ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಅವರು ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಈಗ ಜಾಕ್ವೆಲಿನ್ ಮತ್ತು ಸುಕೇಶ್ ಇಬ್ಬರೂ ಆಪ್ತವಾಗಿರುವ ಫೋಟೋ ಲೀಕ್ ಆಗಿದೆ. ಈ ಮಧ್ಯೆ ಶಾಕಿಂಗ್ ಮಾಹಿತಿ ಒಂದು ಹೊರ ಬಿದ್ದಿದೆ. ಸುಕೇಶ್ ಅವರನ್ನು ಭೇಟಿ ಮಾಡೋಕೆ 12 ನಟಿಯರು ಜೈಲಿಗೆ ಬಂದಿದ್ದರು ಎನ್ನಲಾಗಿದೆ.
ಸುಕೇಶ್ ಚಂದ್ರಶೇಖರ್ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಐಷಾರಾಮಿ ಸವಲತ್ತು ಪಡೆಯಲು, ಭೇಟಿಗೆ ಬರುವ ಹೀರೋಯಿನ್ಗಳನ್ನು ಮುಕ್ತವಾಗಿ ಒಳಗೆ ಬಿಡೋಕೆ ಅಲ್ಲಿನ ಸಿಬ್ಬಂದಿಗೆ ಪ್ರತಿ ತಿಂಗಳು ಸುಕೇಶ್ 1 ಕೋಟಿ ರೂಪಾಯಿ ನೀಡಿದ್ದರು ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಮಾಹಿತಿ ನೀಡಿವೆ ಎಂದು ತಿಳಿದು ಬಂದಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿ ಸಿನಿಮಾ ಹೆಸರು ಮಾತ್ರ ಸದ್ಯ ಸಿಲುಕಿದೆ. ಇವರ ಜತೆಗೆ ಇನ್ನೂ ಕೆಲವರು ಸ್ಟಾರ್ ನಟಿಯರು ಹಾಗೂ ಮಾಡೆಲ್ಗಳು ಜೈಲಿಗೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದ್ದು, ಅವರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ರೋಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿತ್ತು. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ. ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಜಾಕ್ವೆಲಿನ್ ಫರ್ನಾಂಡೀಸ್ಗೆ ಸಮನ್ಸ್ ನೀಡಲಾಗಿತ್ತು.
ಜಾಕ್ವೆಲಿನ್ ಫರ್ನಾಂಡಿಸ್ ಜತೆ ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಹೀಗಿರುವಾಗಲೇ ಜಾಕ್ವೆಲಿನ್ ಅವರು ಸುಕೇಶ್ ಜತೆ ಡೇಟಿಂಗ್ ನಡೆಸುತ್ತಿದ್ದರು ಎಂದಿದ್ದರು. ಈ ಹೇಳಿಕೆ ಸೆನ್ಸೇಶನ್ ಸೃಷ್ಟಿ ಮಾಡಿತ್ತು. ಹೀಗಿರುವಾಗಲೇ ಫೋಟೋ ಲೀಕ್ ಆಗಿದೆ.
ಇದನ್ನೂ ಓದಿ: ಬಹುಕೋಟಿ ವಂಚನೆ ಆರೋಪಿ ಜತೆ ಜಾಕ್ವೆಲಿನ್ ಲವ್ವಿಡವ್ವಿಗೆ ಸಿಕ್ತು ಇನ್ನಷ್ಟು ಫೋಟೋಗಳ ಸಾಕ್ಷಿ
ಜಾಕ್ವೆಲಿನ್ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್