AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss OTT Kannada: ನಾನು ಆನ್​ ಸ್ಪಾಟ್​ನಲ್ಲೇ ಮಾತಾಡ್ತೀನಿ…ಅದೆಲ್ಲಾ ಗೊತ್ತು ಎಂದು ಕಿಚಾಯಿಸಿದ ಕಿಚ್ಚ

Bigg Boss OTT Kannada: ಆರ್ಯವರ್ಧನ್​ ಗುರೂಜಿ, ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ, ಸಾನ್ಯಾ ಅಯ್ಯರ್, ಸ್ಪೂರ್ಥಿ ಗೌಡ, ಹಾಸ್ಯ ಕಲಾವಿದ ಲೋಕೇಶ್, ನಟಿ ಅಕ್ಷತಾ ಕುಕ್ಕಿ, ಕಿರಣ್ ಯೋಗೇಶ್ವರ್, ರಾಕೇಶ್ ಅಡಿಗ, ಚೈತ್ರಾ ಹಳ್ಳಿಕೇರಿ, ಉದಯ್ ಸೂರ್ಯ, ಸೋಮಣ್ಣ ಮಾಚಿಮಾಡ, ನಂದಿನಿ, ಜಸ್ವಂತ್ ಬೋಪಣ್ಣ, ಅರ್ಜುನ್ ರಮೇಶ್ ಹಾಗೂ ರೂಪೇಶ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. 

Bigg Boss OTT Kannada: ನಾನು ಆನ್​ ಸ್ಪಾಟ್​ನಲ್ಲೇ ಮಾತಾಡ್ತೀನಿ...ಅದೆಲ್ಲಾ ಗೊತ್ತು ಎಂದು ಕಿಚಾಯಿಸಿದ ಕಿಚ್ಚ
Sonu Gowda-Kiccha Sudeep
TV9 Web
| Edited By: |

Updated on: Aug 07, 2022 | 10:31 AM

Share

ಕನ್ನಡ ಕಿರುತೆರೆ ಲೋಕದ ಅದ್ಧೂರಿ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss OTT Kannada) ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ಸಿಕ್ಕಿದೆ. ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರವಾಗಲಿರುವ ಈ ಬಾರಿಯ ಬಿಗ್ ಬಾಸ್​ನಲ್ಲಿ ಒಟ್ಟು 16 ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಕೆಲವರು ಸಿನಿಮಾ ಕ್ಷೇತ್ರದಿಂದ ಎಂಟ್ರಿ ಕೊಟ್ಟರೆ, ಮನೆ ಕೆಲವರು ಕಿರುತೆರೆ ಲೋಕದಿಂದ ಅದೃಷ್ಟ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ಇವರೆಲ್ಲರ ನಡುವೆ ಸೋಷಿಯಲ್ ಮೀಡಿಯಾ ಸೆನ್ಸೇಷನ್​ ಪಟ್ಟಿಯಿಂದ ಎಂಟ್ರಿ ಕೊಟ್ಟಿರುವ ಸ್ಪರ್ಧಿ ಎಂದರೆ ಸೋನು ಶ್ರೀನಿವಾಸ್ ಗೌಡ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಮೆಚ್ಚುಗೆಗಳಿಸಿರುವ ಸೋನು ಗೌಡ, ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ದೊಡ್ಮನೆಗೆ 2ನೇ ಸ್ಪರ್ಧಿಯಾಗಿ ನಿರೂಪಕ ಕಿಚ್ಚ ಸುದೀಪ್ ಸೋನು ಗೌಡರನ್ನು ಬರಮಾಡಿಕೊಂಡರು.

ಆ ಬಳಿಕ ಮಾತನಾಡಿದ ಕಿಚ್ಚ ಸುದೀಪ್, ಬಿಗ್ ಬಾಸ್ ವೇದಿಕೆ ಮೇಲೆ ನಿಂತಿದ್ದೀರಾ..ಏನನಿಸುತ್ತಿದೆ ಎಂದು ಸೋನು ಗೌಡರನ್ನು ಪ್ರಶ್ನಿಸಿದ್ದರು. ಈ ವೇಳೆ ತುಂಬಾ ರೋಮಾಂಚನವಾಗುತ್ತಿದೆ. ಅದರಲ್ಲೂ ನಿಮ್ಮನ್ನು (ಕಿಚ್ಚ ಸುದೀಪ್) ಫಸ್ಟ್ ಟೈಮ್ ನೋಡ್ತಿದ್ದೀನಿ. ಈ ಖುಷಿಯನ್ನು ತೋರ್ಪಡಿಸಲಾಗುತ್ತಿಲ್ಲ ಎಂದು ಸೋನು ಗೌಡ ತಿಳಿಸಿದರು.

ಇದೇ ವೇಳೆ ಕಿಚಾಯಿಸಿದ ಕಿಚ್ಚ ಸುದೀಪ್, ನೀವು ಏನೋನೋ ಹೇಳಿದ್ದೀರಂತೆ, ಇದನ್ನೂ ಕೂಡ ಹೇಳ್ಬೇಕು ಎಂದು ಕಾಲೆಳೆದರು. ಇನ್ನು ಮಾತು ಮುಂದುವರೆಸಿ ಈ ಕಾರ್ಯಕ್ರಮಕ್ಕಾಗಿ ಎಷ್ಟು ತಯಾರಾಗಿ ಬಂದಿದ್ದೀರಿ ಎಂದು ಮರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸೋನು ಗೌಡ, ನಾನು ಯಾವುದೇ ತಯಾರಿ ಮಾಡಿಕೊಂಡಿಲ್ಲ. ಅನ್​ ಸ್ಪಾಟ್​​ನಲ್ಲೇ ಮಾತನಾಡ್ತೀನಿ ಎನ್ನುತ್ತಿದ್ದಂತೆ ಅದು ಗೊತ್ತು ಬಿಡಿ ಎಂದು ಸುದೀಪ್ ಮತ್ತೊಮ್ಮೆ ಕಿಚಾಯಿಸಿದರು.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಇದೀಗ ಸುದೀಪ್ ಹಾಗೂ ಸೋನು ಗೌಡ ಅವರ ಈ ಮೊದಲ ಭೇಟಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇಲ್ಲಿ ಸೋನು ಗೌಡರನ್ನು ಕಿಚ್ಚ ಎಲ್ಲಾ ಗೊತ್ತಿದ್ದೇ ಕಿಚಾಯಿಸಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಏಕೆಂದರೆ ಸೋನು ಗೌಡರ ನಗ್ನ ವಿಡಿಯೋವೊಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ ಈ ಘಟನೆಗಳನ್ನೆಲ್ಲಾ ಉಲ್ಲೇಖಿಸದೇ ಪರೋಕ್ಷವಾಗಿ ಕಿಚ್ಚ ಸುದೀಪ್ ಸೋನು ಗೌಡರ ಕಾಲೆಳೆದಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಬಿಗ್ ಬಾಸ್ ಒಟಿಟಿ ಸೀಸನ್ 1 ರಲ್ಲಿ ಒಟ್ಟು 16 ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದು, ಅದರಂತೆ ದೊಡ್ಮನೆಯಲ್ಲಿ ಆರ್ಯವರ್ಧನ್​ ಗುರೂಜಿ, ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ, ಸಾನ್ಯಾ ಅಯ್ಯರ್, ಸ್ಪೂರ್ಥಿ ಗೌಡ, ಹಾಸ್ಯ ಕಲಾವಿದ ಲೋಕೇಶ್, ನಟಿ ಅಕ್ಷತಾ ಕುಕ್ಕಿ, ಕಿರಣ್ ಯೋಗೇಶ್ವರ್, ರಾಕೇಶ್ ಅಡಿಗ, ಚೈತ್ರಾ ಹಳ್ಳಿಕೇರಿ, ಉದಯ್ ಸೂರ್ಯ, ಸೋಮಣ್ಣ ಮಾಚಿಮಾಡ, ನಂದಿನಿ, ಜಸ್ವಂತ್ ಬೋಪಣ್ಣ, ಅರ್ಜುನ್ ರಮೇಶ್ ಹಾಗೂ ರೂಪೇಶ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ