AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೋಲಾ ಶಂಕರ್’ ಟ್ರೇಲರ್​ನಲ್ಲಿ ಮಿಂಚಿದ ಚಿರಂಜೀವಿ; ಖಡಕ್ ವಿಲನ್ ಆಗಿ ಕಾಣಿಸಿಕೊಂಡ ರವಿಶಂಕರ್

Bhola Shankar Movie Trailer: ಆ್ಯಕ್ಷನ್, ಎಮೋಷನ್, ಕಾಮಿಡಿ ದೃಶ್ಯಗಳನ್ನು ಎಡಿಟ್ ಮಾಡಿ ಟ್ರೇಲರ್​ನಲ್ಲಿ ಹಾಕಲಾಗಿದೆ. ವಿಲನ್ ಪಾತ್ರದಲ್ಲಿ ಕನ್ನಡದ ರವಿಶಂಕರ್ ಅವರು ಮಿಂಚಿದ್ದಾರೆ.

‘ಭೋಲಾ ಶಂಕರ್’ ಟ್ರೇಲರ್​ನಲ್ಲಿ ಮಿಂಚಿದ ಚಿರಂಜೀವಿ; ಖಡಕ್ ವಿಲನ್ ಆಗಿ ಕಾಣಿಸಿಕೊಂಡ ರವಿಶಂಕರ್
ಚಿರಂಜೀವಿ-ರವಿಶಂಕರ್
ರಾಜೇಶ್ ದುಗ್ಗುಮನೆ
|

Updated on: Jul 28, 2023 | 9:02 AM

Share

ಚಿರಂಜೀವಿ  ‘ಭೋಲಾ ಶಂಕರ್’ ಸಿನಿಮಾದಲ್ಲಿ (Bhola Shankar Movie) ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಆ್ಯಕ್ಷನ್ ಹಾಗೂ ಕಾಮಿಡಿ ಶೈಲಿಯಲ್ಲಿ ‘ಭೋಲಾ ಶಂಕರ್’ ಟ್ರೇಲರ್ ಮೂಡಿ ಬಂದಿದೆ. ತಮನ್ನಾ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಕೀರ್ತಿ ಸುರೇಶ್ (Keerthy Suresh) ನಾಯಕನ ತಂಗಿಯ ಪಾತ್ರ  ನಿರ್ವಹಿಸಿದ್ದಾರೆ. ಚಿತ್ರ ಆಗಸ್ಟ್ 11ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಸದ್ಯ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಮಾಡಿದೆ ಟ್ರೇಲರ್. ಈ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಆ್ಯಕ್ಷನ್, ಎಮೋಷನ್, ಕಾಮಿಡಿ ದೃಶ್ಯಗಳನ್ನು ಎಡಿಟ್ ಮಾಡಿ ಟ್ರೇಲರ್​ನಲ್ಲಿ ಹಾಕಲಾಗಿದೆ. ವಿಲನ್ ಪಾತ್ರದಲ್ಲಿ ಕನ್ನಡದ ರವಿಶಂಕರ್ ಅವರು ಮಿಂಚಿದ್ದಾರೆ. ಅವರು ಹೇಳುವ ಖಡಕ್ ಡೈಲಾಗ್ ಎಲ್ಲರ ಗಮನ ಸೆಳೆದಿದೆ. ಚಿರಂಜೀವಿ ಅವರ ಮಾಸ್ ಡೈಲಾಗ್ ಡೆಲಿವರಿ ಟ್ರೇಲರ್​ನ ವಿಶೇಷ ಆಕರ್ಷಣೆಯಾಗಿದೆ. ಟ್ರೇಲರ್‌ನ ಕೊನೆಯಲ್ಲಿ ಪವನ್ ಕಲ್ಯಾಣ್ ಅವರ ಮ್ಯಾನರಿಸಂ ಅನ್ನು ಚಿರು ಅನುಕರಿಸಿದ್ದಾರೆ. ಇದು ಕೂಡ ಗಮನ ಸೆಳೆಯುತ್ತಿದೆ.

‘ನನ್ನ  ಹಿಂದೆ ಮಾಫಿಯಾ ಇದೆ’ ಎಂದು ರವಿಶಂಕರ್ ಹೇಳುತ್ತಾರೆ. ‘ಮಾಫಿಯಾ ನಿನ್ನ ಹಿಂದೆ ಇದ್ದರೆ ಜಗತ್ತೇ ನನ್ನ ಹಿಂದೆ ಇದೆ’ ಎಂದು ರವಿಶಂಕರ್​ಗೆ ತಿರುಗೇಟು ನೀಡುವ ಚಿರು ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಸಿನಿಮಾದಲ್ಲಿ ಚಿರಂಜೀವಿ ಅವರು ಮಾಸ್ ಆ್ಯಂಡ್ ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ. ವೆನ್ನೆಲ ಕಿಶೋರ್ ಕೂಡ ಟ್ರೇಲರ್​ನಲ್ಲಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಸೆಟ್​ನಲ್ಲಿ ಇದ್ದರೆ ಚಿರು, ಜೋಶ್ ಶುರು: ಹೊಸ ಸಿನಿಮಾ ಚಿತ್ರೀಕರಣದ ವಿಡಿಯೋ ಹಂಚಿಕೊಂಡ ಮೆಗಾಸ್ಟಾರ್

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕ್ಲ್ಯಾಶ್ ಏರ್ಪಡುತ್ತಿದೆ. ಹಿಂದಿಯಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಒಹ್ ಮೈ ಗಾಡ್ 2’ ಸಿನಿಮಾ ರಿಲೀಸ್ (ಆಗಸ್ಟ್​ 11) ಆಗುತ್ತಿದೆ. ತಮಿಳಿನಲ್ಲಿ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ರಿಲೀಸ್ (ಆಗಸ್ಟ್​ 10) ಆಗಲಿದೆ. ಇದರ ಜೊತೆಗೆ ‘ಭೋಲಾ ಶಂಕರ್’ ಕೂಡ ಸ್ಪರ್ಧೆಗೆ ಇಳಿದಿದೆ. ಎಲ್ಲಾ ಸಿನಿಮಾಗಳು ಬೇರೆಬೇರೆ ಶೈಲಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ