ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ

Nisha Upadhyay: ಭೋಜ್​ಪುರಿ ಗಾಯಕಿ ನಿಶಾ ಉಪಾಧ್ಯಾಯ್, ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ
ನಿಶಾ ಉಪಾಧ್ಯಾಯ್
Follow us
ಮಂಜುನಾಥ ಸಿ.
|

Updated on:Jun 01, 2023 | 6:35 PM

ಭೋಜ್​ಪುರಿ ಗಾಯಕಿಯೊಬ್ಬರು (Bhojpuri Singer) ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗಲೆ ಗುಂಡು ಹಾರಿಸಲಾಗಿದ್ದು ಗಾಯಗೊಂಡಿರುವ ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಾಯ (Nisha Upadhyay) ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ನಟಿಯ ಎಡಗಾಲಿಗೆ ಗುಂಡು ತಗುಲಿದೆ.

ನಟಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ನಟಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಯಾರು ಯಾಕಾಗಿ ನಟಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಲಿಖಿತ ದೂರು ದಾಖಲಾಗಿಲ್ಲ ಹಾಗಿದ್ದರೂ ಲಭ್ಯ ಮಾಹಿತಿ ಆಧಾರದ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್​ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.

ಬಿಹಾರದಲ್ಲಿ ಆಗಾಗ್ಗೆ ಇಂಥಹಾ ಘಟನೆಗಳು ನಡೆಯುತ್ತಿರುತ್ತವೆ. ಬಿಹಾರ, ರಾಜಸ್ಥಾನಗಳಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಲೈವ್ ಸಂಗೀತ ಕಾರ್ಯಕ್ರಮ ಖಾಯಂ ಆಗಿರುತ್ತದೆ. ಸಂಗೀತಗಾರರ ಮೇಲೆ ಹಲ್ಲೆ ಮಾಡುವುದು, ಕಾರ್ಯಕ್ರಮ ನಡೆಯುವಾಗ ಬಂದೂಕು ಪ್ರದರ್ಶಿಸುವುದು, ಗಾಳಿಯಲ್ಲಿ ಗುಂಡು ಹಾರಿಸುವ ಘಟನೆಗಳು ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಆಗೊಮ್ಮೆ ಈಗೊಮ್ಮೆ ಕಲಾವಿದರಿಗೆ ಗುಂಡು ಹಾರಿಸಿ ವಿಕೃತಿ ಮೆರೆಯುವುದೂ ಉಂಟು.

ಇತ್ತೀಚೆಗಷ್ಟೆ ಉತ್ತರ ಭಾರತದ ಜನಪ್ರಿಯ ನೃತ್ಯಗಾರ್ತಿ, ಗಾಯಕಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಗೋರಿ ನಗೋರಿ ಮೇಲೆಯೂ ಹಲ್ಲೆ ನಡೆದಿತ್ತು. ತನ್ನ ಸಹೋದರಿಯ ಮದುವೆ ಮಾಡಲು ರಾಜಸ್ಥಾನದ ಕಿಶನ್​ಘಡ್​ಗೆ ತೆರಳಿದ್ದಾಗ ಗೋರಿ ನಗೋರಿಯ ಅಕ್ಕನ ಪತಿ, ಅವನ ಸಹೋದರರು ಹಾಗೂ ಅವನ ಕೆಲವು ಗೆಳೆಯರು ಸೇರಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಗೋರಿ ನಗೋರಿ, ಪೊಲೀಸರು ದೂರು ಸ್ವೀಕರಿಸುವ ಬದಲಿಗೆ ತನ್ನೊಟ್ಟಿಗೆ ಸೆಲ್ಫಿ ತೆಗೆದುಕೊಂಡರು ಎಂದಿದ್ದರು ಮಾತ್ರವಲ್ಲದೆ ರಾಜಸ್ಥಾನ ಸರ್ಕಾರವು ತಮಗೆ ಭದ್ರತೆ ಒದಗಿಸಬೇಕು ಎಂದು ಮನವಿ ಸಹ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 1 June 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ