ಜಾನ್ವಿ-ಅಶ್ವಿನಿ ವಿರುದ್ಧ ಸುದೀಪ್ ರೌದ್ರಾವತಾರ? ಮರುಕಳಿಸುತ್ತಾ ಸೀಸನ್ 10ರ ಘಟನೆ?
ಬಿಗ್ ಬಾಸ್ ಕನ್ನಡ 12ರಲ್ಲಿ ರಕ್ಷಿತಾ ಶೆಟ್ಟಿಗೆ ಅಶ್ವಿನಿ ಗೌಡ ಮತ್ತು ಜಾನ್ವಿ ನೀಡುತ್ತಿರುವ ಕಿರುಕುಳ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸೀಸನ್ 10ರ ವಿನಯ್ ಗೌಡ ಘಟನೆ ಮರುಕಳಿಸುವ ಸಾಧ್ಯತೆಯಿದ್ದು, ಸುದೀಪ್ ಅವರು ಅಶ್ವಿನಿ-ಜಾನ್ವಿಗೆ ತಕ್ಕ ಪಾಠ ಕಲಿಸಬೇಕು ಎಂದು ವೀಕ್ಷಕರು ಒತ್ತಾಯಿಸುತ್ತಿದ್ದಾರೆ. ರಕ್ಷಿತಾ ಪರ ನಿಲ್ಲುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕೂಗು ಕೇಳಿಬರುತ್ತಿದೆ.

ಬಿಗ್ ಬಾಸ್ (Bigg Boss) ಸೀಸನ್ 10ರಲ್ಲಿ ವಿನಯ್ ಗೌಡ ಅವರು ಡ್ರೋನ್ ಪ್ರತಾಪ್ನ ಕಾಲೆಳೆಯಲು ಹೋಗಿ ಬಾಯಿಗೆ ಬಂದಂತೆಲ್ಲ ಮಾತನಾಡಿದ್ದರು. ಅದು ನೋಡುಗರಿಗೆ ಕಿರುಕುಳದ ರೀತಿಯೇ ಕಾಣಿಸಿತ್ತು. ಈ ವೇಳೆ ಸುದೀಪ್ ಅವರು ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದರು. ಅವರ ಮಾತಿಗೆ ವಿನಯ್ ಗೌಡ ಅವರೇ ಗಪ್ ಚುಪ್ ಆಗಿದ್ದರು. ಈಗ ಈ ಘಟನೆ ಮತ್ತೆ ಮರುಕಳಿಸುತ್ತಾ ಎನ್ನುವ ಪ್ರಶ್ನೆ ಮೂಡಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳಬೇಕು ಎಂಬುದು ಅನೇಕರ ಒತ್ತಾಸೆ.
ಕರಾವಳಿ ಮೂಲದ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಕಷ್ಟಪಟ್ಟು ಕನ್ನಡ ಮಾತನಾಡುವ ಪ್ರಯತ್ನ ಮಾಡುತ್ತಾರೆ. ಅವರ ಮಾತಿಗೆ ದೊಡ್ಡ ಬಳಗವೇ ಸೃಷ್ಟಿ ಆಗಿದೆ. ಈಗ ರಕ್ಷಿತಾ ಶೆಟ್ಟಿ ಅವರಿಗೆ ಅಶ್ವಿನಿ ಹಾಗೂ ಜಾನ್ವಿ ಕಿರುಕುಳ ನೀಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ರಕ್ಷಿತಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ. ಸುದೀಪ್ ಅವರು ಈ ವಿಚಾರವನ್ನು ಕೈಗೆತ್ತಿಕೊಂಡು ಜಾನ್ವಿ ಹಾಗೂ ಅಶ್ವಿನಿಗೆ ಕ್ಲಾಸ್ ತೆಗೆದುಕೊಳ್ಳಬೇಕು ಎಂಬುದು ಅನೇಕರ ಕೋರಿಕೆ.
ಅಶ್ವಿನಿ ಹಾಗೂ ಜಾನ್ವಿ ಅವರು ಬಿಗ್ ಬಾಸ್ ಮನೆಯಲ್ಲಿ ಗೆಜ್ಜೆ ಶಬ್ದ ಮಾಡಿ, ಅದನ್ನು ರಕ್ಷಿತಾ ಮೇಲೆ ಹಾಕಿದ್ದರು. ‘ರಕ್ಷಿತಾ ನಾಗವಲ್ಲಿ ರೀತಿ ಆಡ್ತಾರೆ’ ಎಂದೆಲ್ಲ ಆರೋಪ ಮಾಡಿದ್ದರು. ಇದೇ ವಿಚಾರ ಇಟ್ಟುಕೊಂಡ ವಾರ ಪೂರ್ತಿ ಎಳೆದಾಡಿದ್ದರು. ರಕ್ಷಿತಾಗೆ ಪದೇ ಪದೇ ಕಿರುಕುಳ ಕೊಡುವ ಪ್ರಯತ್ನ ಮಾಡಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ರಕ್ಷಿತಾ ಪರ ವಹಿಸಿಕೊಂಡು ಮಾತನಾಡಲೇಬೇಕಿದೆ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.
ಇದನ್ನೂ ಓದಿ: ಚಪ್ಪಲಿನ ಶಾಲಲ್ಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್
ಅಶ್ವಿನಿ ಹಾಗೂ ಜಾನ್ವಿ ಅವರು ಒಟ್ಟೊಟ್ಟಿಗೆ ಇದ್ದಾರೆ. ಸದಾ ಕೆಟ್ಟ ವಿಚಾರಗಳನ್ನೇ ಇವರು ಪ್ರಮೋಟ್ ಮಾಡುತ್ತಿದ್ದಾರೆ. ಇವರ ಹಾರಾಟಕ್ಕೆ ಸುದೀಪ್ ಅಂಕುಶ ಹಾಕುವ ಸಾಧ್ಯತೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸುದೀಪ್ ಈ ವಿಚಾರದಲ್ಲಿ ಮೌನ ವಹಿಸಿದರೆ ತಪ್ಪಾಗುತ್ತದೆ ಎಂಬುದು ಅನೇಕರ ಅಭಿಪ್ರಾಯ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:40 am, Sat, 18 October 25








