ಒಂದು ಕಾಲದ ಹಾಟ್ ನಟಿ ಈಗ ಸಾಧು ಸನ್ಯಾಸಿನಿ

Mamata Kulkarni: 90ರ ದಶಕದ ಹಾಟ್ ಬಾಲಿವುಡ್ ನಟಿ, ಕನ್ನಡದ ಸಿನಿಮಾದಲ್ಲಿಯೂ ನಟಿಸಿದ್ದ ಮಮತಾ ಕುಲಕರ್ಣಿ ಈಗ ಅಧ್ಯಾತ್ಮದ ಹಾದಿ ಹಿಡಿದಿದ್ದಾರೆ. ಮಮತಾ ಕುಲಕರ್ಣಿ ಸಾಧು ಸನ್ಯಾಸಿನಿ ಆಗಿದ್ದಾರೆ. ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿದ್ದಾರೆ ಈ ನಟಿ. ಮಮತಾ ಕುಲಕರ್ಣಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?

ಒಂದು ಕಾಲದ ಹಾಟ್ ನಟಿ ಈಗ ಸಾಧು ಸನ್ಯಾಸಿನಿ
Mamta Kulkarni
Follow us
ಮಂಜುನಾಥ ಸಿ.
|

Updated on:Jan 24, 2025 | 9:47 PM

ಸಿನಿಮಾಗಳಲ್ಲಿ ಹಾಟ್ ಅವತಾರಗಳಲ್ಲಿ ನಟಿಸಿದ್ದ ನಟಿ, ಜೀವನದಲ್ಲಿ ಸಾಕಷ್ಟು ಐಶಾರಾಮಿತನಗಳನ್ನು ಕಂಡಿದ್ದ ನಟಿ ಈಗ ಒಮ್ಮೆಲೆ ಅಧ್ಯಾತ್ಮದ ಹಾದಿ ಹಿಡಿದ್ದಾರೆ. ಎಲ್ಲ ವಿಷಯ ವಾಸನೆಗಳನ್ನು ತ್ಯಜಿಸಿ ಸನ್ಯಾಸಿನಿ ಆಗಿದ್ದಾರೆ. ಕನ್ನಡದ ‘ವಿಷ್ಣುವಿಜಯ’ ಸೇರಿದಂತೆ ಹಲವು ಹಿಂದಿ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ, 90ರ ದಶಕದಲ್ಲಿ ಹಾಟ್ ನಟಿಯಾಗಿ ಗುರುತಿಸಿಕೊಂಡಿದ್ದ ಮಮತಾ ಕುಲಕರ್ಣಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕ ಆಗಿದ್ದಾರೆ.

ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015 ರಲ್ಲಿ ಪ್ರಾರಂಭವಾದ ಕಿನ್ನರ ಅಖಾಡ ಇದೀಗ ನಟಿ ಮಮತಾ ಕುಲಕರ್ಣಿಯನ್ನು ತಮ್ಮ ಮಹಾಮಂಡಲೇಶ್ವರಿಯನ್ನಾಗಿ ನೇಮಕ ಮಾಡಿದೆ. ಇದೊಂದು ರೀತಿಯ ಧಾರ್ಮಿಕ ಸ್ಥಾನವಾಗಿದ್ದು ಇಂದು (ಜನವರಿ 24) ಪಿಂಡ ಪ್ರಧಾನ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳನ್ನು ಮಮತಾ ಕುಲಕರ್ಣಿ ಅವರಿಂದ ಮಾಡಿಸಿ ಅವರನ್ನು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಮಾಡಲಾಗುತ್ತದೆ.

ಇದನ್ನೂ ಓದಿ:ನಟಿ ನಿವೇದಿತಾ ಗೌಡ ವಯ್ಯಾರ ಹೇಗಿದೆ ನೋಡಿ

ಶಾರುಖ್ ಖಾನ್-ಸಲ್ಮಾನ್ ಖಾನ್ ಒಟ್ಟಿಗೆ ನಟಿಸಿದ ಮೊದಲ ಮತ್ತು ಈಗಲೂ ಕಲ್ಟ್ ಸಿನಿಮಾ ಎಂದೇ ಕರೆಸಿಕೊಳ್ಳುವ ‘ಕರಣ್ ಅರ್ಜುನ್’ ಸಿನಿಮಾದಲ್ಲಿ ಮಮತಾ ಕುಲಕರ್ಣಿ ನಾಯಕಿಯಾಗಿ ನಟಿಸಿದ್ದರು. ಮಮತಾ ಕುಲಕರ್ಣಿ, ಸಲ್ಮಾನ್ ಖಾನ್​ಗೆ ಜೋಡಿಯಾಗಿದ್ದರು. ಅದು ಮಾತ್ರವೇ ಅಲ್ಲದೆ ‘ಆಶಿಕ್ ಆವಾರ’ ಆಮಿರ್ ಖಾನ್ ಜೊತೆಗೆ ‘ಬಾಜಿ’, ಸೂಪರ್ ಹಿಟ್ ಸಿನಿಮಾ ‘ಚೈನಾ ಗೇಟ್’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.

ವಿಷ್ಣುವರ್ಧನ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಒಟ್ಟಿಗೆ ನಟಿಸಿದ್ದ ‘ವಿಷ್ಣು ವಿಜಯ’ ಕನ್ನಡ ಸಿನಿಮಾದಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದರು. 2003 ರಲ್ಲಿ ಬೆಂಗಾಲಿ ಸಿನಿಮಾ ಒಂದರಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ ಆ ನಂತರ ಚಿತ್ರರಂಗದಿಂದ ದೂರಾಗಿದ್ದರು. ಈಗ ಒಮ್ಮೆಲೆ ಅಧ್ಯಾತ್ಮದ ಹಾದಿ ಹಿಡಿದಿದ್ದಾರೆ. 2016 ರಲ್ಲಿ ಈ ನಟಿಯ ಹೆಸರು ಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಕೇಳಿ ಬಂದಿತ್ತು. ಮುಂಬೈ ಪೊಲೀಸರು ನಟಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 24 January 25

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ