Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​
ಬಿಗ್ ಬಾಸ್​ ಕನ್ನಡ ಸೀಸನ್​ 8
Follow us
|

Updated on: May 08, 2021 | 6:56 PM

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ಹೀಗಾಗಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಇದಾದ ಬೆನ್ನಲ್ಲೇ ಟಿವಿ​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್ ​ರಿಯಾಲಿಟಿ ಶೋ ಹಾಗೂ ಧಾರಾವಾಹಿ ಶೂಟಿಂಗ್​ ನಿಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ, ಬಿಗ್​ ಬಾಸ್​ ಕನ್ನಡ ಸೀಸನ್​ 8 ಅರ್ಧಕ್ಕೆ ನಿಲ್ಲುತ್ತಿದೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರು ಭಾರದ ಮನಸ್ಸಿನಿಂದ ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ ಎಂದು ಪರಮೇಶ್ವರ್ ಬರೆದುಕೊಂಡಿದ್ದಾರೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ ಎಂದು ಭಾರವಾದ ಮನಸ್ಸಿನಿಂದ ಪರಮೇಶ್ವರ್ ಹೇಳಿದ್ದಾರೆ.

ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಸ್ಪರ್ಧಿಗಳು 100 ದಿನ ಪೂರೈಸದೆ ಮನೆಯಿಂದ ಹೊರ ಬರುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ