ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ​ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಭಿನ್ನ ಗೆಟಪ್​ ತಾಳಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗಕ್ಕೆ ಕಾಲಿಡುವ ಬಗ್ಗೆ ಪ್ರಶ್ನೆ ಎದುರಾಗಿದೆ.

ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 10, 2022 | 12:42 PM

ಸದ್ಯ ಪ್ಯಾನ್ ಇಂಡಿಯಾ ಕ್ರೇಜ್ ಜೋರಾಗಿದೆ. ದಕ್ಷಿಣದ ಸಿನಿಮಾಗಳು ಬಾಲಿವುಡ್​ (Bollywood) ಅಂಗಳದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್ 2’, (KGF Chapter 2) ‘ಆರ್​ಆರ್​ಆರ್​’ ಹಾಗೂ ‘ಪುಷ್ಪ’ ಸಿನಿಮಾಗಳು ಮಾಡಿದ ಹವಾ ಅಷ್ಟಿಷ್ಟಲ್ಲ. ಹೀಗಾಗಿ ಬಾಲಿವುಡ್ ಮಂದಿ ದಕ್ಷಿಣದವರ ಮೇಲೆ ಕಣ್ಣಿಟ್ಟಿದ್ದಾರೆ. ಇಲ್ಲಿನ ಸ್ಟಾರ್​ಗಳಿಗೆ ಬಾಲಿವುಡ್​ ಆಫರ್​ಗಳು ಬರುತ್ತಿವೆ. ಬಾಲಿವುಡ್​ನಲ್ಲಿ ನಟಿಸಿದರೆ ಸಂಭಾವನೆ ಹೆಚ್ಚು ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಜನಪ್ರಿಯತೆ ಮತ್ತಷ್ಟು ಹೆಚ್ಚುತ್ತದೆ. ಈ ಕಾರಣಕ್ಕೆ ದಕ್ಷಿಣದ ಅನೇಕ ಸ್ಟಾರ್​ಗಳು ಬಾಲಿವುಡ್​​ಗೆ ಕಾಲಿಡೋಕೆ ಪ್ರಯತ್ನಿಸುತ್ತಿದ್ದಾರೆ. ಮಹೇಶ್ ಬಾಬು (Mahesh Babu) ಈ ವಿಚಾರದಲ್ಲಿ ಭಿನ್ನವಾಗಿ ನಿಲ್ಲುತ್ತಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ​ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಭಿನ್ನ ಗೆಟಪ್​ ತಾಳಿದ್ದಾರೆ. ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಹಾಡುಗಳು, ಟ್ರೇಲರ್ ಹಿಟ್​ ಆಗಿವೆ. ಇತ್ತೀಚೆಗೆ ‘ಸೆಲ್ಯೂಟ್’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ಹಿಂದಿ ಚಿತ್ರರಂಗಕ್ಕೆಗೆ ಕಾಲಿಡುವ ಬಗ್ಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಮಹೇಶ್​ ಬಾಬು ಖಡಕ್ ಉತ್ತರ ನೀಡಿದ್ದಾರೆ.

‘ನನಗೆ ಹಿಂದಿಯಲ್ಲಿ ಸಾಕಷ್ಟು ಆಫರ್‌ಗಳು ಬಂದಿವೆ. ಆದರೆ ಬಾಲಿವುಡ್​ಗೆ ನನ್ನನ್ನು ಭರಿಸಲು ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಸಮಯವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ದಕ್ಷಿಣದಲ್ಲಿ ನಾನು ಪಡೆಯುವ ಸ್ಟಾರ್‌ಡಮ್ ಮತ್ತು ಗೌರವವು ದೊಡ್ಡದು. ಹಾಗಾಗಿ ನಾನು ಇಲ್ಲಿಯವರನ್ನು ಬಿಟ್ಟು ಬೇರೆ ಉದ್ಯಮಕ್ಕೆ ಹೋಗುವ ಬಗ್ಗೆ ನಾನು ಎಂದಿಗೂ ಯೋಚಿಸಲಿಲ್ಲ. ಸಿನಿಮಾ ಮಾಡುತ್ತಾ ಬೆಳೆಯುವ ಆಲೋಚನೆ ನನ್ನದು. ನನ್ನ ಕನಸು ಈಗ ನನಸಾಗುತ್ತಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ
Image
ಒಂದೇ ಒಂದು ಪೋಸ್ಟರ್​ನಿಂದ ‘ಸರ್ಕಾರು ವಾರಿ ಪಾಟ’ ಟ್ರೇಲರ್​ ಬಗ್ಗೆ ಕೌತುಕ ಕೆರಳಿಸಿದ ಮಹೇಶ್​ ಬಾಬು
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು
Image
Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

‘ನನಗೆ ಹಿಂದಿ ಸಿನಿಮಾ ಮಾಡುವ ಅಗತ್ಯವಿಲ್ಲ. ನಾನು ಕೇವಲ ತೆಲುಗು ಸಿನಿಮಾಗಳನ್ನು ಮಾತ್ರ ಮಾಡಬಲ್ಲೆ. ಅದು ಪ್ರಪಂಚದಾದ್ಯಂತ ಕಾಣಿಸುತ್ತದೆ. ಈಗ ಅದೇ ನಡೆಯುತ್ತಿದೆ’ ಎಂದು ಈ ಮೊದಲು ಮಹೇಶ್ ಬಾಬು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ