ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು.

ಬಾಲಿವುಡ್​ ನಟ ಆಮೀರ್​ಖಾನ್​ಗೆ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್
ಆಮೀರ್ ಖಾನ್​
Follow us
Lakshmi Hegde
|

Updated on: Mar 24, 2021 | 1:10 PM

ದೇಶಾದ್ಯಂತ ಕೊರೊನಾ ವೈರಸ್​ ಪ್ರಸರಣ ಮತ್ತೆ ಹೆಚ್ಚಾಗಿದೆ. ಅದರಲ್ಲೂ ಮುಂಬೈ, ಮಹಾರಾಷ್ಟ್ರದಲ್ಲಿ ಎರಡನೇ ಅಲೆಯ ಅಬ್ಬರ ಜಾಸ್ತಿಯೇ ಇದೆ. ಇತ್ತೀಚೆಗೆ ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಇತರರು ತಾವು ಕೊವಿಡ್​-19 ಸೋಂಕಿಗೆ ಒಳಗಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದರು. ಅವರ ಸಾಲಿಗೆ ಈಗ ಮತ್ತೋರ್ವ ಬಾಲಿವುಡ್​ ನಟ ಸೇರ್ಪಡೆಯಾಗಿದ್ದಾರೆ. ನಟ ಆಮೀರ್​ ಖಾನ್​ ಅವರಿಗೂ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ನಟ ಅಮೀರ್​ ಖಾನ್​ ಕೊರೊನಾ ಸೋಂಕಿತರಾಗಿದ್ದಾರೆ. ಹಾಗಾಗಿ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು, ಕೆಲಸದ ಸಿಬ್ಬಂದಿಯವರಿಗೆ ಟೆಸ್ಟ್​ಗೆ ಒಳಗಾಗಲು ಸೂಚಿಸಿದ್ದಾರೆ. ಹಾಗೇ, ಕೊರೊನಾ ಬಗ್ಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಹೇಳಿದ್ದಾರೆ. ಆಮೀರ್​ಖಾನ್​ ಸಂಪೂರ್ಣ ಗುಣಮುಖರಾಗುವವರೆಗೂ ಲಾಲ್​ ಸಿಂಗ್ ಛಡ್ಡಾ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಆಮೀರ್​ಖಾನ್​ ಆಪ್ತ ಮೂಲಗಳು ತಿಳಿಸಿವೆ.

ಕಳೆದವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಆಮೀರ್ ಖಾನ್​, ಅದರ ಮರುದಿನವೇ ಸೋಷಿಯಲ್​ ಮೀಡಿಯಾಗಳಿಗೆ ಗುಡ್​ಬೈ ಹೇಳಿದ್ದರು. ನಾನು ನನ್ನ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಬಿಟ್ಟರೂ ಹೇಗಾದರೂ ಸರಿ ನಿಮ್ಮೊಟ್ಟಿಗೆ ಸಂಪರ್ಕದಲ್ಲಿ ಇರುತ್ತೇನೆ. ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದರು. ಆಮೀರ್​ ಖಾನ್ ಅವರು ಲಾಲ್​ ಸಿಂಗ್ ಛಡ್ಡಾ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕರೀನಾ ಕಪೂರ್​-ಆಮೀರ್​ ಖಾನ್ ನಟನೆಯ ಈ ಚಿತ್ರ 2021ರ ಕೊನೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ