ್ಯದೇವರ ನಾಗವಂಶಿ ನಿರ್ಮಿಸುತ್ತಿದ್ದಾರೆ. ತ್ರಿವಿಕ್ರಮ್ ಸಂಭಾಷಣೆ ಬರೆಯುತ್ತಿರುವ ಈ ಚಿತ್ರದಲ್ಲಿ, ಪವನ್ ಎದುರು ನಿತ್ಯಾ ಮೆನನ್ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್‌ಗಳು ಮತ್ತು ವೀಡಿಯೋ ತುಣುಕುಗಳು ಚಿತ್ರದ ಮೇಲೆ ನಿರೀಕ್ಷೆಗಳನ್ನು ಹೆಚ್ಚಿಸಿರುವುದಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ದಾಖಲೆಗಳನ್ನು ಸೃಷ್ಟಿಸಿವೆ.

‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್ ಇಲ್ಲಿದೆ:

‘ಅಯ್ಯಪ್ಪನುಂ ಕೋಶಿಯುಂ’ ಚಿತ್ರ ಮಲಯಾಳಂನಲ್ಲಿ ಭರ್ಜರಿ ಹಿಟ್ ಆಗಿತ್ತು. ದಿ.ಸಚಿ ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಹಾಗೂ ಬಿಜು ಮೆನನ್ ಕಾಣಿಸಿಕೊಂಡಿದ್ದರು. ಒಬ್ಬ ಮಾಜಿ ಸೈನಿಕ ಹಾಗೂ ಹಾಲಿ ಪೊಲೀಸ್ ಇನ್ಸ್ಪೆಕ್ಟರ್ ನಡುವೆ  ನಡೆಯುವ ಸಂಘರ್ಷದ ಕತೆ ಇದಾಗಿದೆ.

ಪವನ್ ಕಲ್ಯಾಣ್ ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲೂ ಬಣ್ಣ ಹಚ್ಚುತ್ತಿದ್ದಾರೆ. ಐತಿಹಾಸಿಕ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ‘ವೀರಮಲ್ಲು’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ 2022ರ ಜನವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

Sidharth Shukla Death: ಬಿಗ್​ ಬಾಸ್​ ವಿನ್ನರ್ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ನಿಧನ​

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

(Bheemla Nayak title song is released on Pawan Kalyan birthday)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ