Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Bigg Boss Kannada: ಬಿಗ್​ ಬಾಸ್​ ಕನ್ನಡದಲ್ಲಿ ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?
ಕಿಚ್ಚ ಸುದೀಪ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Apr 16, 2021 | 2:51 PM

8 ಸೀಸನ್​ಗಳಿಂದ ಯಶಸ್ವಿಯಾಗಿ ಬಿಗ್​ ಬಾಸ್​ ನಿರೂಪಣೆ ಮಾಡಿಕೊಂಡು ಬಂದಿರುವ ಕೀರ್ತಿ ಕಿಚ್ಚ ಸುದೀಪ್​ ಅವರಿಗೆ ಸಲ್ಲುತ್ತದೆ. ಒಮ್ಮೆಯೂ ಅವರು ಈ ಶೋ ತಪ್ಪಿಸಿಕೊಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ವೀಕೆಂಡ್​ನಲ್ಲಿ ಅವರ ಅನುಪಸ್ಥಿತಿ ಕಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಸುದೀಪ್​ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ವಿಶ್ರಾಂತಿ ಪಡೆಯುವ ಅನಿವಾರ್ಯತೆ ಇದೆ. ಹಾಗಾಗಿ ಅವರು ಈ ವಾರ ಬಿಗ್​ ಬಾಸ್​ ನಡೆಸಿಕೊಡುವುದು ಅನುಮಾನ ಎನ್ನಲಾಗಿದೆ.

ಸಿನಿಮಾ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಸುದೀಪ್​ ಪ್ರತಿ ವೀಕೆಂಡ್​ನಲ್ಲಿ ಬಿಗ್ ಬಾಸ್​ಗಾಗಿ ಸಮಯ ಮಾಡಿಕೊಳ್ಳುತ್ತಿದ್ದರು. ಶೂಟಿಂಗ್​ ಸಲುವಾಗಿ ಎಷ್ಟೇ ದೂರ ಹೋಗಿದ್ದರೂ ಶನಿವಾರ ಮತ್ತು ಭಾನುವಾರ ಬೆಂಗಳೂರಿಗೆ ವಾಪಸ್​ ಬಂದುಬಿಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಬಿಗ್​ ಬಾಸ್​ ನಿರೂಪಣೆಯನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡಲಾಗುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಒಂದು ವೇಳೆ ಸುದೀಪ್​ ಈ ವಾರ ಶೋ ನಡೆಸಿಕೊಡಲು ಸಾಧ್ಯವಾಗದೇ ಇದ್ದರೆ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ 7ನೇ ವಾರ ಬಿಗ್​ ಫೈಟ್​! ಘಟಾನುಘಟಿಗಳೆಲ್ಲ ನಾಮಿನೇಟ್​

ವೈಷ್ಣವಿಗೆ ತುರ್ತಾಗಿ ಗಂಡ ಬೇಕಂತೆ! ಬಿಗ್​ ಬಾಸ್​ ಮನೆಯಲ್ಲಿ ಸನ್ನಿಧಿಯ ಹೊಸ ಬೇಡಿಕೆ

Published On - 8:12 am, Fri, 16 April 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ