‘ಲವ್​ ಯೂ ಬೇಬಿ’; ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಫರ್ನಾಂಡಿಸ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಜಾಕ್ವೆಲಿನ್ ಹಾಗೂ ಸುಕೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳನ್ನು ಸುಕೇಶ್ ಲೀಕ್ ಮಾಡಿದ್ದ. ಇದರಿಂದ ಜಾಕ್ವೆಲಿನ್​ಗೆ ಮುಜುಗರ ಆಗಿತ್ತು.

‘ಲವ್​ ಯೂ ಬೇಬಿ’; ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಫರ್ನಾಂಡಿಸ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಜಾಕ್ವೆಲಿನ್​-ಸುಕೇಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 07, 2023 | 12:05 PM

ಸುಕೇಶ್ ಚಂದ್ರಶೇಖರ್ (Sukesh Chandrashekhar) ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ತೊಂದರೆ ಆಗುತ್ತಿದೆ. ಅವರು ನಿರಂತರವಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಮುಕ್ತಿ ಸಿಗದಂತಾಗಿದೆ. ಇದರ ಜೊತೆಗೆ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್​ಗೆ ಕಿರಿಕಿರಿ ಉಂಟು ಮಾಡುತ್ತಿದ್ದಾನೆ. ಹೋಳಿ ಸಂದರ್ಭದಲ್ಲಿ ಆತ ನಟಿಗೆ ಲವ್ ಲೆಟರ್ ಬರೆದಿದ್ದಾನೆ. ಈ ವೇಳೆ ‘ಲವ್​ ಯೂ ಬೇಬಿ’ ಎಂದು ಸುಕೇಶ್ ಪತ್ರದಲ್ಲಿ ಬರೆದಿದ್ದಾನೆ.

‘ಒಳ್ಳೆಯ ವ್ಯಕ್ತಿ, ನನ್ನ ಬ್ಯೂಟಿಫುಲ್ ಜಾಕ್ವೆಲಿನ್​ಗೆ ಹೋಳಿ ಶುಭಾಶಯ. ಈ ದಿನ ಬಣ್ಣಗಳ ಹಬ್ಬ. ಮರೆಯಾದ ಬಣ್ಣಗಳು 100 ಪಟ್ಟು ಹೆಚ್ಚಾಗಿ ನಿಮ್ಮ ಬಳಿ ಬರುತ್ತವೆ. ಈ ವರ್ಷ ನಿಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ರೀತಿ ಆಗುವಂತೆ ಮಾಡೋದು ನನ್ನ ಜವಾಬ್ದಾರಿ’ ಎಂದು ಅವರು ಪತ್ರ ಆರಂಭಿಸಿದ್ದಾರೆ.

‘ಐ ಲವ್​ ಯೂ ಮೈ ಬೇಬಿ ಗರ್ಲ್​. ಯಾವಾಗಲೂ ನಗುತ್ತಾ ಇರು. ಲವ್ ಯು ಮೈ ಪ್ರಿನ್ಸೆಸ್. ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಬೊಮ್ಮ ನೀನು, ನನ್ನ ಪ್ರೀತಿ’ ಎಂದು ಪತ್ರದಲ್ಲಿ ಸುಕೇಶ್ ಬರೆದುಕೊಂಡಿದ್ದಾನೆ.

ಇದನ್ನೂ ಓದಿ
Image
ಜಾಕ್ವೆಲಿನ್ ಫರ್ನಾಂಡಿಸ್​​​ನ ಈಗಲೂ ಪ್ರೀತಿಸುತ್ತಿದ್ದಾನೆ ಸುಕೇಶ್​? ನಟಿಗೆ ವ್ಯಾಲೆಂಟೈನ್ಸ್​ ವಿಶ್ ಮಾಡಿದ ಆರೋಪಿ
Image
ಮನಶಾಂತಿ ಹುಡುಕಿ ವೈಷ್ಣೋ ದೇವಿಗೆ ತೆರಳಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್
Image
Nora Fatehi: ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ  
Image
ಸುಕೇಶ್ ಚಂದ್ರಶೇಖರ್ ಬಹು ಕೋಟಿ​ ವಂಚನೆ ಪ್ರಕರಣ: ಜಾಕ್ವೆಲಿನ್ ಬಳಿಕ ನೋರಾಗೆ ಹೆಚ್ಚಿತು ಸಂಕಷ್ಟ

ಜಾಕ್ವೆಲಿನ್ ಹಾಗೂ ಸುಕೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳನ್ನು ಸುಕೇಶ್ ಲೀಕ್ ಮಾಡಿದ್ದ. ಇದರಿಂದ ಜಾಕ್ವೆಲಿನ್​ಗೆ ಮುಜುಗರ ಆಗಿತ್ತು. ಈ ಫೋಟೋದಿಂದ ನಟಿ​ಗೆ ಸಂಕಷ್ಟಕೂಡ ಹೆಚ್ಚಿತ್ತು. ಅವರು ವಿವಿಧ ರೀತಿಯಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಸುಕೇಶ್​ನಿಂದ ಹಲವು ದುಬಾರಿ ಗಿಫ್ಟ್ ಪಡೆದಿರುವುದರಿಂದ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯದಿಂದ ಎದುರಾಗುತ್ತಿರುವ ಪ್ರಶ್ನೆಗೆ ಉತ್ತರ ನೀಡುತ್ತಿದ್ದಾರೆ.

ಇದನ್ನೂ ಓದಿ: ಸುಕೇಶ್ ಚಂದ್ರಶೇಖರ್​​ನ್ನು ತಿಹಾರ್​​ ಜೈಲಿನಿಂದ ಮಂಡೋಲಿ ಜೈಲಿಗೆ ಸ್ಥಳಾಂತರಕ್ಕೆ ಸುಪ್ರೀಂಕೋರ್ಟ್​​ ಆದೇಶ

ಸುಕೇಶ್ ಚಂದ್ರಶೇಖರ್ ಸಹಚರೆ ಪಿಂಕಿ ಇರಾನಿಯಿಂದ ಜಾಕ್ವೆಲಿನ್​ಗೆ ಆತನ ಪರಿಚಯ ಆಗಿತ್ತು. ಸರ್ಕಾರಿ ಅಧಿಕಾರಿ ಎಂದು ಸುಕೇಶ್​​ನನ್ನು ಪಿಂಕಿ ಪರಿಚಯಿಸಿದ್ದಳು. ‘ನಾನು ಸನ್ ಟಿವಿ ಮಾಲೀಕ’ ಎಂದು ಕೂಡ ಸುಕೇಶ್ ಹೇಳಿಕೊಂಡಿದ್ದ. ಜಯಲಲಿತಾ ತನ್ನ ಚಿಕ್ಕಮ್ಮ ಎಂದು ಆತ ಹೇಳಿಕೊಂಡಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ