AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ ಪ್ರಕೃತಿ ವಿಕೋಪ: ಸಹಾಯ ಹಸ್ತ ಚಾಚಿದ ನಟ ಆಮಿರ್ ಖಾನ್

Aamir Khan: ನಟ ಆಮಿರ್ ಖಾನ್ ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಜನಪ್ರಿಯರು. ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತವನ್ನು ಆಮಿರ್ ಚಾಚಿದ್ದಾರೆ.

ಹಿಮಾಚಲ ಪ್ರದೇಶ ಪ್ರಕೃತಿ ವಿಕೋಪ: ಸಹಾಯ ಹಸ್ತ ಚಾಚಿದ ನಟ ಆಮಿರ್ ಖಾನ್
ಆಮಿರ್ ಖಾನ್
ಮಂಜುನಾಥ ಸಿ.
|

Updated on: Sep 24, 2023 | 11:53 AM

Share

ನಟ ಆಮಿರ್ ಖಾನ್ (Aamir Khan) ಸದ್ಯಕ್ಕೆ ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಫ್ಲಾಪ್ ಆದ ಬಳಿಕ ಬೇರೆ ಯಾವುದೇ ಸಿನಿಮಾಗಳನ್ನು ಆಮಿರ್ ಖಾನ್ ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಖಾಸಗಿ ಜೀವನದ ಬಗ್ಗೆ ಹೆಚ್ಚು ಗಮನವಹಿಸಿದ್ದಾರೆ. ಮಗಳ ಮದುವೆಗೆ ತಯಾರಿಯನ್ನೂ ಆರಂಭಿಸಿದ್ದಾರೆ. ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ನಟ ಆಮಿರ್ ಖಾನ್ ಇದೀಗ ಹಿಮಾಚಲ ಪ್ರದೇಶದ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಸತತ ಮಳೆ, ಪ್ರವಾಹ ಪರಿಸ್ಥಿತಿ, ಭೂಕುಸಿತಗಳಿಂದ ಹಿಮಾಚಲ ಪ್ರದೇಶ ತತ್ತರಿಸಿದ್ದು, ಕೋಟ್ಯಂತರ ಮೌಲ್ಯ ಆಸ್ತಿ, ಹಾಗೂ ಜೀವ ಹಾನಿಯೂ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಕೋಪಕ್ಕೆ ಈಡಾಗಿ ಸಮಸ್ಯೆಗೆ ಸಿಲುಕಿರುವ ಜನರ ಕಲ್ಯಾಣಕ್ಕಾಗಿ 25 ಲಕ್ಷ ರೂಪಾಯಿ ಹಣವನ್ನು ಆಮಿರ್ ಖಾನ್ ನೀಡಿದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಆಮಿರ್ ಖಾನ್ 25 ಲಕ್ಷ ರೂಪಾಹಿ ಹಣವನ್ನು ದೇಣಿಗೆ ನೀಡಿದ್ದಾರೆ. ತನ್ನ ರಾಜ್ಯದ ಜನರ ಸಹಾಯಕ್ಕೆ ದೇಣಿಗೆ ನೀಡಿರುವ ಆಮಿರ್ ಖಾನ್​ರ ವಿಶಾಲ ಹೃದಯವನ್ನು ಹಿಮಾಚಲ ಪ್ರದೇಶ ಸಿಎಂ ಠಾಕೂರ್ ಸುಖವಿಂದರ್ ಸಿಂಗ್ ಸುಖು ಕೊಂಡಾಡಿದ್ದಾರೆ. ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ರಾಜ್ಯಕ್ಕೆ ನೆರವಿನ ಹಸ್ತ ಚಾಚಿರುವ ಆಮಿರ್ ಖಾನ್​ಗೆ ಧನ್ಯವಾದ. ಸಿಎಂ ಪರಿಹಾರ ನಿಧಿಯ ಹಣವನ್ನು ವಿವೇಚನಾಯುಕ್ತವಾಗಿ ಬಳಸಿಕೊಳ್ಳಲಾಗುತ್ತದೆ, ಅದು ತೀರಾ ಅಗತ್ಯವಿರುವವರಿಗೆ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಮಾಚಲ ಪ್ರದೇಶದ ರಾಜಧಾನಿ ಸೇರಿದಂತೆ ಹಲವು ನಗರಗಳಲ್ಲಿ, ಪಟ್ಟಣಗಳಲ್ಲಿ ಭೂಕುಸಿತ ಉಂಟಾಗಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ಹಾನಿಯಾಗಿದೆ. ಭೂಕುಸಿತದಿಂದಾಗಿ ಹಲವರು ಜೀವ ಸಹ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರವು ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಮಾಡುತ್ತಿದೆ. ವಿಷಮ ಸ್ಥಿತಿಯಲ್ಲಿರುವ ರಾಜ್ಯಕ್ಕೆ ಆಮಿರ್ ಖಾನ್ ಸಣ್ಣ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ:ಲಾಲ್ ಸಿಂಗ್ ಚಡ್ಡಾ ನೋಡಿ ಓವರ್ ಆಕ್ಟಿಂಗ್ ಎಂದಿದ್ದ ರಾಜಮೌಳಿ, ಆಮಿರ್ ಖಾನ್ ಪ್ರತಿಕ್ರಿಯೆ ಏನಿತ್ತು?

ಸಿನಿಮಾ ವಿಷಯಕ್ಕೆ ಮರಳುವುದಾದರೆ ಆಮಿರ್ ಖಾನ್​, ಸದ್ಯಕ್ಕೆ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಅವರ ನಿರ್ಮಾಣ ಸಂಸ್ಥೆ ಕಡೆಯಿಂದ ಮಾಜಿ ಪತ್ನಿ ಕಿರಣ್ ರಾವ್, ‘ಲಾಪತಾ ಲೇಡೀಸ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಮಗಳು ಇರಾಳ ಹೊಸ ಸಿನಿಮಾಕ್ಕೂ ಆಮಿರ್ ಬಂಡವಾಳ ಹೂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಆಮಿರ್ ಖಾನ್ ಪುತ್ರಿ ಇರಾ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ನೂಪುರ್ ಶಿಖ್ರೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಇಬ್ಬರೂ ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದಾರೆ. ನೂಪುರ್ ದೈಹಿಕ ತರಬೇತಿದಾರರಾಗಿದ್ದಾರೆ. ಇಬ್ಬರೂ ಶೀಘ್ರವೇ ವಿವಾಹವಾಗಲಿದ್ದು, ವಿವಾಹದ ತಯಾರಿಯಲ್ಲಿ ಆಮಿರ್ ಖಾನ್ ಸಹ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?