11 ದಿನದ ನಂತರ ರೀಲ್ಸ್ ರಾಣಿ ಸೋನು ಶ್ರೀನಿವಾಸಗೌಡ ಜೈಲಿನಿಂದ ಬಿಡುಗಡೆ

ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ರೀಲ್ಸ್ ರಾಣಿ ಸೋನು ಶ್ರೀನಿವಾಸಗೌಡ 11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 

11 ದಿನದ ನಂತರ ರೀಲ್ಸ್ ರಾಣಿ  ಸೋನು ಶ್ರೀನಿವಾಸಗೌಡ ಜೈಲಿನಿಂದ ಬಿಡುಗಡೆ
ಸೋನು ಶ್ರೀನಿವಾಸಗೌಡ
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on:Apr 06, 2024 | 9:06 PM

ಬೆಂಗಳೂರು, ಏಪ್ರಿಲ್​ 06: ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ರೀಲ್ಸ್ ರಾಣಿ ಸೋನು ಶ್ರೀನಿವಾಸಗೌಡ  (Sonu Srinivas Gowda) 11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು.

ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ.

ಇದನ್ನೂ ಓದಿ: ಜಾಮೀನು ಸಿಕ್ಕರೂ ರೀಲ್ಸ್ ರಾಣಿ ಸೋನುಗೌಡಗೆ ಇಂದು ಸಹ ಜೈಲೇ ಗತಿ

ಮಾರ್ಚ್ 2ರಂದು ಸೋನುಗೌಡ ಓರ್ವ ಬಾಲಕಿಯನ್ನ ದತ್ತು ಪಡೆದಿದ್ದೀನಿ ಅಂತ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಬಿಲ್ಡಪ್ ಕೊಟ್ಟಿದ್ದರು. ಇದೇ ಎಡವಟ್ಟು ರೀಲ್ಸ್ ಸ್ಟಾರ್​ಗೆ ಮುಳುವಾಗಿತ್ತು. ಇಷ್ಟಕ್ಕೂ ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ಸೋನು ದತ್ತು ಪಡೆದುಕೊಂಡಿದ್ದರು. ಈ ದತ್ತು ಪ್ರಕ್ರಿಯೆ ಕಾನೂನುಬಾಹಿರ ಎಂಬ ಆರೋಪ ಕೇಳಿಬಂದಿತ್ತು. ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ, ಬಾಲ ನ್ಯಾಯ ಕಾಯಿದೆ, ಹಿಂದೂ ದತ್ತು ಕಾಯಿದೆ ಉಲ್ಲಂಘನೆಯಡಿ ಸೋನು ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಸೋನು ಗೌಡಗೆ ಜಾಮೀನು ನೀಡಲು ಕೋರ್ಟ್ ವಿಧಿಸಿದ ಷರತ್ತುಗಳೇನು?

ಇನ್ನು ಸೋನುಗೌಡ ದತ್ತು ಪಡೆದ ಮಗುವಿನ ಗುರುತು ರಿವೀಲ್ ಮಾಡಿದ್ದರು. ಬಾಲಕಿಗೆ ನೀಡಿರುವ ಸೌಕರ್ಯ, ಬಟ್ಟೆ-ಬರೆ ಪಾಲನೆ, ಪೋಷಣೆ ಬಗ್ಗೆ ವಿವರಿಸಿದ್ದರು. ಈ ಮೂಲಕ ಮಗುವಿನ ಆತ್ಮಾಭಿಮಾನಕ್ಕೆ ಧಕ್ಕೆ ತಂದಿದ್ದರು. ಮಾರ್ಚ್ ತಿಂಗಳಲ್ಲಿ ಬಾಲಕಿಯನ್ನ ಶಾಲೆಗೆ ಕಳಿಸಿಲ್ಲ ಅನ್ನೋದು ಬಯಲಾಗಿತ್ತು. ಹೆಚ್ಚಿನ ವಿಚಾರಣೆ ಅಗತ್ಯವಿದ್ದು ಪೊಲೀಸರು 3 ದಿನ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದತ್ತು ಪಡೆಯುವ ವ್ಯಕ್ತಿ ತನ್ನ ಅರ್ಹತೆಯ ಕುರಿತು ಕೇಂದ್ರ ಹಾಗೂ ರಾಜ್ಯ ದತ್ತು ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಕಾನೂನಿನ ನಿಯಮಗಳನ್ನ ಅನುಸರಿಸಬೇಕು. ಆದರೆ ಸೋನುಗೌಡಗೆ ದತ್ತು ಪಡೆಯುವ ಅರ್ಹತೆ ಇಲ್ಲ. ಇಲ್ಲಿ ಮೇಲ್ನೋಟಕ್ಕೆ ಮಗುವಿನ ಮಾರಾಟವಾಗಿರೋ ಅನುಮಾನ ಮೂಡಿತ್ತು. ಹೀಗಾಗಿ ಸೋನುಗೌಡ ಜೊತೆ ಇದ್ದ ಮಗುವನ್ನು ಬ್ಯಾಡರಹಳ್ಳಿ ಪೊಲೀಸರು ರಕ್ಷಿಸಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:47 pm, Sat, 6 April 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್