ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್​ ಬಂಧನ

ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಜಗದೀಶ್ ಮತ್ತು ಅವರ ಗನ್ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ನಡೆದ ಘಟನೆಯಲ್ಲಿ ಗನ್ಮ್ಯಾನ್​ ಕಾನೂನುಬಾಹಿರವಾಗಿ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದಲ್ಲಿ ಮಾತ್ರ ಲೈಸೆನ್ಸ್ ಹೊಂದಿದ್ದ ಶಸ್ತ್ರಾಸ್ತ್ರವನ್ನು ಕರ್ನಾಟಕದಲ್ಲಿ ಬಳಸಿದ್ದಕ್ಕೆ ಬಂಧನವಾಗಿದೆ. ದೂರುದಾರನ ಮೇಲೂ ಹಲ್ಲೆ ಆರೋಪವಿದೆ.

ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್​ ಬಂಧನ
ವಕೀಲ ಜಗದೀಶ್
Follow us
Jagadisha B
| Updated By: ವಿವೇಕ ಬಿರಾದಾರ

Updated on:Jan 25, 2025 | 10:40 AM

ಬೆಂಗಳೂರು, ಜನವರಿ 25: ಬಿಗ್​ ಬಾಸ್​ ಕನ್ನಡ (Big Boss) ಸೀಸನ್​ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ (Jagadish) ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್​ ಜಗದೀಶ್​ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಜಗದೀಶ್ ಮೇಲೆ ಮತ್ತೆ ಹಲ್ಲೆ, ರಕ್ತ ಸಿಕ್ತನಾಗಿ ಲೈವ್ ಬಂದ ವಕೀಲ

ಇತ್ತೀಚೆಗೆ ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಕಿರಿಕ್ ಆಗಿತ್ತು. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೋರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.

ಈ ಬೆನ್ನಲ್ಲೇ ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಅಟ್ಯಾಕ್ ಆಗಿದೆ. ಕೆಲವರು ಕೋಲು ದೊಣ್ಣೆ ತೆಗೆದುಕೊಂಡು ಬಂದು ಜಗದೀಶ್ ಅವರ ಕಾರನ್ನು ಪೀಸ್ ಪೀಸ್ ಮಾಡಿದ್ದಾರೆ. ಜಗದೀಶ್​ ಅವರ ಮೇಲೆ ಹಲ್ಲೆ ಮಾಡಲಾಗಿತ್ತು. ಈ ವೇಳೆ ಜಗದೀಶ್​ ಅವರ ಗನ್​ ಮ್ಯಾನ್​ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sat, 25 January 25