Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಹೀನಾಯ ಸೋಲು; ಆಮಿರ್​ ಖಾನ್​ಗೆ ಶುರುವಾಯ್ತಾ ಡಿಪ್ರೆಷನ್​?

Laal Singh Chaddha Box Office Collection: ಆಮಿರ್​ ಖಾನ್​ ಅವರು ಬಣ್ಣದ ಲೋಕದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ಹಾಗಿದ್ದರೂ ಕೂಡ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲು ಅವರನ್ನು ಚಿಂತೆಗೀಡು ಮಾಡಿದೆ.

Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಹೀನಾಯ ಸೋಲು; ಆಮಿರ್​ ಖಾನ್​ಗೆ ಶುರುವಾಯ್ತಾ ಡಿಪ್ರೆಷನ್​?
ಆಮಿರ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 16, 2022 | 7:17 AM

ನಟ ಆಮಿರ್​ ಖಾನ್​ (Aamir Khan) ಅವರಿಗೆ ಸದ್ಯಕ್ಕೆ ಯಾಕೋ ಟೈಮ್​ ಚೆನ್ನಾಗಿಲ್ಲ. ಕಷ್ಟಪಟ್ಟು ಮಾಡಿದ ಕೆಲಸಕ್ಕೆ ಸೂಕ್ತ ಪ್ರತಿಫಲ ಸಿಗುತ್ತಿಲ್ಲ. ದೇಶಾದ್ಯಂತ ಅವರ ಸಿನಿಮಾವನ್ನು ಬಹಿಷ್ಕಾರ ಮಾಡುವ ಟ್ರೆಂಡ್​ ಜಾರಿಯಲ್ಲಿದೆ. ಈ ಹಿಂದೆ ಅಸಹಿಷ್ಣತೆ ಬಗ್ಗೆ ಅವರು ನೀಡಿದ್ದ ಹೇಳಿಕೆಗೆ ಇನ್ನೂ ವಿರೋಧ ವ್ಯಕ್ತವಾಗುತ್ತಲೇ ಇದೆ. ಎಲ್ಲದರ ಪರಿಣಾಮವಾಗಿ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾ ಸೋತಿದೆ. ಆಗಸ್ಟ್​ 11ರಂದು ಈ ಚಿತ್ರ ದೇಶಾದ್ಯಂತ ರಿಲೀಸ್​ ಆಯಿತು. ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಈ ಸಿನಿಮಾಗೆ ಸಾಧ್ಯವಾಗಿಲ್ಲ. ಇದು ಆಮಿರ್​ ಖಾನ್​ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಸೋಲಿನ ಬೆನ್ನಲ್ಲೇ ಆಮಿರ್​ ಖಾನ್​ ಬಗ್ಗೆ ಒಂದಷ್ಟು ಗಾಸಿಪ್​ಗಳು ಕೇಳಿಬರುತ್ತಿವೆ. ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ಹೀನಾಯವಾಗಿ ಸೋತಿದ್ದರಿಂದ ಅವರು ಖಿನ್ನತೆಗೆ (Depression) ಒಳಗಾಗಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಆಮಿರ್​ ಖಾನ್​ ಅವರ ಆಪ್ತ ಮೂಲಗಳಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಚಿತ್ರರಂಗದಲ್ಲಿ ಸೋಲು-ಗೆಲುವು ಸಹಜ. ಆಮಿರ್​ ಖಾನ್​ ಕೂಡ ಬಣ್ಣದ ಲೋಕದಲ್ಲಿ ಹಲವು ಬಾರಿ ಏಳು-ಬೀಳುಗಳನ್ನು ಕಂಡಿದ್ದಾರೆ. ಹಾಗಿದ್ದರೂ ಕೂಡ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಸೋಲು ಅವರನ್ನು ಚಿಂತೆಗೀಡು ಮಾಡಿದೆ. ಸಿನಿಮಾ ಚೆನ್ನಾಗಿಲ್ಲದೇ ಸೋತರೆ ಒಂದು ಅರ್ಥ ಇರುತ್ತದೆ. ಆದರೆ ಬಹಿಷ್ಕಾರದ ಕಾರಣದಿಂದ ಸಿನಿಮಾ ಸೋತಿರುವುದು ಅವರಿಗೆ ಸಖತ್​ ಬೇಸರ ತರಿಸಿದೆ ಎಂದು ಹೇಳಲಾಗುತ್ತಿದೆ.

ಹಾಲಿವುಡ್​ನಲ್ಲಿ ಸೂಪರ್​ ಹಿಟ್​ ಆಗಿದ್ದ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಮೂಡಿಬಂದಿದೆ. ಈ ಸಿನಿಮಾದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ಅಭಿನಯಿಸಿದ್ದಾರೆ. ಟಾಲಿವುಡ್​ ಸ್ಟಾರ್​ ನಟ ನಾಗ ಚೈತನ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಯಾರಿಂದಲೂ ಈ ಚಿತ್ರವನ್ನು ಸೇವ್​ ಮಾಡಲು ಸಾಧ್ಯವಾಗಿಲ್ಲ.

ಇದನ್ನೂ ಓದಿ
Image
Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

ಸಿನಿಮಾ ಸೋತ ಬಳಿಕ ಆಮಿರ್​ ಖಾನ್​ ಅವರಿಗೆ ಡಿಪ್ರೆಷನ್​ ಶುರುವಾಗಿದೆ. ಅವರು ಒಂಟಿಯಾಗಿ ಇರುತ್ತಿದ್ದಾರೆ. ಮಾಧ್ಯಮದವರ ಫೋನ್​ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದೆಲ್ಲ ಗಾಸಿಪ್​ ಹಬ್ಬಿದೆ. ಸೋಲಿನ ಕುರಿತು ಅವರು ಇನ್ನಷ್ಟೇ ಮೌನ ಮುರಿಯಬೇಕಿದೆ. ಮೊದಲ ನಾಲ್ಕು ದಿನಕ್ಕೆ ಈ ಸಿನಿಮಾ ಗಳಿಸಿದ್ದು 37 ಕೋಟಿ ರೂಪಾಯಿ ಮಾತ್ರ. ಆಮಿರ್​ ಖಾನ್​ ಅವರಂತಹ ಸ್ಟಾರ್​ ನಟರ ಚಿತ್ರಕ್ಕೆ ಈ ಮೊತ್ತ ತೀರಾ ಚಿಕ್ಕದು. ಬಾಕ್ಸ್​ ಆಫೀಸ್​ನಲ್ಲಿ ಸೋತಿದ್ದು ಮಾತ್ರವಲ್ಲದೇ ಒಂದಷ್ಟು ವಿವಾದಗಳನ್ನು ಕೂಡ ಈ ಸಿನಿಮಾ ಮಾಡಿಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ