ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್​! ಉದ್ಯಮಿ ಜೊತೆ ಸಿಂಪಲ್​ ವಿವಾಹ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್​! ಉದ್ಯಮಿ ಜೊತೆ ಸಿಂಪಲ್​ ವಿವಾಹ
ಚೈತ್ರಾ ಕೋಟೂರ್​ -ನಾಗಾರ್ಜುನ್

Chaithra Kotoor: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ತುಂಬ ಸರಳವಾಗಿ ಚೈತ್ರಾ ಮತ್ತು ನಾಗಾರ್ಜುನ್​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಮದುವೆ ಫೋಟೋಗಳು ಹೊರಬಂದಿದ್ದು, ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

Madan Kumar

|

Mar 28, 2021 | 1:43 PM

ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್​ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು.

ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿ ಹೊರಬಂದ ಬಳಿಕ ನಾಗಾರ್ಜುನ್​ ಪರಿಚಯ ಆಯಿತು. ನಂತರ ಅವರ ನಡುವೆ ಪ್ರೀತಿ ಚಿಗುರಿತ್ತು. ಈಗ ಆ ಪ್ರೀತಿಗೆ ಮದುವೆಯ ಮುದ್ರೆ ಬಿದ್ದಿದೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ತುಂಬ ಸರಳವಾಗಿ ಚೈತ್ರಾ ಮತ್ತು ನಾಗಾರ್ಜುನ್​ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ಹೀಗೆ ಸಿಂಪಲ್​ ಆಗಿ ಮದುವೆ ಆಗಬೇಕು ಎಂಬುದೇ ನನ್ನ ಉದ್ದೇಶ ಆಗಿತ್ತು. ಅದ್ದೂರಿ ವಿವಾಹದ ಬಗ್ಗೆ ನನಗೆ ಮೊದಲಿನಿಂದಲೂ ಆಸಕ್ತಿ ಇರಲಿಲ್ಲ. ಹಾಗಾಗಿ ಈ ನಿರ್ಧಾರ ತೆಗೆದುಕೊಂಡೆವು. ನನ್ನ ವೃತ್ತಿಜೀವನಕ್ಕೆ ನಾಗಾರ್ಜುನ್ ಬೆಂಬಲವಾಗಿದ್ದಾರೆ’ ಎಂದು ಚೈತ್ರಾ ಕೋಟೂರ್​ ಅವರು ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ್ದಾರೆ.

ಚೈತ್ರಾ ಮತ್ತು ನಾಗಾರ್ಜುನ್​ ಹಾರ ಬದಲಾಯಿಸಿಕೊಂಡಿರುವ ಫೋಟೋಗಳು ಹೊರಬಂದಿವೆ. ಅದನ್ನು ಕಂಡು ಎಲ್ಲರೂ ನವ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ. ರಂಗಭೂಮಿ ಕಲಾವಿದೆಯಾಗಿ, ಸಿನಿಮಾ ನಟಿಯಾಗಿ ಮಾತ್ರವಲ್ಲದೆ ಬರಹಗಾರ್ತಿಯಾಗಿಯೂ ಚೈತ್ರಾ ಗುರುತಿಸಿಕೊಂಡಿದ್ದಾರೆ. ‘ಸೂಜಿದಾರ’ ಸಿನಿಮಾದಲ್ಲಿ ಅವರೊಂದು ಗಮನಾರ್ಹ ಪಾತ್ರ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ನಂತರ ಜಾಹೀರಾತು ನಿರ್ದೇಶನದಲ್ಲಿ ಅವರು ತೊಡಗಿಕೊಂಡರು. ಸಿನಿಮಾ ನಿರ್ದೇಶನಕ್ಕೂ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಒಂದು ಆಲ್ಬಂ ಹಾಡಿನಲ್ಲೂ ಚೈತ್ರಾ ನಟಿಸಿದ್ದು, ಅವರೇ ಸಾಹಿತ್ಯ ಬರೆದಿದ್ದಾರೆ. ಈ ನಡುವೆ ಅವರ ಮದುವೆ ಸುದ್ದಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Hudugaru Tumba Ollevru ಹುಡುಗರು ತುಂಬಾ ಒಳ್ಳೆಯವ್ರು ಎಂದು ಹಾಡಿ ಹೊಗಳಿದ ಚೈತ್ರಾ ಕೋಟೂರು

Follow us on

Related Stories

Most Read Stories

Click on your DTH Provider to Add TV9 Kannada