Gehana Vasisth: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ನಟಿ ಗೆಹನಾಗೆ ಮತ್ತೊಂದು ಸಂಕಷ್ಟ; ಬಂಧನದ ಭೀತಿ

Raj Kundra: ನಟಿ ಗೆಹನಾ ವಸಿಷ್ಠ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಇದರಿಂದಾಗಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

Gehana Vasisth: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ನಟಿ ಗೆಹನಾಗೆ ಮತ್ತೊಂದು ಸಂಕಷ್ಟ; ಬಂಧನದ ಭೀತಿ
ಗೆಹನಾ ವಸಿಷ್ಠ
Follow us
TV9 Web
| Updated By: shivaprasad.hs

Updated on:Aug 12, 2021 | 4:21 PM

ಅಶ್ಲೀಲ ಸಿನಿಮಾ ದಂಧೆಯಲ್ಲಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನಟಿ ಗೆಹನಾ ವಸಿಷ್ಠ ಅವರ ನಿರೀಕ್ಷಣಾ ಜಾಮೀನಿನ ಅರ್ಜಿಯನ್ನು ಮುಂಬೈನ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಮಲ್ವಾನಿ ಪೊಲೀಸ್ ಠಾಣೆಯಲ್ಲಿ ಗೆಹನಾ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಈ ಪ್ರಕರಣವನ್ನು ಮುಂಬೈ ಅಪರಾಧ ತಡೆ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಈ ಮೊದಲು ಗೆಹನಾ ಅಶ್ಲೀಲ ಚಿತ್ರದ ತಯಾರಿಕೆ ಮತ್ತು ನಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಕೂಡಾ ಬಂಧನಕ್ಕೊಳಗಾಗಿದ್ದು, ಅವರಿಗೆ ಇನ್ನೂ ಜಾಮೀನು ದೊರೆತಿಲ್ಲ.

ಎಎನ್​ಐ ಟ್ವೀಟ್:

ಅಶ್ಲೀಲ ಸಿನಿಮಾ ದಂಧೆಯಲ್ಲಿ ಗೆಹನಾ ನಟಿಸುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಅರೆಸ್ಟ್​ ಮಾಡಿದ್ದರು. ಈಗ ಜಾಮೀನಿನ ಮೇಲೆ ಅವರು ಹೊರಬಂದಿದ್ದಾರೆ. ತಾನು ನಟಿಸಿರುವುದು ಬೋಲ್ಡ್​ ಸಿನಿಮಾಗಳೇ ಹೊರತು ಅಶ್ಲೀಲ ಸಿನಿಮಾಗಳಲ್ಲ ಎಂಬುದು ಗೆಹನಾ ವಾದ. ಅದನ್ನೇ ಸಾಬೀತುಪಡಿಸುವ ಸಲುವಾಗಿ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದು ಜನರಿಗೆ ಮತ್ತು ತಮ್ಮನ್ನು ಅರೆಸ್ಟ್​ ಮಾಡಿದ್ದ ಪೊಲೀಸರಿಗೆ ಸವಾಲು ಹಾಕಿದ್ದರು.

‘ಬಟ್ಟೆಗಳನ್ನು ಧರಿಸದೇ ನಾನು ಲೈವ್​ ಬಂದಿದ್ದೇನೆ. ಆದರೂ ಕೂಡ ಇದನ್ನು ಪೋರ್ನ್​ ಎಂದು ಯಾರೂ ಹೇಳುತ್ತಿಲ್ಲ. ಆದರೆ ನಾನು ಬಟ್ಟೆ ಧರಿಸಿ ನಟಿಸಿದಾಗ ಅದನ್ನು ಕೆಲವರು ಅಶ್ಲೀಲ ಸಿನಿಮಾ ಎನ್ನುತ್ತಾರೆ. ಇದು ಬೂಟಾಟಿಕೆಯ ಉತ್ತುಂಗ’ ಎಂಬ ಕ್ಯಾಪ್ಷನ್​ನೊಂದಿಗೆ ಅವರು ಲೈವ್​ ಬಂದಿದ್ದರು.  ಅರೆಸ್ಟ್​ ಆಗುವುದನ್ನು ತಪ್ಪಿಸಲು ಪೊಲೀಸರು 15 ಲಕ್ಷ ಲಂಚ ಕೇಳಿದ್ದರು, ರಾಜ್​ ಕುಂದ್ರಾ ಹೆಸರನ್ನು ಉಲ್ಲೇಖಿಸುವಂತೆ ಒತ್ತಡ ಹೇರಿದ್ದರು ಎಂದು ಕೂಡ ಈ ಹಿಂದೆ ಗೆಹನಾ ಆರೋಪಿಸಿದ್ದರು.

ಇದನ್ನೂ ಓದಿ:

ಯುವ ನಟಿಯ ಖಾಸಗಿ​ ವಿಡಿಯೋ ಲೀಕ್​; ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ’ ಎಂದ ನಟಿ

ನಗ್ನವಾಗಿ ಲೈವ್​ ಬಂದ ನಟಿ ಗೆಹನಾ; ಜನರಿಗೆ ಸವಾಲು ಹಾಕಿದ ಅಶ್ಲೀಲ ಸಿನಿಮಾ ಆರೋಪಿ

(A mumbai Session Court rejects anticipatory bail application of Gehana Vasisth)

Published On - 4:15 pm, Thu, 12 August 21

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ