ಸಿನಿಮಾಗೆ ಬಹಿಷ್ಕಾರದ ಭಯ; ರಾಷ್ಟ್ರ ಧ್ವಜದ ಡಿಪಿ ಹಾಕಿದ ಆಮಿರ್ ಖಾನ್ ನಿರ್ಮಾಣ ಸಂಸ್ಥೆ

‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಸ್ವತಃ ನಟ ಆಮಿರ್ ಖಾನ್ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಬಿಡುಗಡೆ ಹೊಸ್ತಿಲಿನಲ್ಲಿ ಬಹಿಷ್ಕಾರದ ಬಿಸಿ ತಟ್ಟುವ ಸೂಚನೆ ಸಿಕ್ಕಿದೆ. ಇದರಿಂದ ತಪ್ಪಿಸಿಕೊಳ್ಳಲಿ ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಸಂಸ್ಥೆಯು ಕೆಲವು ಉಪಾಯಗಳನ್ನು ಮಾಡುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಿನಿಮಾಗೆ ಬಹಿಷ್ಕಾರದ ಭಯ; ರಾಷ್ಟ್ರ ಧ್ವಜದ ಡಿಪಿ ಹಾಕಿದ ಆಮಿರ್ ಖಾನ್ ನಿರ್ಮಾಣ ಸಂಸ್ಥೆ
Aamir Khan Productions

Updated on: May 16, 2025 | 7:32 PM

ನಟ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಜೂನ್ 20ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಈ ಸಿನಿಮಾವನ್ನು ಬಾಯ್ಕಾಟ್ (Boycott) ಮಾಡಬೇಕು ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಮಾಡುತ್ತಿದ್ದಾರೆ. ಇದರಿಂದ ಆಮಿರ್ ಖಾನ್ ಅವರಿಗೆ ಟೆನ್ಷನ್ ಶುರುವಾಗಿದೆ. ಈ ಮೊದಲು ಕೂಡ ಅವರ ವಿರುದ್ಧ ಇದೇ ರೀತಿ ಅಭಿಪ್ರಾಯ ವ್ಯಕ್ತವಾಗಿತ್ತು. ಈಗ ಮತ್ತೆ ಅವರ ವಿರುದ್ಧ ನೆಟ್ಟಿಗರು ಅಸಮಾಧಾನಗೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಆಮಿರ್ ಖಾನ್ (Aamir Khan) ನಿರ್ಮಾಣ ಸಂಸ್ಥೆಯು ರಾಷ್ಟ್ರ ಧ್ವಜದ ಮೊರೆ ಹೋಗಿದೆ!

ಬಹಿಷ್ಕಾರಕ್ಕೆ ಕಾರಣ ಏನು? ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಶುರುವಾಯಿತು. ಈ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ನೀಡಿದೆ. 2020ರಲ್ಲಿ ಆಮಿರ್ ಖಾನ್ ಅವರು ಟರ್ಕಿಗೆ ಭೇಟಿ ನೀಡಿ ಅಲ್ಲಿನ ಪ್ರಮುಖರನ್ನು ಭೇಟಿ ಮಾಡಿದ್ದರು. ಟರ್ಕಿ ಜೊತೆ ಇಂಥ ನಂಟು ಹೊಂದಿರುವ ಆಮಿರ್ ಖಾನ್ ಅವರ ಸಿನಿಮಾವನ್ನು ಬಹಿಷ್ಕರಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ. ಹಳೇ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಸದ್ಯಕ್ಕಂತೂ ದೇಶಭಕ್ತಿಯ ವಿಷಯ ಹೆಚ್ಚು ಚರ್ಚೆ ಆಗುತ್ತಿದೆ. ಇದೇ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಕೇಳಿಬರುತ್ತಿದೆ. ಇದನ್ನು ಶಮನಗೊಳಿಸಲು ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆಯು ತನ್ನ ಎಲ್ಲ ಸೋಶಿಯಲ್ ಮೀಡಿಯಾ ಖಾತೆಯ ಡಿಪಿಯಲ್ಲಿ ಭಾರತದ ಧ್ವಜದ ಚಿತ್ರವನ್ನು ಹಾಕಿದೆ.

ಡ್ಯಾಮೇಜ್ ಕಂಟ್ರೋಲ್ ಸಲುವಾಗಿ ಈ ರೀತಿ ತಂತ್ರ ಮಾಡಲಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಅಂತಿಮವಾಗಿ ‘ಸಿತಾರೆ ಜಮೀನ್ ಪರ್’ ಸಿನಿಮಾದ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕು. ಇದು ರಿಮೇಕ್ ಸಿನಿಮಾ ಎಂಬ ಕಾರಣದಿಂದಲೂ ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಆಮಿರ್ ಖಾನ್ ಅವರು ಬಾಸ್ಕೆಟ್ ಬಾಲ್ ಕೋಚ್ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಕಥೆ ಕದ್ದ ಆಮಿರ್ ಖಾನ್? ‘ಸಿತಾರೆ ಜಮೀನ್ ಪರ್’ ಸಿನಿಮಾ ಮೇಲೆ ಬಂತು ಆರೋಪ

ಆಮಿರ್ ಖಾನ್ ನಟಿಸಿದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ 2022ರ ಆಗಸ್ಟ್​ 11ರಂದು ಬಿಡುಗಡೆ ಆಗಿತ್ತು. ಆ ಚಿತ್ರಕ್ಕೆ ಜನರು ಆಸಕ್ತಿ ತೋರಿಸಲಿಲ್ಲ. ಹಾಗಾಗಿ ಬಾಕ್ಸ್ ಆಫೀಸ್​ನಲ್ಲಿ ಸೋಲು ಉಂಟಾಯಿತು. ಈಗ ಮೂರು ವರ್ಷಗಳ ಬಳಿಕ ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಮೂಲಕ ಮತ್ತೆ ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.