AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರು ಒಟ್ಟಾಗಿ ನಟಿಸೋಕೆ ಸಾಧ್ಯವಾಗಿಲ್ಲ. ಆಫರ್ ಬಂದರೂ ಅಕ್ಷಯ್ ಕುಮಾರ್ ಇದನ್ನು ಒಪ್ಪಿಕೊಳ್ಳುವುದಿಲ್ಲ. ಇದಕ್ಕೆ ಕಾರಣವಾಗಿರೋದು ಹಳೆಯ ಘಟನೆ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..
ಆಮಿರ್​-ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 1:03 PM

Share

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ (Aamir Khan) ಬಾಲಿವುಡ್​ನ ಸ್ಟಾರ್ ಹೀರೋಗಳು. ಇಬ್ಬರೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನೆ ಮೂಲಕ ಜನಮನ ಗೆದ್ದಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ವ್ಯತ್ಯಾಸ ಇದೆ. ಅಕ್ಷಯ್ ಕುಮಾರ್ (Akshay Kumar) ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡರೆ ಆಮಿರ್ ಖಾನ್ ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ. ಒಂದು ಸಿನಿಮಾ ಮುಗಿದ ಬಳಿಕವೇ ಅವರು ಮತ್ತೊಂದು ಚಿತ್ರವನ್ನು ಕೈಗೆತ್ತಿಕೊಳ್ಳುತ್ತಾರೆ. ಇವರು ಎಂದಿಗೂ ಒಟ್ಟಾಗಿ ತೆರೆ ಹಂಚಿಕೊಂಡಿಲ್ಲ.

ಅಕ್ಷಯ್ ಕುಮಾರ್ ಹಾಗೂ ಆಮಿರ್ ಖಾನ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರು ಒಟ್ಟಾಗಿ ನಟಿಸೋಕೆ ಸಾಧ್ಯವಾಗಿಲ್ಲ. ಆಫರ್ ಬಂದರೂ ಅಕ್ಷಯ್ ಕುಮಾರ್ ಇದನ್ನು ಒಪ್ಪಿಕೊಳ್ಳುವುದಿಲ್ಲ. ಇದಕ್ಕೆ ಕಾರಣವಾಗಿರೋದು ಹಳೆಯ ಘಟನೆ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಅದು 90ರ ದಶಕದ ಘಟನೆ. ಆಮಿರ್ ಖಾನ್ ಅವರು ‘ಜೋ ಜೀತಾ ವಹೀ ಸಿಖಂದರ್’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಈ ಚಿತ್ರವನ್ನು ಮನ್ಸೂರ್ ಖಾನ್ ನಿರ್ದೇಶನ ಮಾಡಿದ್ದರು. ಈ ಚಿತ್ರಕ್ಕೆ ಎರಡನೇ ಹೀರೋ ಅವಶ್ಯಕತೆ ಇತ್ತು. ಈ ಪಾತ್ರಕ್ಕಾಗಿ ಆಡಿಷನ್ ಕರೆಯಲಾಯಿತು. ಅಕ್ಷಯ್ ಕುಮಾರ್ ಕೂಡ ಈ ಪಾತ್ರಕ್ಕೆ ಆಡಿಷನ್ ನೀಡಿದರು. ಆದರೆ, ಕೊನೆಯಲ್ಲಿ ಆಯ್ಕೆ ಆಗಿದ್ದು ದೀಪಕ್ ತಿಜೋರಿ ಅವರು. ಇದು ಅಕ್ಷಯ್ ಕುಮಾರ್ ಅವರಿಗೆ ಬೇಸರ ತಂದಿತು.

ಅಕ್ಷಯ್ ಕುಮಾರ್​ಗೆ ಈ ಘಟನೆಯಿಂದ ಸಿಟ್ಟು ಬಂತು. ಆಮಿರ್ ಖಾನ್ ಹಾಗೂ ದೀಪಕ್ ಒಳ್ಳೆಯ ಗೆಳೆಯರಾಗಿದ್ದರು. ಈ ಕಾರಣದಿಂದಲೇ ಅಕ್ಷಯ್ ಕುಮಾರ್ ಅವರನ್ನು ಸೈಡ್​ಲೈನ್ ಮಾಡಲಾಯಿತು ಎನ್ನಲಾಗಿದೆ. ಈ ಘಟನೆ ಬಳಿಕ ಅವರು ಆಮಿರ್ ಖಾನ್ ಅವರ ಜೊತೆ ನಟಿಸದಿರಲು ನಿರ್ಧರಿಸಿದರು. ಅದನ್ನು ಈಗಲೂ ಅವರು ಪಾಲಿಸಿಕೊಂಡು ಬರುತ್ತಿದ್ದಾರೆ. ಅಕ್ಷಯ್ ಕುಮಾರ್ ಈಗ ಸ್ಟಾರ್ ಹೀರೋ ಆಗಿರಬಹುದು. ಆದರೆ, ಆ ಸಂದರ್ಭದಲ್ಲಿ ಅವರು ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಜೊತೆಗೆ ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ದರು. ಹೀಗಾಗಿ. ‘ಜೋ ಜೀತಾ ವಹೀ ಸಿಖಂದರ್’ ಸಿನಿಮಾ ಅವರಿಗೆ ತುಂಬಾನೇ ಮುಖ್ಯವಾಗಿತ್ತು.

ಇದನ್ನೂ ಓದಿ: ‘ರಸ್ತೆ ಯಾರಪ್ಪನದ್ದಲ್ಲ’; ಮತ್ತೆ ಮುನ್ನೆಲೆಗೆ ಬಂತು ಅಕ್ಷಯ್ ಕುಮಾರ್ ಹಳೆಯ ಜಾಹೀರಾತು

ಇನ್ನು ಪ್ರಶಸ್ತಿ ಸಮಾರಂಭದಲ್ಲಿ ಅಕ್ಷಯ್-ಆಮಿರ್ ಎದುರಾಗಲೇ ಇಲ್ಲ. ಇದಕ್ಕೆ ಕಾರಣವೂ ಇದೆ. ಆಮಿರ್ ಖಾನ್ ಅವರು ಎಂದಿಗೂ ಪ್ರಶಸ್ತಿ ಸಮಾರಂಭಕ್ಕೆ ಬರುವುದಿಲ್ಲ. ಹೀಗಾಗಿ, ಇವರು ಮುಖಾಮುಖಿ ಆಗುವ ಸಂದರ್ಭ ಎದುರಾಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು