AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್

ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಅವರು ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿದ 2ನೇ ಸಿನಿಮಾ ‘ಏಕ್ ದಿನ್’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಮೋಷನಲ್ ಆಗಿದ್ದಾರೆ. ಅವರು ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದೆ.

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್
Aamir Khan
ಮದನ್​ ಕುಮಾರ್​
|

Updated on: Apr 27, 2026 | 4:15 PM

Share

ಬಾಲಿವುಡ್ ನಟ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ (Junaid Khan) ವೃತ್ತಿಜೀವನದ ಬಗ್ಗೆ ಬಹಳ ಕಾಳಜಿ ಮತ್ತು ಹೆಮ್ಮೆ ಹೊಂದಿದ್ದಾರೆ. ಇತ್ತೀಚೆಗೆ ಜುನೈದ್ ನಟನೆಯ ‘ಏಕ್ ದಿನ್’ ಚಿತ್ರದ ಪ್ರಚಾರಕ್ಕಾಗಿ ಆಯೋಜಿಸಲಾಗಿದ್ದ ‘ಏಕ್ ದಿನ್ ಕಿ ಮೆಹ್ಫಿಲ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಲ್ಲರ ಎದುರು ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಆಮಿರ್ ಖಾನ್ (Aamir Khan) ಅವರು ಸಿನಿಮಾದ ತುಣುಕೊಂದನ್ನು ನೋಡುತ್ತಾ ಭಾವುಕರಾಗಿರುವುದು ಕಂಡುಬಂದಿದೆ. ಅಳು ತಡೆಯಲಾಗದೆ ತಮ್ಮ ಶರ್ಟ್‌ನಿಂದಲೇ ಕಣ್ಣೀರನ್ನು ಒರೆಸಿಕೊಂಡಿದ್ದಾರೆ. ಈ ವೇಳೆ ಪಕ್ಕದಲ್ಲೇ ಕುಳಿತಿದ್ದ ನಟಿ ಸಾಯಿ ಪಲ್ಲವಿ (Sai Pallavi) ಮತ್ತು ಮಗ ಜುನೈದ್ ಅವರು ಆಮಿರ್ ಅವರನ್ನು ಸಮಾಧಾನಪಡಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಅವರ ಅಭಿನಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ ಆಮಿರ್, ‘ಸಾಯಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಅವರ ನಟನೆ ನೋಡಿ ನೀವು ಬೆರಗಾಗುತ್ತೀರಿ. ನನ್ನ ಪ್ರಕಾರ, ಇಂದು ನಮ್ಮ ದೇಶದಲ್ಲಿರುವ ಅತ್ಯುತ್ತಮ ನಟಿಯರಲ್ಲಿ ಸಾಯಿ ಪಲ್ಲವಿ ಅಗ್ರಸ್ಥಾನದಲ್ಲಿದ್ದಾರೆ’ ಎಂದು ಹೊಗಳಿದರು. ಆಮಿರ್ ಹೇಳಿದ ಈ ಮಾತು ಕೇಳಿ ಸಾಯಿ ಪಲ್ಲವಿ ಮುಗುಳ್ನಗುತ್ತಾ ಧನ್ಯವಾದ ಅರ್ಪಿಸಿದರು.

ಮಗ ಜುನೈದ್ ಖಾನ್ ಅಭಿನಯದ ಬಗ್ಗೆ ಮಾತನಾಡಿದ ಆಮಿರ್, ‘ಜುನೈದ್ ಕೂಡ ಪರವಾಗಿಲ್ಲ ಎಂಬಂತೆ ನಟಿಸಿದ್ದಾನೆ. ಅವನು ನನ್ನ ಮಗನಾದ್ದರಿಂದ ನಾನು ಹೆಚ್ಚು ಹೊಗಳಲು ಸಾಧ್ಯವಿಲ್ಲ. ಆದರೆ ಚಿತ್ರದ ಎಲ್ಲಾ ಕಲಾವಿದರು ಅದ್ಭುತವಾಗಿ ಕೆಲಸ ಮಾಡಿದ್ದಾರೆ’ ಎಂದು ತಮಾಷೆಯಾಗಿ ಹೇಳಿದರು. ಅಲ್ಲದೆ, ಚಿತ್ರದ ಶೀರ್ಷಿಕೆ ಗೀತೆಯನ್ನು ಆಮಿರ್ ವೇದಿಕೆಯ ಮೇಲೆ ಹಾಡಿ ರಂಜಿಸಿದರು.

‘ಏಕ್ ದಿನ್’ ಸಿನಿಮಾದಲ್ಲಿ ಜುನೈದ್ ಖಾನ್ ಮತ್ತು ಸಾಯಿ ಪಲ್ಲವಿ ಅವರು ಜೋಡಿಯಾಗಿ ನಟಿಸಿದ್ದಾರೆ. ಸಾಯಿ ಪಲ್ಲವಿಗೆ ಇದು ಚೊಚ್ಚಲ ಬಾಲಿವುಡ್ ಸಿನಿಮಾ. ಸುನಿಲ್ ಪಾಂಡೆ ಅವರು ನಿರ್ದೇಶನ ಮಾಡಿದ್ದಾರೆ. ಇದು 2016ರ ಜನಪ್ರಿಯ ಥಾಯ್ ಸಿನಿಮಾದ (ಒನ್ ಡೇ) ಅಧಿಕೃತ ರಿಮೇಕ್. ತನ್ನ ಸಹೋದ್ಯೋಗಿಯನ್ನು ಪ್ರೀತಿಸುವ ಯುವಕನೊಬ್ಬ, ಕೇವಲ ಒಂದು ದಿನ ಅವಳೊಂದಿಗೆ ಕಾಲ ಕಳೆಯುವ ಅವಕಾಶ ಸಿಕ್ಕಾಗ ಏನಾಗುತ್ತದೆ ಎಂಬುದು ಚಿತ್ರದ ಕಥಾಹಂದರ.

ಇದನ್ನೂ ಓದಿ: ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು?

ಚಿತ್ರವು ಮೇ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ವಿಶೇಷವೆಂದರೆ ಚಿತ್ರದ ಮುಂಗಡ ಬುಕ್ಕಿಂಗ್ ಬಿಡುಗಡೆಗೆ 39 ದಿನಗಳ ಮೊದಲೇ ಆರಂಭವಾಗಿದೆ. ಜುನೈದ್ ಖಾನ್ ಅವರ ಮೊದಲ ಸಿನಿಮಾ ‘ಲವ್ಯಾಪ’ ಬಾಕ್ಸ್ ಆಫೀಸ್‌ನಲ್ಲಿ ವಿಫಲವಾಗಿದ್ದರಿಂದ, ಈ ಎರಡನೇ ಸಿನಿಮಾದ ಮೂಲಕ ಅವರು ಗೆಲುವು ಕಾಣುವುದು ಅನಿವಾರ್ಯ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ
ಬಿಬಿಎಂಪಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಭೈರೇಗೌಡ
ಬಿಬಿಎಂಪಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಭೈರೇಗೌಡ
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?