AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಏರಡನೇ ಬಾರಿ ಬಿಗ್​​ಬಾಸ್​​ಗೆ ಎಂಟ್ರಿ ಕೊಟ್ಟ ನಿರ್ದೇಶಕ ಓಂ ಪ್ರಕಾಶ್ ರಾವ್

Bigg Boss Kannada season 13: ಬಿಗ್​​ಬಾಸ್ ಕನ್ನಡ 13 ಪ್ರಾರಂಭವಾಗಿದ್ದು, ಸುದೀಪ್ ಅವರು ಒಬ್ಬೊಬ್ಬರಾಗಿ ಸ್ಪರ್ಧಿಗಳನ್ನು ಮನೆಯ ಒಳಗೆ ಕಳಿಸುತ್ತಿದ್ದಾರೆ. ಈ ಬಾರಿಯೂ ಸಹ ಭಿನ್ನ-ಭಿನ್ನ ವ್ಯಕ್ತಿತ್ವದ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದು, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಎರಡನೇ ಬಾರಿ ಸ್ಪರ್ಧಿಯಾಗಿ ಬಿಗ್​​ಬಾಸ್ ಮನೆಗೆ ಹೋಗಿದ್ದಾರೆ.

Bigg Boss Kannada: ಏರಡನೇ ಬಾರಿ ಬಿಗ್​​ಬಾಸ್​​ಗೆ ಎಂಟ್ರಿ ಕೊಟ್ಟ ನಿರ್ದೇಶಕ ಓಂ ಪ್ರಕಾಶ್ ರಾವ್
Om Prakash Rao
ಮಂಜುನಾಥ ಸಿ.
|

Updated on:Sep 06, 2026 | 5:35 PM

Share

ಮುಖ್ಯಾಂಶಗಳು

  • ಬಿಗ್​​ಬಾಸ್ ಕನ್ನಡ ಸೀಸನ್ 13 ಪ್ರಾರಂಭವಾಗಿದೆ.
  • ಓಂ ಪ್ರಕಾಶ್ ರಾವ್ ಅವರು ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
  • ಓಂ ಪ್ರಕಾಶ್ ರಾವ್ ಎರಡನೇ ಬಾರಿ ಎಂಟ್ರಿ ಕೊಟ್ಟಿದ್ದಾರೆ.

ಬಿಗ್​​ಬಾಸ್ ಕನ್ನಡ ಸೀಸನ್ 13 ಶುರುವಾಗಿದೆ. ಗ್ರ್ಯಾಂಡ್ ಓಪನಿಂಗ್​​ನ ಶೂಟಿಂಗ್​ ಜಾಲಿವುಡ್​​ ಸ್ಟುಡಿಯೋನಲ್ಲಿ ಚಾಲ್ತಿಯಲ್ಲಿದೆ. ಹಲವಾರು ಸ್ಪರ್ಧಿಗಳು ಈಗಾಗಲೇ ಬಿಗ್​​ಬಾಸ್ ಮನೆಗೆ ಸೇರಿದ್ದಾರೆ. ಕಲರ್ಸ್ ವಾಹಿನಿ ಈಗಾಗಲೇ ಗ್ರ್ಯಾಂಡ್ ಓಪನಿಂಗ್​​ನ ಕೆಲ ಪ್ರೋಮೊ ವಿಡಿಯೋಗಳನ್ನು ಹಂಚಿಕೊಂಡಿದೆ. ಈ ಹಿಂದೆ ಹಂಚಿಕೊಂಡಿದ್ದ ಪ್ರೋಮೊನಲ್ಲಿ ನಟಿ ಸಂಗೀತಾ ಭಟ್ ಮತ್ತು ನಟಿ ಕಾವ್ಯಾ ಗೌಡ ಅವರುಗಳು ಬಿಗ್​​ಬಾಸ್ ಮನೆಗೆ ಹೋಗಿದ್ದು, ಅದರ ವಿಡಿಯೋ ಅನ್ನು ಹಂಚಿಕೊಂಡಿದ್ದರು. ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು ಆ ವಿಡಿಯೋ ಅನ್ನು ಸಹ ಕಲರ್ಸ್ ಹಂಚಿಕೊಂಡಿದೆ.

ಕನ್ನಡ ಸಿನಿಮಾ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಸ್ಪರ್ಧಿಯಾಗಿ ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ಇದು ಅವರ ಎರಡನೇ ಎಂಟ್ರಿ. ಹೌದು, ಓಂ ಪ್ರಕಾಶ್ ರಾವ್ ಅವರಿಗೆ ಇದು ಎರಡನೇ ಎಂಟ್ರಿ ಆಗಿದೆ. ಈ ಹಿಂದೆ ಬಿಗ್​​ಬಾಸ್ ಕನ್ನಡ ಸೀಸನ್ 4ರಲ್ಲಿ ಅವರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್​​ಬಾಸ್ ಮನೆಗೆ ಹೋಗಿದ್ದರು. ಆದರೆ ಅಲ್ಲಿ ಅವರು ಹೆಚ್ಚು ದಿನ ಇರಲಿಲ್ಲ. ಅವರಿಗೆ ವಿಪರೀತ ಕಾಲು ನೋವು ಶುರುವಾದ ಕಾರಣ, ಆರೋಗ್ಯದ ಕಾರಣ ನೀಡಿ ಅಲ್ಲಿಂದ ಹೊರಬಂದರು. ಇದೀಗ ಎರಡನೇ ಬಾರಿ ಓಂ ಪ್ರಕಾಶ್ ಅವರು ಬಿಗ್​​ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಓಂ ಪ್ರಕಾಶ್ ರಾವ್ ಅವರು ಇತ್ತೀಚೆಗೆ ಹಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕ್ವಾಟ್ಲೆ ಕಿಚನ್​​ನಲ್ಲೂ ಅವರು ಕಾಣಿಸಿಕೊಂಡಿದ್ದರು. ಈಗ ಬಿಗ್​​ಬಾಸ್​​ಗೂ ಬಂದಿದ್ದಾರೆ. ಓಂ ಪ್ರಕಾಶ್ ರಾವ್ ಅವರನ್ನು ಸ್ವಾಗತಿಸಿದ ಸುದೀಪ್ ಅವರು, ಓಂ ಪ್ರಕಾಶ್ ರಾವ್ ಅವರಿಗೆ ಅವರದ್ದೇ ವಿಡಿಯೋ ಒಂದನ್ನು ಹಾಕಿ ತೋರಿಸಿದರು. ಓಂ ಪ್ರಕಾಶ್ ಅವರು ಟೆನ್ಷನ್​ ಇಂದಾಗಿ ತಲೆ ಕೆರೆದುಕೊಳ್ಳುವ ವಿಡಿಯೋ ಅದಾಗಿತ್ತು. ‘ಹಾಗೆ ತಲೆ ಕೆರೆದು ಕೊಂಡರೆ ನನಗೆ ಸಮಾಧಾನ ಎನಿಸುತ್ತದೆ’ ಎಂದರು ಓಂ ಪ್ರಕಾಶ್ ರಾವ್.

ಇದನ್ನೂ ಓದಿ:Sangeetha Bhat Profile: ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದ ಸಂಗೀತಾ ಈಗ ಬಿಗ್​​ಬಾಸ್ ಮನೆಗೆ

‘ನೀವು ಬಿಗ್​​ಬಾಸ್​​ನಲ್ಲಿ ಇರುವಷ್ಟು ದಿನ ಎಷ್ಟು ಬಾರಿ ಬೀಪ್ ಹಾಕಬೇಕಾಗುತ್ತದೆಯೋ?’ ಎಂದರು ಸುದೀಪ್, ಅದಕ್ಕೆ ಓಂ ಪ್ರಕಾಶ್ ರಾವ್, ‘ವಾಹಿನಿಯವರು ದೊಡ್ಡ ಮನಸ್ಸು ಮಾಡಿ ನನ್ನ ಮಾತುಗಳಿಗೆ ಬೀಪ್ ಹಾಕದೆ, ಕೇಳಲು ಚೆನ್ನಾಗಿದೆ ಎಂದು ರಾಜ್ಯದ ಜನರು ಕೇಳಲು ಬಿಟ್ಟರೆ ಅನುಕೂಲ ಆಗುತ್ತದೆ’ ಎಂದರು. ಓಂ ಪ್ರಕಾಶ್ ಅವರ ಮಾತಿಗೆ ಸುದೀಪ್ ನಕ್ಕುಬಿಟ್ಟರು.

ಓಂ ಪ್ರಕಾಶ್ ರಾವ್, ಕನ್ನಡದ ಜನಪ್ರಿಯ ಸಿನಿಮಾ ನಿರ್ದೇಶಕರು. ದರ್ಶನ್, ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ಸ್ಟಾರ್ ನಟ-ನಟಿಯರೊಟ್ಟಿಗೆ ಕೆಲಸ ಮಾಡಿದ್ದಾರೆ. ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಚಿತ್ರರಂಗದಲ್ಲಿ ವರ್ಷಗಳಿಂದ ನೋಡಿದ್ದು, ಅನುಭವಿಗಳೂ ಸಹ ಆಗಿದ್ದಾರೆ. ಸಿನಿಮಾ ರಂಗದ ಬಗ್ಗೆ ಸಾಕಷ್ಟು ಕಂಟೆಂಟ್ ಅನ್ನು ಅವರು ನೀಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Sun, 6 September 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ