AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 23, 2021 | 7:38 AM

Share

ಬಿಗ್​ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಕೆಲವರು ಈಗಾಗಲೇ ಮನೆಯಲ್ಲಿ ಫೇವರಿಟ್​ ಸ್ಪರ್ಧಿ ಎನ್ನುವ ಪಟ್ಟ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಆಟವನ್ನೇ ಸ್ಟಾರ್ಟ್​ ಮಾಡಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇಂಥ ಸಂದರ್ಭದಲ್ಲಿ ರಘು ಹಾಗೂ ವಿಶ್ವಗೆ ದೊಡ್ಡ ತಪ್ಪಿನ ಅರಿವಾಗಿದೆ. ಇದನ್ನು ತಿದ್ದುಕೊಳ್ಳೋಕೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ. ಈಗ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​​ಗೆ ಬರುವ ಅನೇಕ ಸ್ಪರ್ಧಿಗಳು ನಾನು ಫಿನಾಲೆವರೆಗೂ ಇರುತ್ತೇನೆ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇನ್ನೂ ಕೆಲ ಸ್ಪರ್ಧಿಗಳು ಎಷ್ಟು ದಿನ ಆಗತ್ತೋ ಅಷ್ಟು ದಿನ ಇರೋಣ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇದು ಪ್ರತಿ ಬಾರಿಯೂ ಆಗುವಂಥದ್ದೇ. ಇದೇ ಎಲ್ಲಾ ಸ್ಪರ್ಧಿಗಳು ಮಾಡುವ ದೊಡ್ಡ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ ರಘು.

ಬಿಗ್​ ಬಾಸ್​ ಮನೆಗೆ ಬರುವಾಗ ನಾವು ಇದ್ದಷ್ಟು ದಿನ ಚೆನ್ನಾಗಿ ಇರೋಣ ಎಂದುಕೊಂಡು ಬರುತ್ತೇವೆ. ಆದರೆ, ನಾವು ಮಾಡುವ ದೊಡ್ಡ ತಪ್ಪು ಇದು. ಬಿಗ್​ ಬಾಸ್​ಗೆ ಬಂದಮೇಲೆ ಕೊನೆವರೆಗೂ ಇರಬೇಕು ಎನ್ನುವ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಇರುವಷ್ಟು ದಿನ ಇದ್ರೆ ಆಯ್ತು ಎನ್ನುವ ಮನಸ್ಥಿತಿ ಇದ್ದರೆ ಗೆಲ್ಲೋಕೆ ಸಾಧ್ಯವಿಲ್ಲ. ಇದು ನಾವು ಮಾಡುತ್ತಿರುವ ದೊಡ್ಡ ತಪ್ಪು ಎಂದರು. ಈ ವಿಚಾರ ವಿಶ್ವ ಅವರಿಗೂ ಹೌದು ಎನಿಸಿದೆ. ಅಲ್ಲದೆ, ಈ ತಪ್ಪನ್ನು ತಿದ್ದಿಕೊಳ್ಳುವ ಭರವಸೆಯನ್ನು ಪರಸ್ಪರ ನೀಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು