AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
ರಾಜೇಶ್ ದುಗ್ಗುಮನೆ
|

Updated on: Mar 28, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ