Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಹೊತ್ತಿಕೊಂಡಿತು ದ್ವೇಷದ ಬೆಂಕಿ; ಪ್ರಶಾಂತ್ ಸಂಬರಗಿ ಫೋಟೋ ಸುಟ್ಟ ಸ್ಪರ್ಧಿಗಳು
Follow us
ರಾಜೇಶ್ ದುಗ್ಗುಮನೆ
|

Updated on:Jun 23, 2021 | 12:30 PM

ಬಿಗ್​ ಬಾಸ್​ ಸ್ಪರ್ಧಿಗಳು ಏನೇ ಮಾತನಾಡಿಕೊಂಡರೂ ಅದು ಕ್ಯಾಮೆರಾ ಹಾಗೂ ಪ್ರೇಕ್ಷಕರ ನಡುವೆ ಮಾತ್ರ ಇರುತ್ತದೆ. ಸ್ಪರ್ಧಿಗಳು ಸೀಕ್ರೆಟ್​ ಆಗಿ ಏನೇ ಮಾತನಾಡಿಕೊಂಡರು ಮತ್ತೊಂದು ಸ್ಪರ್ಧಿಗೆ ಅದು ತಿಳಿಯುವುದಿಲ್ಲ. ಇದು ಬಿಗ್​ ಬಾಸ್​ ಮನೆಯ ಅಲಿಖಿತ ನಿಯಮ. ಆದರೆ, ಇದೇ ಮೊದಲ ಬಾರಿಗೆ ಈ ನಿಯಮ ಮುರಿಯಲ್ಪಟ್ಟಿದೆ. ಎಲ್ಲಾ ಸ್ಪರ್ಧಿಗಳು 70 ದಿನದ ಎಪಿಸೋಡ್​ಗಳನ್ನು ನೋಡಿ ಮತ್ತೆ ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಪರಿಣಾಮ ಮನೆಯಲ್ಲಿ ಮೊದಲ ದಿನವೇ ದೊಡ್ಡ ಬೆಂಕಿ ಹೊತ್ತಿಕೊಂಡಿದೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ. ಈ ಸಂಚಿಕೆ ಇಂದು (ಜೂನ್​ 23) ಪ್ರಸಾರವಾಗಲಿದೆ. ವಿಶೇಷ ಎಂದರೆ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಷನ್​ ನಡೆದಿದೆ. ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

ಕ್ಯಾಮೆರಾ ಎದುರು ಒಂದು ರೀತಿ ಮಾತನಾಡುತ್ತಿದ್ದ ಅನೇಕರು ಕ್ಯಾಮೆರಾ ಹಿಂದೆ ಮತ್ತೊಂದು ರೀತಿಯಲ್ಲಿ ಇರುತ್ತಿದ್ದರು. ಈಗ ಮನೆ ಸೇರಿರುವ ಎಲ್ಲರಿಗೂ ಯಾರು ಹೇಗೆ ಅನ್ನೋದು ಗೊತ್ತಾಗಿದೆ. ಈ ಕಾರಣಕ್ಕೆ ಮೊದಲ ದಿನ ನಡೆದ ಎಲಿಮಿನೇಷನ್​ನಲ್ಲಿ ಒಬ್ಬರಿಗೊಬ್ಬರು ಸಿಟ್ಟು ಕಾರಿದ್ದಾರೆ.

ಪ್ರಶಾಂತ್​ ಸಂಬರಗಿ ಎದುರು ಒಂದು ರೀತಿ ನಡೆದುಕೊಂಡು, ಹಿಂದಿನಿಂದ ಎಲ್ಲರಿಗೂ ಬಯ್ಯುತ್ತಿದ್ದರು. ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ನಿಧಿ, ರಘು ಸೇರಿ ಅನೇಕರು ಪ್ರಶಾಂತ್​ ಸಂಬರಗಿ ಫೋಟೋವನ್ನು ಬೆಂಕಿಗೆ ಹಾಕಿದ್ದಾರೆ. ಇನ್ನು, ಚಕ್ರವರ್ತಿ ಚಂದ್ರಚೂಡ್​, ರಘು ಗೌಡ, ಮಂಜು ಪಾವಗಡ ವಿರುದ್ಧವೂ ಅನೇಕರು ಸಿಟ್ಟು ಮಾಡಿಕೊಂಡಿದ್ದಾರೆ. ಈ ಸಂಚಿಕೆ ಇಂದು ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಬಗ್ಗೆ ಕಿಚ್ಚ ಸುದೀಪ್​ ಉತ್ಸಾಹದ ಮಾತು; ಹೆಚ್ಚು ಖುಷಿ ಆಗಿದ್ದು ನಟಿ ಜೆನಿಲಿಯಾ

Published On - 12:28 pm, Wed, 23 June 21

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ