AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಗೌರಿಯನ್ನು ಮದುವೆಯಾಗಿ ಆಗಿದೆ’; ಶಾಕಿಂಗ್ ಅಪ್​ಡೇಟ್ ಕೊಟ್ಟ ಆಮಿರ್ ಖಾನ್

ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ಇದ್ದಾರೆ. ಅವರು ಬೆಂಗಳೂರಿನ ಗೌರಿ ಎಂಬ ಮಹಿಳೆಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.ಅವರು ಈಗ ಮೂರನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ಎರಡು ವಿಚ್ಛೇದನಗಳ ನಂತರವೂ, ಅವರು ತಮ್ಮ ಸಂಬಂಧವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.

‘ನಾನು ಗೌರಿಯನ್ನು ಮದುವೆಯಾಗಿ ಆಗಿದೆ’; ಶಾಕಿಂಗ್ ಅಪ್​ಡೇಟ್ ಕೊಟ್ಟ ಆಮಿರ್ ಖಾನ್
ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 09, 2025 | 7:31 AM

Share

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ (Aamir Khan) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. 90 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾದ ‘ಸಿತಾರೆ ಜಮೀನ್ ಪರ್’ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬೀಗುತ್ತಿದೆ. ಈಗ ಅವರು ತಮ್ಮ ಮೂರನೇ ಮದುವೆ ಬಗ್ಗೆ ಒಂದು ದೊಡ್ಡ ಅಪ್​​ಡೇಟ್ ನೀಡಿದ್ದಾರೆ. 2 ವಿಚ್ಛೇದನಗಳ ನಂತರ, ಅವರು ಬೆಂಗಳೂರು ಮೂಲದ ಗೌರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಆಮಿರ್  ಅವರು ಗೌರಿಯನ್ನು ಮದುವೆಯಾಗಿರುವುದಾಗಿ ಬಹಿರಂಗಪಡಿಸಿದ್ದಾರೆ.

ಆಮಿರ್ ಖಾನ್ ತಮ್ಮ 60 ನೇ ಹುಟ್ಟುಹಬ್ಬದಂದು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಮಾಧ್ಯಮಗಳಿಗೆ ಪರಿಚಯಿಸಿದರು. ಅದಾದ ನಂತರ, ಇಬ್ಬರೂ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರು ಮುಚ್ಚುಮರೆ ಮಾಡದೆ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಚಿತ್ರದ ಪ್ರದರ್ಶನದ ಸಮಯದಲ್ಲಿಯೂ ಸಹ, ಅವರು ಕೈ ಹಿಡಿದು ಕ್ಯಾಮೆರಾ ಮುಂದೆ ಪೋಸ್ ನೀಡಿದ್ದಾರೆ. ಈಗ ಮೊದಲ ಬಾರಿಗೆ, ಆಮಿರ್ ಮದುವೆಯ ಪ್ರಶ್ನೆಯ ಬಗ್ಗೆ ಮೌನ ಮುರಿದಿದ್ದಾರೆ.

ಇದನ್ನೂ ಓದಿ: ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್; ಇಲ್ಲಿದೆ ನಾಮಕರಣ ಶಾಸ್ತ್ರದ ಫೋಟೋ

ಇದನ್ನೂ ಓದಿ
Image
ನಿರ್ದೇಶಕನ ಜೊತೆಗಿನ ಪ್ರೀತಿ ವಿಚಾರವನ್ನು ಖಚಿತಪಡಿಸಿದ ಸಮಂತಾ; ಕ್ಯೂಟ್ ಫೋಟೋ
Image
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ
Image
ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಗೌರಿ ಮತ್ತು ನಾನು ಪ್ರೀತಿ ವಿಚಾರದಲ್ಲಿ ಗಂಭೀರವಾಗಿದ್ದೇವೆ. ನನ್ನ ಹೃದಯದಲ್ಲಿ ನಾನು ಈಗಾಗಲೇ ಗೌರಿಯನ್ನು ಮದುವೆಯಾಗಿದ್ದೇನೆ. ಅದನ್ನು ಔಪಚಾರಿಕಗೊಳಿಸಬೇಕೆ ಅಥವಾ ಬೇಡವೇ ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ’ ಎಂದು ಅವರು ಹೇಳಿದ್ದಾರೆ. ಆಮಿರ್ ಖಾನ್ ಹೇಳಿಕೆ ವೈರಲ್ ಆಗುತ್ತಿದೆ.

ಎರಡು ಬಾರಿ ವಿಚ್ಛೇದನ

ಆಮಿರ್ ಖಾನ್ ಮೊದಲು ರೀನಾ ದತ್ತ ಅವರನ್ನು ವಿವಾಹವಾದರು. ಇಬ್ಬರೂ 1986ರಲ್ಲಿ ನ್ಯಾಯಾಲಯದ ಸಮ್ಮುಖದಲ್ಲಿ ಈ ಮದುವೆ ನಡೆಯಿತು. 2002ರಲ್ಲಿ ಇವರು ವಿಚ್ಛೇದನ ಪಡೆದರು. ನಂತರ, ಅವರು 2005ರಲ್ಲಿ ಕಿರಣ್ ರಾವ್ ಅವರನ್ನು ಆಮಿರ್ ವಿವಾಹವಾದರು. ಆದರೆ ಈ ಸಂಬಂಧವೂ ಹೆಚ್ಚು ಕಾಲ ಉಳಿಯಲಿಲ್ಲ, 2021 ರಲ್ಲಿ ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ಆಮಿರ್ ಅವರ ಮೊದಲ ಮದುವೆಯಿಂದ ಜುನೈದ್ ಮತ್ತು ಇರಾ ಎಂಬ ಇಬ್ಬರು ಮಕ್ಕಳಿದ್ದಾರೆ. ಎರಡನೇ ಮದುವೆಯಿಂದ ಒಬ್ಬ ಮಗನಿದ್ದು, ಆಜಾದ್ ಎಂದು ಹೆಸರು ಇಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ