Bigg Boss Kannada Season 8: ಇನ್ನು ಕೇವಲ ಐದೇ ದಿನದಲ್ಲಿ ಮತ್ತೆ ಆರಂಭವಾಗಲಿದೆ ಕನ್ನಡ ‘ಬಿಗ್ ಬಾಸ್ ಸೀಸನ್ 8’
ರವಿಂದ್.ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಮನೆಯಲ್ಲಿ ಇದ್ದರು. -
ಅರ್ಧಕ್ಕೆ ನಿಂತಿದ್ದ ಕನ್ನಡ ಬಿಗ್ ಬಾಸ್ ಸೀಸನ್ 8 ಪುನರಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ದಿನಾಂಕ ಕೂಡ ಫೈನಲ್ ಆಗಿದ್ದು, ಜೂನ್ 21ರಿಂದ ಶೋ ಮುಂದುವರಿಯಲಿದೆ. ಮೊದಲಿದ್ದ 12 ಸ್ಪರ್ಧಿಗಳೇ ಶೋನಲ್ಲಿ ಮುಂದುವರಿಯಲಿದ್ದಾರೆ.
ಬಿಗ್ಬಾಸ್ ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್.ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಇವರ ಜತೆಗೆ ಮತ್ತೂ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಬಿಗ್ ಬಾಸ್ ಆರಂಭದ ಬಗ್ಗೆ ಬರೆದುಕೊಂಡಿರುವ ಕಲರ್ಸ್ ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್, ‘ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ. ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು’ ಎಂದು ಅವರು ಪೋಸ್ಟ್ ಆರಂಭಿಸಿದ್ದಾರೆ.
View this post on Instagram
‘ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ’ ಎಂದಿದ್ದಾರೆ ಪರಮೇಶ್ವರ್ ಗುಂಡ್ಕಲ್.
‘ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ’ ಎಂದು ಪೋಸ್ಟ್ ಅಂತ್ಯ ಮಾಡಿದ್ದಾರೆ ಅವರು.
ಇದನ್ನೂ ಓದಿ: Bigg Boss Kannada 8: ‘ಬಿಗ್ ಬಾಸ್ ಕನ್ನಡ ಸೀಸನ್ 8’ ಬಗ್ಗೆ ಬಿಗ್ ಅಪ್ಡೇಟ್; ಇನ್ನೂ ಮುಗಿದಿಲ್ಲ ಶೋ?