ಕನ್ನಡ ಬಿಗ್ ಬಾಸ್ 8 ಯಶಸ್ವಿಯಾಗಿ 50 ದಿನಳನ್ನು ಪೂರೈಸಿ ಮುನ್ನಡೆಯುತ್ತಿದೆ. ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್ ಏಳನೆ ವಾರ ಬಿಗ್ ಬಾಸ್ ವೇದಿಕೆ ಏರಿರಲಿಲ್ಲ. ಈ ವಾರ ಅವರು ಬಿಗ್ ಬಾಸ್ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ಏಳು ಸೀಸನ್ಗಳನ್ನು ಯಶಸ್ವಿಯಾಗಿ ಪೂರೈಸಿ 8ನೇ ಸೀಸನ್ 50 ದಿನ ಪೂರ್ಣಗೊಂಡಿದೆ. ಸುದೀಪ್ ಸಂಭಾವನೆ ಬಗ್ಗೆಯೂ ಸಾಕಷ್ಟು ಪ್ರಶ್ನೆಗಳು ಹರಿದಾಡುತ್ತಿವೆ. ಹಾಗಾದರೆ, ಸುದೀಪ್ ಒಂದು ಸೀಸನ್ಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.
ಸೀಸನ್ 1ರಿಂದ ಕನ್ನಡ ಬಿಗ್ ಬಾಸ್ಅನ್ನು ಸುದೀಪ್ ಅವರೇ ನಡೆಸಿಕೊಡುತ್ತಿದ್ದಾರೆ. ಎಂಟನೇ ಸೀಸನ್ ಕೂಡ ಅವರೇ ನಡೆಸಿಕೊಡುತ್ತಿದ್ದಾರೆ. ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಸುದೀಪ್ ಬಿಗ್ ಬಾಸ್ ಸ್ಪರ್ಧಿಗಳ ಜತೆ ಮಾತುಕತೆ ನಡೆಸುತ್ತಾರೆ. ಸುದೀಪ್ ತಮ್ಮ ಮಾತಿನ ಮೂಲಕವೇ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ನಿರೂಪಣೆ, ಅವರ ಉಡುಗೆ ಬಿಗ್ ಬಾಸ್ಗೆ ಒಂದು ಶೋಭೆ ಎಂದರೆ ತಪ್ಪಾಗಲಾರದು. ಹೀಗಾಗಿ, ಈ ಶೋ ನಡೆಸಿಕೊಡುವುದಕ್ಕೆ ಸುದೀಪ್ ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ.
ಬಿಗ್ ಬಾಸ್ ಮೂರು ಸೀಸನ್ಗಳನ್ನು ಯಾವುದೇ ಒಪ್ಪಂದ ಇಲ್ಲದೆ ಸುದೀಪ್ ನಡೆಸಿಕೊಟ್ಟಿದ್ದರು. ನಂತರದ ಐದು ಸೀಸನ್ಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು ಎನ್ನುತ್ತಿವೆ ಮೂಲಗಳು. ಸೀಸನ್ 8ಕ್ಕೆ ಈ ಒಪ್ಪಂದ ಪೂರ್ಣಗೊಳ್ಳಲಿದೆ. ಈ ಐದು ಸೀಸನ್ಗೆ ಸುದೀಪ್ 20 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅಂದರೆ, ಒಂದು ಸೀಸನ್ಗೆ 4 ಕೋಟಿ ರೂಪಾಯಿ ಆಗಲಿದೆ.
ಇನ್ನು, 8 ಸೀಸನ್ ಪೂರ್ಣಗೊಂಡ ನಂತರವೂ ಸುದೀಪ್ ಅವರೇ ಬಿಗ್ ಬಾಸ್ ನಡೆಸಿಕೊಡುವ ಸಾಧ್ಯತೆ ಇದೆ. ಸಾಕಷ್ಟು ವೀಕ್ಷಕರು ಸುದೀಪ್ಗಾಗಿಯೇ ಬಿಗ್ ಬಾಸ್ ನೋಡುವವರಿದ್ದಾರೆ. ಹೀಗಾಗಿ, ಮುಂದಿನ ಸೀಸನ್ಗಳನ್ನೂ ಅವರೇ ನಡೆಸಿಕೊಡಬಹುದು ಎನ್ನಲಾಗುತ್ತಿದೆ.
ಬಿಗ್ ಬಾಸ್ ಸೀಸನ್ 9ರ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮುಖ್ಯಸ್ಥ ಪರಮೇಶ್ವರ್ ಗುಂಡ್ಕಲ್ ಮಾಹಿತಿ ನೀಡಿದ್ದರು. ಅಕ್ಟೋಬರ್ ವೇಳೆಗೆ ಮತ್ತೊಂದು ಸೀಸನ್ನೊಂದಿಗೆ ಪ್ರೇಕ್ಷಕರ ಎದುರು ಬರುವ ಬಗ್ಗೆ ಅವರು ಸೂಚನೆ ನೀಡಿದ್ದರು. ಹೀಗಾಗಿ, ಮತ್ತೊಂದು ಸೀಸನ್ ಕೂಡ ಶೀಘ್ರವೇ ಆರಂಭವಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ: Kichcha Sudeep: ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್ಪ್ರೈಸ್; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್ ಧ್ವನಿ!
ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?