ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಜೀವ ಬೆದರಿಕೆ ಇರುವುದು ಗೊತ್ತೇ ಇದೆ. ಈಗಾಗಲೇ ಅವರ ಮೇಲೆ ಹಲವು ಬಾರಿ ಹತ್ಯೆ ಪ್ರಯತ್ನ ನಡೆದ ಬಗ್ಗೆ ವರದಿ ಆಗಿದೆ. ಹಾಗಾಗಿ ಅವರು ಭದ್ರತೆಯ ಬಗ್ಗೆ ಹೆಚ್ಚು ಗಮನ ಹರಿಸಿದ್ದಾರೆ. ಇಬ್ಬರು ಯುವಕರು ಅನುಮಾನಾಸ್ಪದವಾಗಿ ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ಗೆ ನುಗ್ಗಲು ಪ್ರಯತ್ನಿಸಿರುವ ಘಟನೆ ಈಗ ಬೆಳಕಿಗೆ ಬಂದಿದೆ. ಪನ್ವೇಲ್ನಲ್ಲಿ ಸಲ್ಮಾನ್ ಖಾನ್ ಅವರು ಫಾರ್ಮ್ಹೌಸ್ (Salman Khan Farm House) ಹೊಂದಿದ್ದಾರೆ. ಅದರ ಕಾಂಪೌಂಡ್ ಒಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಭಿಮಾನಿಗಳು ಎಂದು ಹೇಳಿಕೊಂಡು ಬಂದ ಈ ಇಬ್ಬರನ್ನು ಅಜೇಶ್ ಕುಮಾರ್ ಓಂಪ್ರಕಾಶ್ ಗಿಲ್ ಹಾಗೂ ಗುರುಸೇವಕ್ ಸಿಂಗ್ ಎಂದು ಗುರುತಿಸಿಲಾಗಿದೆ. ಸಿಕ್ಕಿ ಬಿದ್ದಾಗ ಅವರಿಬ್ಬರ ಆಧಾರ್ ಕಾರ್ಡ್ ಪರಿಶೀಲನೆ ಮಾಡಲಾಯಿತು. ಅವು ನಕಲಿ ಆಧಾರ್ ಕಾರ್ಡ್ ಎಂಬುದು ತಿಳಿದುಬಂದಿದೆ. ಮಹೇಶ್ ಕುಮಾರ್ ಮತ್ತು ವಿನೋದ್ ಕುಮಾರ್ ಎಂಬ ಹೆಸರಿನಲ್ಲಿ ಅವರು ನಕಲಿ ಆಧಾರ್ ಕಾರ್ಡ್ ಸಿದ್ಧಪಡಿಸಿಕೊಂಡು ಮೋಸ ಮಾಡಲು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಅವರು ಇನ್ನೂ ಮದುವೆ ಆಗದಿರಲು ಕಾರಣವೇನು?
ಈ ಇಬ್ಬರ ವರ್ತನೆ ಕಂಡು ಸಲ್ಮಾನ್ ಖಾನ್ ಅವರ ಭದ್ರತಾ ಸಿಬ್ಬಂದಿಗೆ ಅನುಮಾನ ಮೂಡಿದೆ. ಹಾಗಾಗಿ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ರಮವಾಗಿ ಫಾರ್ಮ್ಹೌಸ್ ಪ್ರವೇಶಿಸಲು ಯತ್ನಿಸಿದ ಇಬ್ಬರನ್ನು ಪನ್ವೇಲ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ಆಗಿದೆ. ಸದ್ಯಕ್ಕೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಫಾರ್ಮ್ಹೌಸ್ ನುಸುಳಲು ಪ್ರಯತ್ನಿಸಿದ್ದರ ಹಿಂದಿನ ಉದ್ದೇಶ ಏನೆಂಬುದು ಸ್ಪಷ್ಟವಾಗಬೇಕಿದೆ.
ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಈಗಾಗಲೇ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮುಂತಾದವರು ಬೆದರಿಕೆ ಹಾಕಿದ್ದಾರೆ. ಸಲ್ಮಾನ್ ಖಾನ್ ಅವರ ಆಪ್ತರ ಮೇಲೂ ಹಲ್ಲೆ ಪ್ರಯತ್ನಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರು ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಬುಲೆಟ್ಪ್ರೂಫ್ ಕಾರುಗಳನ್ನು ಅವರು ಖರೀದಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ