AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

Aamir Khan Remuneration: ಆಮಿರ್​ ಖಾನ್​ ಅವರು ಪ್ರತಿ ಚಿತ್ರಕ್ಕೆ ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಿಂದಲೂ ಅವರಿಗೆ ದೊಡ್ಡ ಮೊತ್ತದ ಸಂಬಳ ಸಿಕ್ಕಿದೆ.

‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?
ಆಮಿರ್ ಖಾನ್​, ಕರೀನಾ ಕಪೂರ್​ ಖಾನ್​, ನಾಗ ಚೈತನ್ಯ
TV9 Web
| Updated By: ಮದನ್​ ಕುಮಾರ್​|

Updated on: Apr 25, 2022 | 8:29 AM

Share

ಬಾಲಿವುಡ್​ ನಟ ಆಮಿರ್ ಖಾನ್​ ((Aamir Khan) ಅಭಿನಯದ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಕುತೂಹಲ ನಿರ್ಮಾಣ ಆಗಿದೆ. ಇದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​. ಮೂಲ ಚಿತ್ರದಲ್ಲಿ ಖ್ಯಾತ ನಟ ಟಾಮ್​ ಹ್ಯಾಂಕ್ಸ್​ ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್​ ಖಾನ್​ ಮಾಡಿದ್ದಾರೆ. ಈ ಹಿಂದಿನ ಅನೇಕ ಸಿನಿಮಾಗಳಲ್ಲಿ ವಿವಿಧ ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದ ಅವರು ಈ ಬಾರಿ ಕೂಡ ಭಿನ್ನ ಅವತಾರದಲ್ಲಿ ಅಭಿಮಾನಿಗಳ ಎದುರು ಬರಲಿದ್ದಾರೆ. ಕಾರಣಾಂತರಗಳಿಂದ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಚಿತ್ರದ ರಿಲೀಸ್​ ದಿನಾಂಕ ಎರಡೆರಡು ಬಾರಿ ಮುಂದಕ್ಕೆ ಹೋಗಿತ್ತು. ಅಂತಿಮವಾಗಿ ಆ.11ರಂದು ಈ ಚಿತ್ರ ತೆರೆಕಾಣಲಿದೆ. ಈ ಸಿನಿಮಾಗಾಗಿ ಆಮಿರ್​ ಖಾನ್​ ಅವರು ದೊಡ್ಡ ಮೊತ್ತದ ಸಂಭಾವನೆ (Aamir Khan Remuneration) ಪಡೆದುಕೊಂಡಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾದರೂ ಹೀಗೊಂದು ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ಆಮಿರ್​ ಖಾನ್​ ಅವರು ಬರೋಬ್ಬರಿ 50 ಕೋಟಿ ರೂಪಾಯಿ ಸಂಬಳವನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ. ಹಾಗಾದರೆ ಇನ್ನುಳಿದ ಕಲಾವಿದರಿಗೆ ಎಷ್ಟು ನೀಡಲಾಗಿದೆ? ಇಲ್ಲಿದೆ ವಿವರ..

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ಅವರು ಕೂಡ ಬಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. ತುಂಬು ಗರ್ಭಿಣಿ ಆಗಿದ್ದಾಗಲೂ ಸಹ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಅವರ ಪಾತ್ರವೂ ಈ ಚಿತ್ರದ ಕಥೆಯಲ್ಲಿ ಹೆಚ್ಚು ಹೈಲೈಟ್​ ಆಗಲಿದೆ. ಕರೀನಾ ಕಪೂರ್​ ಖಾನ್​ ಅವರಿಗೆ 8 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂಬ ಮಾತು ಕೇಳಿಬಂದಿದೆ.

ಅದೇ ರೀತಿ, ದಕ್ಷಿಣ ಭಾರತದ ಸ್ಟಾರ್​ ನಟ ನಾಗ ಚೈತನ್ಯ ಅವರಿಗೂ ಈ ಸಿನಿಮಾದಲ್ಲೊಂದು ಗಮನಾರ್ಹ ಪಾತ್ರ ಇದೆ. ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಆಮಿರ್​ ಖಾನ್​ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರಿಗೆ 6 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ಮೋನಾ ಸಿಂಗ್​ ಅವರಿಗೆ 2 ಕೋಟಿ ರೂಪಾಯಿ, ಮನವ್​ ವಿಜ್​ ಅವರಿಗೆ 1 ಕೋಟಿ ರೂಪಾಯಿ ನೀಡಲಾಗಿದೆ.

ಏ.28ರಂದು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಸೋಶಿಯಲ್​ ಮಿಡಿಯಾದಲ್ಲಿ ಅನೇಕರು ಈ ಕುರಿತು ಪೋಸ್ಟ್​ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹಾಲಿವುಡ್​ ಸಿನಿಮಾವನ್ನು ನಿರ್ದೇಶಕ ಅದ್ವೈತ್​ ಚಂದನ್​ ಅವರು ಹಿಂದಿ ಸೊಗಡಿಗೆ ಹೇಗೆ ರಿಮೇಕ್​ ಮಾಡಿರಬಹುದು ಎಂಬುದನ್ನು ತಿಳಿಯುವ ಕುತೂಹಲ ನಿರ್ಮಾಣ ಆಗಿದೆ.

ಇನ್ನು, ಆಮಿರ್​ ಖಾನ್​ ಅವರ ಮುಂದಿನ ಸಿನಿಮಾ ಬಗ್ಗೆಯೂ ಅಭಿಮಾನಿಗಳಲ್ಲಿ ಕೌತುಕ ಮೂಡಿದೆ. ‘ಲಾಲ್​ ಸಿಂಗ್​ ಚಡ್ಡಾ’ ಬಳಿಕ ಅವರು ಕ್ರೀಡೆ ಹಿನ್ನೆಲೆಯ ಕಥೆಯುಳ್ಳ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗುತ್ತಿದೆ. ಆ ಕುರಿತು ಸಹ ಆಮಿರ್​ ಖಾನ್​ ಅವರು ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ:

ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?

‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!