AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ, ರಕ್ಕಮ್ಮನಿಗೆ ಕೋರ್ಟ್​​ನಲ್ಲಿ ಹಿನ್ನಡೆ

Jacqueline Fernandez: 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಜಾರಿಯಲ್ಲಿದೆ. ಪ್ರಕರಣವನ್ನು ರದ್ದು ಗೊಳಿಸುವ ಕುರಿತಾಗಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ದೆಹಲಿ ಹೈಕೋರ್ಟ್​ಗೆ ಅರ್ಜಿಗಳನ್ನು ಹಾಕಿಕೊಂಡಿದ್ದರು. ಆದರೆ ಜಾಕ್ವೆಲಿನ್ ಅರ್ಜಿ ತಳ್ಳಿ ಹಾಕಲ್ಪಟ್ಟಿದ್ದು, ನಟಿಗೆ ತೀವ್ರ ಸಂಕಷ್ಟ ಎದುರಾಗಿದೆ.

200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ, ರಕ್ಕಮ್ಮನಿಗೆ ಕೋರ್ಟ್​​ನಲ್ಲಿ ಹಿನ್ನಡೆ
Jacqueline Fernandez
ಮಂಜುನಾಥ ಸಿ.
|

Updated on: Jul 04, 2025 | 1:41 PM

Share

‘ವಿಕ್ರಾಂತ್ ರೋಣ’ ಸಿನಿಮಾನಲ್ಲಿ ‘ರಕ್ಕಮ್ಮ’ ಹಾಡಿಗೆ ಸಖತ್ ಆಗಿ ಸ್ಟೆಪ್ ಹಾಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ (jacqueline) ಕಳೆದ ಕೆಲ ವರ್ಷಗಳಿಂದಲೂ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಮಹಾನ್ ವಂಚಕ ಸುಖೇಶ್ ಕುಮಾರ್ ಗೆಳೆತನದಿಂದಾಗಿ ಸಾಕಷ್ಟು ಸಮಸ್ಯೆಗೆ ಜಾಕ್ವೆಲಿನ್ ಸಿಲುಕಿಕೊಂಡಿದ್ದು, ಸತತವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ ನಟಿ. ಇತ್ತೀಚೆಗೆ ಜಾಕ್ವೆಲಿನ್, ತಮ್ಮ ಮೇಲಿನ ಕ್ರಿಮಿನಲ್ ಮೊಕದ್ದಮೆ ಕೈಬಿಡಬೇಕು ದೆಹಲಿ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅಲ್ಲಿಯೂ ಸಹ ನಟಿಗೆ ಹಿನ್ನಡೆ ಉಂಟಾಗಿದೆ.

200 ಕೋಟಿ ಹಣ ಅಕ್ರ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಸಹ ಆರೋಪಿ ಆಗಿದ್ದು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು ವಿಚಾರಣೆ ಚಾಲ್ತಿಯಲ್ಲಿದೆ. ಇತ್ತೀಚೆಗೆ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು ನಟಿ ಜಾಕ್ವೆಲಿನ್ ಫರ್ನಾಂಡೀಸ್, ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ನಟಿಯ ಅರ್ಜಿಯನ್ನು ತಿರಸ್ಕರಿಸಿದೆ. ಆ ಮೂಲಕ ನಟಿಗೆ ದೊಡ್ಡ ಹಿನ್ನಡೆಯೇ ಆದಂತಾಗಿದೆ. ನಟಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮುಂದುವರೆಯಲಿದ್ದು, ನಟಿಗೆ ವ್ಯತಿರಿಕ್ತ ತೀರ್ಪು ಬಂದಾದಲ್ಲಿ ನಟಿ ಜೈಲಿಗೆ ಸಹ ಹೋಗಬೇಕಾಗುತ್ತದೆ.

ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಜಾಕ್ವೆಲಿನ್ ಫರ್ನಾಂಡೀಸ್ ಪರ ವಕೀಲರು, ಸುಖೇಶ್ ನೀಡಿದ್ದ ಉಡುಗೊರೆಗಳಿಗೆ ಹಣದ ಮೂಲ ಯಾವುದು ಎಂಬುದು ಜಾಕ್ವೆಲಿನ್ ಫರ್ನಾಂಡೀಸ್​ಗೆ ಗೊತ್ತಿರಲಿಲ್ಲ. ಸುಖೇಶ್, ತನ್ನ ಅಪರಾಧದ ಭಾಗವಾಗಿ ಜಾಕ್ವೆಲಿನ್​ಗೆ ಆ ಉಡುಗೊರೆಗಳನ್ನು ನೀಡಿದ್ದ. ಆದರೆ ಜಾಕ್ವೆಲಿನ್​ಗೆ ಆ ವಿಷಯ ಗೊತ್ತಿರಲಿಲ್ಲ. ಜಾಕ್ವೆಲಿನ್ ಆರೋಪಿ ಅಲ್ಲ ಸಂತ್ರಸ್ತೆ ಎಂದು ವಾದ ಮಂಡಿಸಿದ್ದರು. ಆದರೆ ಇಡಿ ಪರ ವಕೀಲರು ಇದನ್ನು ತಳ್ಳಿ ಹಾಕಿದ್ದು, ಸುಖೇಶ್ ಎಂಥಹಾ ವ್ಯಕ್ತಿ ಎಂಬುದು ಜಾಕ್ವೆಲಿನ್​ಗೆ ಗೊತ್ತಿತ್ತು ಎಂದು ವಾದಿಸಿದರು.

ಇದನ್ನೂ ಓದಿ:ಖಾಸಗಿ ದ್ವೀಪವನ್ನೇ ಹೊಂದಿರುವ ಏಕೈಕ ನಟಿ ಜಾಕ್ವೆಲಿನ್, ಎಲ್ಲಿದೆ ಆ ದ್ವೀಪ?

ರ್ಯಾನ್​ಬಾಕ್ಸಿ ಸಂಸ್ಥೆಯ ಮಾಲೀಕರನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದಾಗಿ ಹೇಳಿ ಅವರ ಕುಟುಂಬದಿಂದ ಬರೋಬ್ಬರಿ 200 ಕೋಟಿ ರೂಪಾಯಿ ಹಣವನ್ನು ಸುಖೇಶ್ ಚಂದ್ರಶೇಖರ್ ಪಡೆದುಕೊಂಡಿದ್ದ. ಅದೇ ಹಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್​ಗೆ ದುಬಾರಿ ಕಾರುಗಳು, ಮನೆ, ಜಾಕ್ವೆಲಿನ್ ಸಹೋದರನ ಖಾತೆಗೆ ಕೋಟ್ಯಂತರ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದ. ಜಾಕ್ವೆಲಿನ್​ಗೆ ಮಾತ್ರವೇ ಅಲ್ಲದೆ ನೋರಾ ಫತೇಹಿ ಹಾಗೂ ಇತರೆ ಕೆಲವು ನಟಿಯರಿಗೂ ಸಹ ದುಬಾರಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದ.

ಇದೀಗ ಸುಖೇಶ್ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಅಸಲಿಗೆ ಸುಖೇಶ್ ಹಲವು ವರ್ಷಗಳಿಂದಲೂ ಜೈಲಿನಲ್ಲಿದ್ದಾನೆ. ಆದರೆ ಜೈಲಿನಲ್ಲಿದ್ದುಕೊಂಡೆ ಹಲವರಿಗೆ ನೂರಾರು ಕೋಟಿ ರೂಪಾಯಿ ಹಣ ವಂಚನೆ ಮಾಡಿದ್ದಾನೆ. ಜೈಲಿನಲ್ಲಿದ್ದ ಸಂದರ್ಭದಲ್ಲಿಯೇ ಸುಖೇಶ್​, ಜಾಕ್ವೆಲಿನ್ ಅನ್ನು ಭೇಟಿಯಾಗಿದ್ದ. ಇಬ್ಬರ ನಡುವೆ ಪ್ರೀತಿಯೂ ಇತ್ತು. ಈ ಇಬ್ಬರೂ ಆಪ್ತವಾಗಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ