ಬರ್ತ್​ಡೇ ದಿನ ಹೊಸ ಸಿನಿಮಾ ಘೋಷಣೆ ಮಾಡಿದ ಆಮಿರ್; ಸೂಪರ್ ಹಿಟ್ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ಆಮಿರ್​ ಖಾನ್ ಅವರು ಅಭಿಮಾನಿಗಳ ಜೊತೆ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ ‘ಅಂದಾಜ್ ಅಪ್ನಾ ಅಪ್ನಾ’ ಚಿತ್ರದ ಬಗ್ಗೆ ದೊಡ್ಡ ಮಾಹಿತಿ ನೀಡಿದ್ದಾರೆ. ‘ಅಂದಾಜ್ ಅಪ್ನಾ ಅಪ್ನಾ ಸಿನಿಮಾಗೆ ಸೀಕ್ವೆಲ್ ಬರಲಿದೆ. ರಾಜ್​ಕುಮಾರ್ ಸಂತೋಷಿ ಈ ಚಿತ್ರದ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಸದ್ಯ ಎಲ್ಲವೂ ಪ್ರಾಥಮಿಕ ಹಂತದಲ್ಲಿ ಇದೆ’ ಎಂದಿದ್ದಾರೆ ಆಮಿರ್ ಖಾನ್.

ಬರ್ತ್​ಡೇ ದಿನ ಹೊಸ ಸಿನಿಮಾ ಘೋಷಣೆ ಮಾಡಿದ ಆಮಿರ್; ಸೂಪರ್ ಹಿಟ್ ಚಿತ್ರಕ್ಕೆ ಬರಲಿದೆ ಸೀಕ್ವೆಲ್
ಆಮಿರ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on:Mar 15, 2024 | 7:05 AM

ಆಮಿರ್ ಖಾನ್ (Aamir Khan) ಅವರು ಗುರುವಾರ (ಮಾರ್ಚ್ 15) ಬರ್ತ್​ಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡಿಸ್’ ತಂಡದ ಜೊತೆ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈಗ ಅವರು ಬರ್ತ್​ಡೇ ದಿನ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಟ್ ಕ್ಲಾಸಿಕ್ ಎಂದೇ ಫೇಮಸ್ ಆಗಿರುವ ಕಾಮಿಡಿ ಸಿನಿಮಾ ‘ಅಂದಾಜ್ ಅಪ್ನಾ ಅಪ್ನಾ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ. ಖ್ಯಾತ ನಿರ್ದೇಶಕ ರಾಜ್​ಕುಮಾರ್ ಸಂತೋಷಿ ಅವರು ಈ ಸೀಕ್ವೆಲ್​ಗಾಗಿ ಕೆಲಸ ಮಾಡುತ್ತಿದ್ದಾರೆ.

ಆಮಿರ್​ ಖಾನ್ ಅವರು ಅಭಿಮಾನಿಗಳ ಜೊತೆ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾ ಬಗ್ಗೆ ದೊಡ್ಡ ಮಾಹಿತಿ ನೀಡಿದ್ದಾರೆ. ‘ಅಂದಾಜ್ ಅಪ್ನಾ ಅಪ್ನಾ ಸಿನಿಮಾಗೆ ಸೀಕ್ವೆಲ್ ಬರಲಿದೆ. ರಾಜ್​ಕುಮಾರ್ ಸಂತೋಷಿ ಈ ಚಿತ್ರದ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಸದ್ಯ ಎಲ್ಲವೂ ಪ್ರಾಥಮಿಕ ಹಂತದಲ್ಲಿ ಇದೆ’ ಎಂದಿದ್ದಾರೆ ಆಮಿರ್ ಖಾನ್.

1994ರಲ್ಲಿ ಅಂದರೆ 30 ವರ್ಷಗಳ ಹಿಂದೆ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರವನ್ನು ರಾಜ್​ಕುಮಾರ್ ಸಂತೋಷಿ ನಿರ್ದೇಶನ ಮಾಡಿದರೆ ವಿನಯ್ ಕುಮಾರ್ ಸಿನ್ಹಾ ನಿರ್ಮಾಣ ಮಾಡಿದ್ದರು. ಆಮಿರ್ ಖಾನ್ ಜೊತೆ ಸಲ್ಮಾನ್ ಖಾನ್, ರವೀನಾ ಟಂಡನ್, ಕರಿಶ್ಮಾ ಕಪೂರ್, ಪರೇಶ್ ರಾವಲ್ (ದ್ವಿಪಾತ್ರ) ಹಾಗೈ ಶಕ್ತಿ ಕಪೂರ್ ಸಿನಿಮಾದಲ್ಲಿ ನಟಿಸಿದ್ದರು. ಇದೇ ತಂಡ ಸೀಕ್ವೆಲ್​ನಲ್ಲೂ ಮುಂದುವರಿಯಲಿದೆಯೇ ಎನ್ನುವ ಪ್ರಶ್ನೆ ಫ್ಯಾನ್ಸ್​ನ ಕಾಡಿದೆ.

ಆಮಿರ್ ಖಾನ್ ಅವರು ಸದ್ಯ ‘ಸಿತಾರೇ ಜಮೀನ್ ಪರ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ವರ್ಷ ಕ್ರಿಸ್​ಮಸ್ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಕಳೆದ ಎಂಟು ವರ್ಷಗಳಲ್ಲಿ ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆಗುತ್ತಿರುವ ಮೊದಲ ಸಿನಿಮಾ ಇದು.

ಇದನ್ನೂ ಓದಿ: 1800 ಕೋಟಿ ರೂಪಾಯಿ ಒಡೆಯ ಆಮಿರ್ ಖಾನ್ ಬಳಿ ಇದೆ ಐದು ದುಬಾರಿ ವಸ್ತುಗಳು

‘ಲಾಲ್ ಸಿಂಗ್ ಚಡ್ಡಾ’ ರಿಲೀಸ್ ಬಳಿಕ ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದರು. ಕುಟುಂಬದ ಕಡೆ ಹೆಚ್ಚು ಗಮನ ಹರಿಸಿದರು. ಮಗಳ ಮದುವೆ ಮಾಡಿದರು. ಈಗ ಅವರು ‘ಸಿತಾರೇ ಜಮೀನ್​ಪರ್’ ಸಿನಿಮಾ ಮಾಡುತ್ತಿದ್ದಾರೆ. ಈ ಮೊದಲು ಮಾಡಿದ್ದ ‘ತಾರೆ ಜಮೀನ್​ಪರ್’ ಸಿನಿಮಾ ಸೂಪರ್ ಹಿಟ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:58 am, Fri, 15 March 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ